
ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿ ಕಾರ್ಯನಿರ್ವಹಿಸಿದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ತೀರ್ಪು ಹೊರಬಿದ್ದಿದೆ. ಇವರ ಮೇಲೆ ಹಲ್ಲೆ ನಡೆದಾಗ, ಇವರು ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಅವರು ಮತಾಂತರವಾಗಿರುವ ಹಿನ್ನೆಲೆಯಲ್ಲಿ ಈ ಕಾಯ್ದೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶದ ಹೈಕೋರ್ಟ್ ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಆದರೆ ನ್ಯಾಯಮೂರ್ತಿ ಪಿ.ಕೆ. ಮಿಶ್ರಾ ನೇತೃತ್ವದ ಪೀಠವು, ಮೇಲ್ಮನವಿಯನ್ನು ಮಾನ್ಯ ಮಾಡಲಿಲ್ಲ.
ಕೋರ್ಟ್ ಹೇಳಿದ್ದೇನು?
ಈ ವೇಳೆ ಪೀಠವು ಸಂವಿಧಾನದಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಸಂವಿಧಾನ (ಪರಿಶಿಷ್ಟ ಜಾತಿ) ಆದೇಶದ ಷರತ್ತು 3 ರನ್ನು ಉಲ್ಲೇಖಿಸಿದ, ನ್ಯಾಯಮೂರ್ತಿ ಪಿ.ಕೆ. ಮಿಶ್ರಾ ನೇತೃತ್ವದ ಪೀಠವು, ಇದರಲ್ಲಿ ಹಿಂದೂ ಧರ್ಮಕ್ಕಿಂತ ಭಿನ್ನವಾದ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದಿದೆ. ಕ್ರೈಸ್ತ ಅಥವಾ ಇನ್ನಾವುದೇ ಧರ್ಮಕ್ಕೆ ಮತಾಂತರಗೊಳ್ಳುವ ಪರಿಶಿಷ್ಟ ಜಾತಿಯ ವ್ಯಕ್ತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಉಲ್ಲಂಘನೆಯನ್ನು ಹೇಳಿಕೊಳ್ಳುವಂತಿಲ್ಲ ಎಂದೂ ಹೇಳಿದರು.
"ಸಂವಿಧಾನ ಅಥವಾ ಸಂಸತ್ತು ಅಥವಾ ರಾಜ್ಯ ಶಾಸಕಾಂಗದ ಅಡಿಯಲ್ಲಿ ಯಾವುದೇ ಶಾಸನಬದ್ಧ ಪ್ರಯೋಜನ, ರಕ್ಷಣೆ ಅಥವಾ ಮೀಸಲಾತಿ ಅಥವಾ ಅರ್ಹತೆ ಇಂಥವರಿಗೆ ಅನ್ವಯ ಆಗುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ