ಮೇಕೆದಾಟು ಯೋಜನೆ: ತಮಿಳುನಾಡಿಗೆ ತೀವ್ರ ಹಿನ್ನಡೆ

Published : Jul 22, 2022, 10:59 AM IST
ಮೇಕೆದಾಟು ಯೋಜನೆ: ತಮಿಳುನಾಡಿಗೆ ತೀವ್ರ ಹಿನ್ನಡೆ

ಸಾರಾಂಶ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ. ಆದರೆ ಕರ್ನಾಟಕ ಸರ್ಕಾರ ಪ್ರಸ್ತಾಪಿಸಿದಂತೆ ಯಾವುದೇ ಔಪಚಾರಿಕ ನಿರ್ಧಾರವನ್ನು ಕೈಗೊಳ್ಳುವಂತಿಲ್ಲ ಎಂದು ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ. 

ನವದೆಹಲಿ (ಜು.22): ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ. ಆದರೆ ಕರ್ನಾಟಕ ಸರ್ಕಾರ ಪ್ರಸ್ತಾಪಿಸಿದಂತೆ ಯಾವುದೇ ಔಪಚಾರಿಕ ನಿರ್ಧಾರವನ್ನು ಕೈಗೊಳ್ಳುವಂತಿಲ್ಲ ಎಂದು ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ.  ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಯಾವುದೇ ಚರ್ಚೆ ನಡೆಸದಂತೆ ತಡೆ ನೀಡಬೇಕು ಎಂದು ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎ.ಎಂ.ಖಾನ್ವಿಲ್ಕರ್‌, ನ್ಯಾ. ಅಭಯ್‌ ಶ್ರೀನಿವಾಸ ಓಕಾ ಮತ್ತು ನ್ಯಾ. ಜೆ.ಬಿ.ಪರ್ಡಿವಾಲಾ ಅವರಿದ್ದ ಪೀಠ ಈ ಆದೇಶ ನೀಡಿದೆ. 

ತಮಿಳುನಾಡಿನ ಪರವಾಗಿ ವಾದ ಮಾಡಿದ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರು ಕರ್ನಾಟಕದ ಈ ಯೋಜನೆಯಿಂದ ತಮಿಳುನಾಡು ರೈತರ ಹಿತಕ್ಕೆ ಹಾನಿಯಾಗಲಿದೆ ಎಂದು ವಾದಿಸಿದರು. ಆದರೆ ಈ ವಾದವನ್ನು ಕರ್ನಾಟಕ ಪರ ಹಿರಿಯ ವಕೀಲ ಶ್ಯಾಂ ದಿವಾನ್‌ ವಿರೋಧಿಸಿದರು. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರೀಯ ಜಲ ಮಂಡಳಿಯು ಕರ್ನಾಟಕದ ಯೋಜನೆಯನ್ನು ತಿರಸ್ಕರಿಸಬೇಕು ಎಂಬುದು ಸೇರಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳನ್ನು ಸಲ್ಲಿಸಿದೆ.

ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದು ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

ಅರ್ಜಿ ವಿಚಾರಣೆ 26ಕ್ಕೆ ಮುಂದೂಡಿಕೆ: ರಾಜ್ಯ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆಯ ಡಿಪಿಆರ್‌ ಚರ್ಚೆಗೆ ವಿರೋಧ ವ್ಯಕ್ತಪಡಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಜುಲೈ 26ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಕನ್ವೀಲ್ಕರ್‌ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆ ಕೋರಿ ತಮಿಳುನಾಡು ಅರ್ಜಿ ಸಲ್ಲಿಸಿತ್ತು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚೆ ಮಾಡುವ ವೇದಿಕೆ ಅಲ್ಲ. ಹಾಗಾಗಿ ಇದಕ್ಕೆ ತಡೆ ನೀಡಬೇಕು ಎಂದು ತಮಿಳುನಾಡು ಅರ್ಜಿ ಸಲ್ಲಿಸಿತ್ತು. 

ಈ ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರ ಬುಧವಾರ ತನ್ನು ಅಭಿಪ್ರಾಯವನ್ನು ದಾಖಲಿಸಿತು. ಇದೇ ವೇಳೆ ಹೆಚ್ಚಿನ ಮಾಹಿತಿ ಸಲ್ಲಿಸಲು ತಮಿಳುನಾಡು ಸಮಯ ಕೇಳಿತ್ತು. ಹಾಗಾಗಿ ಪ್ರಕರಣದ ವಿಚಾರಣೆ ಜುಲೈ 26ಕ್ಕೆ ಮುಂದೂಡಲಾಯಿತು. ಈ ನಡುವೆ ಜುಲೈ 22ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲು ದಿನಾಂಕ ನಿಗದಿಯಾಗಿರುವುದು ಮತ್ತಷ್ಟುಕುತೂಹಲ ಹೆಚ್ಚಿಸಿದೆ. ಹಲವು ಕಾರಣಗಳಿಗಾಗಿ ಕಳೆದ ಮೂರು ಬಾರಿಯಿಂದ ಮುಂದೂಡಲ್ಪಟ್ಟಿದ್ದ ಪ್ರಾಧಿಕಾರದ ಸಭೆಯಲ್ಲಿ ಈ ಬಾರಿಯಾದರೂ ಮೇಕೆದಾಟು ಯೋಜನೆ ಚರ್ಚೆ ಆಗುತ್ತಾ ಎನ್ನುವ ಪ್ರಶ್ನೆ ಇದೀಗ ಎದುರಾಗಿದೆ.

ಅನುಮತಿ ಸಿಕ್ಕಾಕ್ಷಣ ಕಾಮಗಾರಿ ಶುರು: ಸಮಗ್ರ ಯೋಜನಾ ವರದಿಗೆ ಕೇಂದ್ರದ ಅನುಮತಿ ಸಿಕ್ಕೊಡನೆ ಮೇಕೆದಾಟು ಯೋಜನೆ ಕಾಮಗಾರಿ ಪ್ರಾರಂಭಿಸಲಾಗುವುದು. ಸುಪ್ರೀಂಕೋರ್ಟ್‌ನಲ್ಲಿ ತೀರ್ಪು ರಾಜ್ಯದ ಪರವಾಗಿ ಬರುವ ಆಶಾಭಾವನೆ ಇದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜು.26ಕ್ಕೆ ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಅಣೆಕಟ್ಟು ವಿವಾದ ಸಂಬಂಧ ಅಂತಿಮ ಹಂತದ ವಿಚಾರಣೆ ನಡೆಯಲಿದೆ. 

ತಮಿಳುನಾಡು ಒಪ್ಪಿಗೆ ಇಲ್ಲದೆ ಮೇಕೆದಾಟು ಡ್ಯಾಂ ಇಲ್ಲ?

ಸುಪ್ರೀಂ ತೀರ್ಪು ಬಂದ ನಂತರ ಮೇಕೆದಾಟು ಅಣೆಕಟ್ಟು ಯೋಜನೆಯ ಸಮಗ್ರ ಯೋಜನಾ ವರದಿಗೆ ಕೇಂದ್ರದ ಅನುಮತಿ ಕೋರಲಾಗುವುದು. ಅನುಮತಿ ನೀಡಿದ ಬೆನ್ನಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ನುಡಿದರು. ಇದೇ ವೇಳೆ ಸಂಕಷ್ಟಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ನೀರನ್ನು ಹಂಚಿಕೆ ಮಾಡಿಕೊಳ್ಳಲು ಮೇಕೆದಾಟು ಅಣೆಕಟ್ಟು ಯೋಜನೆ ಸಹಕಾರಿಯಾಗಿದೆ. ಆದರೆ ತಮಿಳುನಾಡು ರಾಜಕೀಯ ಕಾರಣಕ್ಕಾಗಿ ಯೋಜನೆಯನ್ನು ವಿರೋಧಿಸುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India’s top searches of 2025: ಭಾರತೀಯರು ಸದಾ ಯೋಚಿಸೋದು ಏನನ್ನು? ಗೂಗಲ್​ನಿಂದ A to Z ಬಹಿರಂಗ!
ಒಂದೇ ಲಾಂಚರ್‌ ಮೂಲಕ ಎರಡು ಪ್ರಳಯ್‌ ಕ್ಷಿಪಣಿ ಪರೀಕ್ಷೆ ಮಾಡಿದ ಭಾರತ!