ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಮೂವರ ಹೆಸರುಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಸುಪ್ರೀಂಕೋರ್ಟ್
ಬೆಂಗಳೂರು(ಫೆ.05): ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಮೂವರ ಹೆಸರುಗಳನ್ನು ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಶಿಫಾರಸು ಮಾಡಿದೆ. ಫೆಬ್ರವರಿ 4 ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಯಂನಲ್ಲಿ ಮೂವರು ನ್ಯಾಯಾಧೀಶರ ನೇಮಕ ಪ್ರಕ್ರಿಯೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಹೈಕೋರ್ಟ್ ಹಾಲಿ ರಿಜಿಸ್ಟಾರ್ ಜನರಲ್ ರಾಜೇಂದ್ರ ಬಾದಾಮಿಕರ್, ಜಿಲ್ಲಾ ನ್ಯಾಯಾಧೀಶೆ ಖಾಜಿ ಜಯಬುನ್ನಿಸಾ ಮೊಹಿದ್ದೀನ್ ಹಾಗೂ ವಕೀಲ ವೃಂದದಿಂದ ಹಿರಿಯ ವಕೀಲ ಆದಿತ್ಯ ಸೋಂಧಿ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ
ಸರ್ಚ್ ವಾರೆಂಟ್ ಜಾರಿಗೆ ಮುನ್ನ ಸಮನ್ಸ್ ಅಗತ್ಯವಿಲ್ಲ: ಹೈಕೋರ್ಟ್
ಹೈಕೋರ್ಟ್ ಮೆಟ್ಟಿಲೇರಿ 1 ಅಂಕ ಗಳಿಸಿದ ವಿದ್ಯಾರ್ಥಿನಿ
2014ರ ಜೂನ್ ತಿಂಗಳಲ್ಲಿ ಆದಿತ್ಯ ಸೊಂದಿ ಹಿರಿಯ ವಕೀಲರಾಗಿ ನೇಮಕಗೊಂಡಿದ್ದರು. 1998ರಲ್ಲಿ ಅಡ್ವೋಕೇಟ್ ಬಾರ್‌ಗೆ ಸೇರಿಕೊಂಡ ಆದಿತ್ಯ ಸೋಂದಿ, ಹಿರಿಯ ವಕೀಲ ಉದಯ ಹೊಳ್ಳ ಅಡಿಯಲ್ಲಿ ಕೆಲಸ ಮಾಡಿದ್ದರು.
ಆದಿತ್ಯ ಸೋಂದಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದ ಪದವೀಧರರಾಗಿದ್ದಾರೆ. ರಾಜಕೀಯ ವಿಜ್ಞಾನದಲಲ್ಲಿ ಮೈಸೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪಡೆದಿದ್ದಾರೆ. ಈ ಹಿಂದೆ ಬೆಂಗಳೂರು ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಕರ್ನಾಟಕ ಸರ್ಕಾರಕ್ಕೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ