ರಾಖಿ, ಮದುವೆ, ಸಂಧಾನಕ್ಕೆ ಆಸ್ಪದವಿಲ್ಲ; ಲೈಂಗಿಕ ಅಪರಾಧ ಪ್ರಕರಣಕ್ಕೆ 'ಸುಪ್ರೀಂ' ಮಾರ್ಗದರ್ಶಿ!

Published : Mar 19, 2021, 06:46 PM IST
ರಾಖಿ, ಮದುವೆ, ಸಂಧಾನಕ್ಕೆ ಆಸ್ಪದವಿಲ್ಲ; ಲೈಂಗಿಕ ಅಪರಾಧ ಪ್ರಕರಣಕ್ಕೆ 'ಸುಪ್ರೀಂ' ಮಾರ್ಗದರ್ಶಿ!

ಸಾರಾಂಶ

ಸುಪ್ರೀಂ ಕೋರ್ಟ್ ದೇಶದಾ ಎಲ್ಲಾ ನ್ಯಾಯಾಲಯಗಳಿಗೆ ಮಹತ್ವದ ಸೂಚನೆ ನೀಡಿದೆ. ಲೈಂಗಿಕ ಅಪರಾಧ ಪ್ರಕರಣಗಳನ್ನು ಅತ್ಯಂತ ಸೂಕ್ಷ್ಮತೆಯಿಂದ ನೋಡಬೇಕು. ಇಷ್ಟೇ ಅಲ್ಲ ರಾಖಿ ಕಟ್ಟಿಸಿಕೊಳ್ಳುವ, ಮಧ್ಯಸ್ಥಿತಿಕೆ, ಮದುವೆ ಈ ರೀತಿಯ ಯಾವುದೇ ಸಲಹೆ ಸೂಚನೆಗೆ ಆಸ್ಪದವಿಲ್ಲ ಎಂದು ಸುಪ್ರೀಂ ಹೇಳಿದೆ. ಸುಪ್ರೀಂ ಕೋರ್ಟ್ ಸೂಚನೆಯ ಸಂಪೂರ್ಣ ವಿವರ ಇಲ್ಲಿದೆ.

ನವದೆಹಲಿ(ಮಾ.19);   ಲೈಂಗಿಕ ಅಪರಾಧಗಳ ಪ್ರಕರಣಗಳಲ್ಲಿ ಆರೋಪಿ ಮತ್ತು ದೂರುದಾರರ ನಡುವೆ ರಾಖಿ ಕಟ್ಟಿಸಿ ಇತ್ಯರ್ಥ ಮಾಡುವ,  ಮದುವೆ ಅಥವಾ ಮಧ್ಯಸ್ಥಿಕೆ, ರಾಜಿ ಮಾತುಕತೆ ಮಾಡಿಕೊಳ್ಳುವ ಯಾವುದೇ ಕ್ರಮಗಳನ್ನು ನ್ಯಾಯಾಲಯಗಳು ಸೂಚಿಸಬಾರದು ಎಂದು ಸುಪ್ರೀಂ ಕೋರ್ಟ್ ದೇಶದ ನ್ಯಾಯಾಲಯಗಳಿಗೆ ಖಡಕ್ ಸೂಚನೆ ಕೊಟ್ಟಿದೆ.

‘ರೇಪಿಸ್ಟ್‌’ ಜಾಮೀನಿಗೆ ರಾಖಿ ಷರತ್ತು : ಹೈ ಆದೇಶ ಸುಪ್ರೀಂನಲ್ಲಿ ವಜಾ.

ಎ.ಎಂ. ಖಾನ್ವಿಲ್ಕರ್ ಮತ್ತು ಎಸ್. ರವೀಂದ್ರ ಭಟ್ ಒಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನ್ಯಾಯಪೀಠ  ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಾಮೀನು ಆದೇಶಗಳನ್ನು ಜಾರಿಗೊಳಿಸುವಾಗ ದೇಶದ ನ್ಯಾಯಾಲಯಗಳು ಪಾಲಿಸಬೇಕಾದ ಮಾರ್ಗಸೂಚಿ ಪ್ರಕಟಿಸಿದೆ.

ಅತ್ಯಾ​ಚಾರ ಸಂತ್ರ​ಸ್ತೆಯ ಮದ್ವೆ ಆಗಲು ಹೇಳಿ​ಲ್ಲ: ಸುಪ್ರೀಂ ಕೋರ್ಟ್‌ ಸ್ಪಷ್ಟ​ನೆ

ಸುಪ್ರೀಂ ಕೋರ್ಟ್ ಈ ಸೂಚನೆ ನೀಡಲು ಕಾರಣವಿದೆ. 2020ರ ಜುಲೈ ತಿಂಗಳಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಈ ರೀತಿಯ ಷರತ್ತು ವಿಧಿಸಿತ್ತು. ಆರೋಪಿಗೆ ಜಾಮೀನು ನೀಡಲು ಸಂತ್ರಸ್ತೆ ಕೈಯಿಂದ ರಾಖಿ ಕಟ್ಟಿಸಿಕೊಂಡು ಬರಬೇಕು ಎಂದು ಸೂಚಿಸಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಇಷ್ಟೇ ಅಲ್ಲ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಈ ಪ್ರಕರಣದ ಬಳಿಕ ಸುಪ್ರೀಂ ಕೋರ್ಟ್ ದೇಶದ ಎಲ್ಲಾ ನ್ಯಾಯಾಲಯಗಳಿಗೆ ಈ ಸೂಚನೆ ನೀಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!