ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕೇಸ್, ಮುಖ್ಯ ನ್ಯಾಯಮೂರ್ತಿಗೆ ಪ್ರಕರಣ ವರ್ಗಾಯಿಸಿದ ದ್ವಿಸದಸ್ಯ ಪೀಠ!

Published : Aug 30, 2022, 04:15 PM IST
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕೇಸ್, ಮುಖ್ಯ ನ್ಯಾಯಮೂರ್ತಿಗೆ ಪ್ರಕರಣ ವರ್ಗಾಯಿಸಿದ ದ್ವಿಸದಸ್ಯ ಪೀಠ!

ಸಾರಾಂಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ಇದೀಗ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದೆ. ಭಿನ್ನ ಅಭಿಪ್ರಾಯ ವ್ಯಕ್ತವಾದ ಕಾರಣ ಈ ಪ್ರಕರಣ ಇದೀಗ ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಲಾಗಿದೆ.

ನವದೆಹಲಿ(ಆ.30): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದರ ಕುರಿತು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಆದರೆ ದ್ವಿಸದಸ್ಯ ಪೀಠದ ಇಬ್ಬರು ನ್ಯಾಯಮೂರ್ತಿಗಳ ತದ್ವಿರುದ್ಧ್ ಅಭಿಪ್ರಾಯವಾಗಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ದ್ವಿದಸ್ಯ ಪೀಠ, ಸುಪ್ರೀಂ ಕೋರ್ಟ್ ಮುಖ್ಯನ್ಯಾಮೂರ್ತಗೆ ವರ್ಗಾಯಿಸಿದೆ. ಆದರೆ ಸುಪ್ರೀಂ ಕೋರ್ಟ್ ಸಿಜೆಐ ಯುಯು ಲಿಲಿತ್ ಬೇರೆ ಪ್ರಕರಣದ ವಿಚಾರಣೆ ಜವಾಬ್ದಾರಿ ಇರುವ ಕಾರಣ ಬೇರೆ ಪೀಠಕ್ಕೆ ವರ್ಗಾಯಿಸಿದ್ದಾರೆ. ಇಷ್ಟೇ ಅಲ್ಲ ಇಂದೇ ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.  ನ್ಯಾ.ಹೇಮಂತ್‌ ಗುಪ್ತಾ ಹಾಗು ಶುಧಾಂಶು ಧುಲಿಯಾ ದ್ವಿಸದಸ್ಯ ಪೀಠ ಈ ಪ್ರಕರಣ ವಿಚಾರಣೆ ನಡೆಸಿತ್ತು. ಆದರೆ ಇಬ್ಬರು ನ್ಯಾಯಮೂರ್ತಿಗಳು ಬೇರೆ ಬೇರೆ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣ, ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗೆ ವರ್ಗಾಯಿಸಿದ್ದರು. 

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಕೋರಿ ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿರುವ ಮನವಿಗಳನ್ನು ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸಲು ಸರ್ಕಾರಕ್ಕೆ ಅಧಿಕಾರ ಒದಗಿಸಿ ಕರ್ನಾಟಕ ಹೈಕೋರ್ಚ್‌ ವಿಭಾಗೀಯ ಪೀಠ ಆದೇಶ ನೀಡಿತ್ತು. ಈ ಆದೇಶ ಹಿಂದೂ ಸಮುದಾಯಕ್ಕೆ ಸಂತಸ ತಂದಿದ್ದರೆ, ಮುಸ್ಲಿಮ್ ಸಮುದಾಯ ಹಾಗೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್‌ ಆಫ್‌ ಕರ್ನಾಟಕ, ಕರ್ನಾಟಕ ವಕ್ಫ್ ಬೋರ್ಡ್‌  ಸುಪ್ರೀಂ ಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿತ್ತು.  ನಾಳೆ(ಆ.31) ದೇಶಾದ್ಯಂತ ಗಣೇಶ ಹಬ್ಬ ಆಚರಣೆ ಮಾಡಲಾಗುತ್ತಿದೆ. ಹೀಗಾಗಿ ನಾಳೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೋ ಬೇಡವೆ ಅನ್ನೋದು ಇಂದೇ ತೀರ್ಮಾನವಾಗಬೇಕಿದೆ. 

ಹುಬ್ಬಳ್ಳಿ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್, ಕಾಂಗ್ರೆಸ್‌ ವಿರೋಧ ಮಾಡಿಲ್ಲ ಎಂದ ಮೇಯರ್

ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆ ಸ್ವತ್ತಾಗಿದೆ. ಮುಸ್ಲಿಮ್ ಸಮುದಾಯ ರಂಜಾನ್ ಸೇರಿ ಎರಡು ಹಬ್ಬಗಳನ್ನು ಆಚರಿಸುತ್ತಿದೆ. ಇತ್ತ ಹಿಂದೂಗಳ ಧಾರ್ಮಿಕ ಹಬ್ಬಕ್ಕೂ ಅವಕಾಶ ನೀಡಬೇಕು ಅನ್ನೋದು ವಾದ. ಕಂದಾಯ ಇಲಾಖೆ ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿತ್ತು. ಭಾರಿ ಬಿಗಿ ಬಂದೋಬಸ್ತ್‌ನಲ್ಲಿ ಧ್ವಜಾರೋಹಣ ನೇರವೇರಿಸಿತ್ತು. ಈ ಮೂಲಕ ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡಲಾಗಿತ್ತು.

ಚಾಮ​ರಾ​ಜ​ಪೇಟೆ ಈದ್ಗಾ ಮೈದಾನ ಕನ್ನಡಿಗರ ಸ್ವತ್ತು: ಸಚಿವ
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯ​ಮಂತ್ರಿ​ಗ​ಳೊಂದಿಗೆ ಎರಡು ಬಾರಿ ಚರ್ಚೆ ಮಾಡಿದ್ದೇನೆ ಎಂದು ಕಂದಾಯ ಸಚಿವ ಆರ್‌. ಆಶೋಕ್‌ ತಿಳಿಸಿದರು. ಸುದ್ದಿ​ಗಾ​ರ​ರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನ ಸ್ಥಳವೂ ಕಂದಾಯ ಇಲಾಖೆಗೆ ಸೇರಿದೆ. ಇನ್ನು ನ್ಯಾಯಾಲಯವೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಅದರ ಬಗ್ಗೆಯೂ ಕೆಲವರು ಮೇಲ್ಮನವಿ ಹೋಗಿದ್ದಾರೆ ಎಂದರು. ಎರಡು ಬಾರಿ ಅಲ್ಲಿ ನಮಾಝ್‌ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಆ ಸ್ಥಳವೂ 7 ಕೋಟಿ ಕನ್ನಡಿಗರ ಸ್ವತ್ತಾಗಿದೆ. ಆ.31ರೊಳಗೆ ಸರ್ಕಾ​ರದ ನಿಲು​ವನ್ನು ಸ್ಪಷ್ಟಪಡಿಸುತ್ತೇವೆ. ಗಣೇ​ಶೋ​ತ್ಸ​ವಕ್ಕೆ ವಿರೋಧ ವ್ಯಕ್ತ​ಪ​ಡಿ​ಸಲು ಎಸ್‌ ಡಿಪಿಐ ಯಾರು, ಇದನ್ನು ಹೇಳು​ವ ಅಧಿ​ಕಾರ ಅವ​ರಿಗೆ ಏನಿದೆ ಎಂದು ಪ್ರಶ್ನಿ​ಸಿ​ದರು.

 

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸರ್ಕಾರ ಅವಕಾಶ ಕೊಡುತ್ತಾ? ಸಿಎಂ ಹೇಳಿದ್ದೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು