ಸ್ತನಗಳ ಸ್ಪರ್ಶ, ಪೈಜಾಮ ದಾರ ಎಳೆಯುವುದು ಬಲಾತ್ಕಾರ ಅಲ್ಲ ಎಂಬ ತೀರ್ಪಿನ ಬಗ್ಗೆ ತನಿಖೆಗೆ ಸುಪ್ರೀಂ ನಿರ್ಧಾರ

ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿಯುವುದು ಅತ್ಯಾಚಾರವಲ್ಲ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಎತ್ತಿಕೊಂಡಿದೆ. ಈ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ.

Supreme Court orders probe into verdict of alahabad court on rape case

ನವದೆಹಲಿ: 'ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿಯುವುದು ಮತ್ತು ಆಕೆಯ ಪೈಜಾಮದ ದಾರ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನಿಸುವ ಅಪರಾಧದ ಅಡಿಯಲ್ಲಿ ಬರುವುದಿಲ್ಲ' ಎಂಬ ಅಲಹಾಬಾದ್ ಹೈಕೋರ್ಟ್‌ ತೀರ್ಪನ್ನು ಸುಪ್ರೀ ಕೋರ್ಟ್ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದು, ಅದರ ವಿರುದ್ಧ ವಿಚಾರಣೆಗೆ ತೀರ್ಮಾನಿಸಿದೆ. ಈ ತೀರ್ಪಿನ ವಿರುದ್ಧ ವ್ಯಾಪಕ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸುಪ್ರೀಂಕೋರ್ಟ್ ಈ ತೀರ್ಮಾನ ಕೈಗೊಂಡಿದೆ.

ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಕನ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ, ಅಲಹಾಬಾದ್ ಹೈಕೋರ್ಟ್ ಈ ತೀರ್ಪು ನೀಡಿತ್ತು. ಸ್ತನಗಳನ್ನು ಸ್ಪರ್ಶಿಸುವುದು ಅಥವಾ ಪೈಜಾಮಾ ದಾರವನ್ನು ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನವಲ್ಲ ಆದರೆ ಅದನ್ನು ತೀವ್ರತರವಾದ ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬಹುದು ಎಂದು ಹೇಳಿತ್ತು. ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಪೊಲೀಸ್ ಠಾಣೆಗೆ  ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಪೀಠವು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮದ ದಾರವನ್ನು ಕತ್ತರಿಸಿ ಅದನ್ನು ಎಳೆಯಲು ಪ್ರಯತ್ನಿಸುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಾಗುವುದಿಲ್ಲ. ಇದು ಗಂಭೀರ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.

Latest Videos

Allahabad High Court | ಸ್ತನಗಳನ್ನು ಸ್ಪರ್ಶಿಸುವುದು, ಪೈಜಾಮಾ ದಾರ ಎಳೆಯುವುದು ಅತ್ಯಾಚಾರ ಯತ್ನವಲ್ಲ: ಕೋರ್ಟ್!

ಆದರೆ ಈ ತೀರ್ಪಿಗೆ ದೇಶದೆಲ್ಲೆಡೆ ತೀವ್ರ ಆಕ್ರೋ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡಿರುವ ಸುಪ್ರೀಂಕೋರ್ಟ್‌, ಅಲಹಾಬಾದ್‌ ಹೈಕೋರ್ಟ್‌ನ ಈ ತೀರ್ಪಿನ ಬಗ್ಗೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಲು ಮುಂದಾಗಿದೆ. 

ಪ್ರಕರಣದ ಹಿನ್ನೆಲೆ:
ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳಾದ ಪವನ್ ಮತ್ತು ಆಕಾಶ್ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಮಯದಲ್ಲಿ, ಆಕಾಶ್ ಬಾಲಕಿಯ ಪೈಜಾಮಾದ ದಾರ ಕತ್ತರಿಸಿ ಎಳೆಯಲು ಪ್ರಯತ್ನಿಸಿದ್ದ. ಆದರೆ, ಈ ವೇಳೆ ದಾರಿಹೋಕರು ಬರುತ್ತಿದ್ದಂತೆಯೇ ಅವರು ಅಲ್ಲಿಂದ ಪರಾರಿಯಾಗಿದ್ದರು. ಇಬ್ಬರ ವಿರುದ್ಧ ಅಂದು ಪೊಲೀಸ್ ದೂರು ದಾಖಲಾಗಿತ್ತು. ಅದರಂತೆ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಅತ್ಯಾಚಾರ ಯತ್ನ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣವೆಂದು ಪರಿಗಣಿಸಿ ವಿಚಾರಣಾ ನ್ಯಾಯಾಲಯವು ಸಮನ್ಸ್ ಹೊರಡಿಸಿತ್ತು. ಆದರೆ, ಆರೋಪಿಗಳು ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದರು, ದೂರಿನ ಆಧಾರದ ಮೇಲೆ ಪ್ರಕರಣವು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಬರುವುದಿಲ್ಲ ಮತ್ತು ಸೆಕ್ಷನ್ 354 (ಬಿ) ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಮಾತ್ರ ಬರಬಹುದು ಎಂದು ವಾದಿಸಿದ್ದರು.

vuukle one pixel image
click me!