
ನವದೆಹಲಿ (ಅ.12): ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ಮಹಿಳೆಯರು ಧರಿಸುವ ಹಿಜಾಬ್‌ನ್ನು ನಿಷೇಧಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಗುರುವಾರ ಅದರ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ತಾತ್ಕಾಲಿಕ ಪ್ರಕರಣದ ಸ್ಥಿತಿಯ ವರದಿಯ ಪ್ರಕಾರ, ಈ ಪ್ರಕರಣದ ತೀರ್ಪು ನಾಳೆ ಬರಲಿದೆ ಎಂದು ಅಂದಾಜು ಮಾಡಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ಮೇಲ್ಮನವಿಯನ್ನು ಸಲ್ಲಿಕೆ ಮಾಡಲಾಗಿತ್ತು. ಅದರಂತೆ ಅಂದಾಜು 10 ದಿನಗಳ ಕಾಲ ನಡೆದ ವಾದ ವಿವಾದಗಳ ಬಳಿಕ ಸೆಪ್ಟೆಂಬರ್ 22 ರಂದು ವಿಚಾರಣೆ ಮುಕ್ತಾಯಗೊಂಡಿತ್ತು. ಈ ವೇಳೆ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ನ್ಯಾಯಮೂರ್ತಿ ಸುಧಾಂಶು ಧುಲಿಯಾ ತೀರ್ಪನ್ನು ಕಾಯ್ದಿರಿಸಿದ್ದರು. ಆದರೆ, ಅಕ್ಟೋಬರ್ 16 ರಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ನಿವೃತ್ತಿಯಾಗಲಿರುವ ಕಾರಣ, ಈ ವಾರದಲ್ಲಿಯೇ ಹಿಜಾಬ್ ಪ್ರಕರಣದ ತೀರ್ಪು ಬರಲಿದೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು.
ಸುಪ್ರೀಂ ಕೋರ್ಟ್‌ನಲ್ಲಿ ವಾದದ ಸಮಯದಲ್ಲಿ, ಅರ್ಜಿದಾರರ ಪರ ಹಾಜರಾದ ವಕೀಲರು, ಮುಸ್ಲಿಂ ಹುಡುಗಿಯರು ತರಗತಿಗೆ ಹಿಜಾಬ್ (Hijab Case) ಧರಿಸುವುದನ್ನು ತಡೆಯುವುದರಿಂದ ಅವರ ಶಿಕ್ಷಣಕ್ಕೆ ತೊಂದರೆಯಾಗುತ್ತದೆ ಮತ್ತು ಅವರು ತರಗತಿಗಳಿಗೆ ಹಾಜರಾಗುವುದನ್ನು ತಪ್ಪಿಸಿದಂತಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು. ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ (State Governament) 2022ರ ಫೆಬ್ರುವರಿ 5ರ ಆದೇಶವನ್ನು ಒಳಗೊಂಡಂತೆ ಅವರು ವಿವಿಧ ಅಂಶಗಳನ್ನು ಪ್ರಶ್ನೆ ಮಾಡಿದ್ದರು ಮತ್ತು ಹಿಜಾಬ್‌ಗಳನ್ನು ಹಿಂದೂಗಳು ಧರಿಸುವ ಗೂಂಗಾಟ್ ಮತ್ತು ಸಿಖ್ ಅವರ ಪೇಟಕ್ಕೆ ಹೋಲಿಸಿದ್ದರು. ಕೆಲವು ವಕೀಲರು ಈ ವಿಷಯವನ್ನು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ಉಲ್ಲೇಖಿಸಬೇಕು ಎಂದು ವಾದಿಸಿದ್ದರು.
Hijab Case: ಈ ವಾರ ತೀರ್ಪು ನೀಡಲಿರುವ ಸುಪ್ರೀಂ ಕೋರ್ಟ್!
ವಿವಾದ ಹುಟ್ಟುಹಾಕಿರುವ ಕರ್ನಾಟಕ ಸರ್ಕಾರದ ಆದೇಶ ಧರ್ಮ ತಟಸ್ಥವಾಗಿದೆ ಎಂದು ರಾಜ್ಯದ ಪರ ಹಾಜರಾದ ವಕೀಲರು ವಾದಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಬೆಂಬಲಿಸುವ ಆಂದೋಲನವು ಕೆಲವು ವ್ಯಕ್ತಿಗಳ "ಸ್ವಾಭಾವಿಕ ಕೃತ್ಯ" ಅಲ್ಲ ಎಂದು ಒತ್ತಾಯಿಸಿದ ರಾಜ್ಯದ ವಕೀಲರು, ಸರ್ಕಾರವು ಒಂದು ವೇಳೆ ಹಾಗೆ ನಡೆದುಕೊಂಡಿಲ್ಲದೆ ಇದ್ದಲ್ಲಿ "ಸಾಂವಿಧಾನಿಕ ಕರ್ತವ್ಯದ ಲೋಪ" ಆಗಬಹುದು ಎಂದು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.
Hijab Case: ವಿಚಾರಣೆ ಮುಕ್ತಾಯ, ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ಮಾರ್ಚ್ 15 ರಂದು, ಕರ್ನಾಟಕದ (Karnataka) ಉಡುಪಿಯ (Udupi) ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ (Government Pre-University Girls College) ಮುಸ್ಲಿಂ ವಿದ್ಯಾರ್ಥಿನಿಯರ ಒಂದು ತಂಡವು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿತ್ತು, ಇದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ತೀರ್ಪು ನೀಡಿತ್ತು. 2022ರ ಫೆಬ್ರವರಿ 5 ರ ರಾಜ್ಯ ಸರ್ಕಾರದ ಆದೇಶವನ್ನು ಕೆಲವು ಮುಸ್ಲಿಂ ಹುಡುಗಿಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಒಂದು ವಾರಗಳ ಕಾಲ ದಸರಾ ರಜೆಯಲ್ಲಿದ್ದ ಸುಪ್ರೀಂ ಕೋರ್ಟ್ (Supreme Court) ಕಲಾಪಗಳು ಸೋಮವಾರದಿಂದ ಪುನರಾರಂಭವಾಗಿದೆ. ಹಾಗಾಗಿ ಈಗಾಗಲೇ ತೀರ್ಪು ಕಾಯ್ದಿರಿಸಲಾಗಿರುವ ಪ್ರಕರಣದಲ್ಲಿ ಅಂತಿಮ ತೀರ್ಪು ಸಿದ್ಧತೆ ನಡೆಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ