
ನವದೆಹಲಿ(ಮೇ.09): ದೇಶದಲ್ಲಿ ಕೊರೋನಾ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಜೈಲುಗಳಲ್ಲಿ ಜನದಟ್ಟಣೆ ಕಡಿಮೆ ಮಾಡಲು ಸುಪ್ರೀಂಕೋರ್ಟ್ ಶನಿವಾರ ಮಹತ್ವದ ಆದೇಶ ಹೊರಡಿಸಿದೆ.
ಅದರನ್ವಯ, ಕಳೆದ ವರ್ಷ ತಜ್ಞರ ಸಮಿತಿ ಶಿಫಾರಸಿನ ಅನ್ವಯ ಯಾವ್ಯಾವ ಕೈದಿಗಳನ್ನು ಜಾಮೀನಿನ ಮೇಲೆ ಮತ್ತು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತೋ ಅವರನ್ನು ಈಗಲೂ ಬಿಡುಗಡೆ ಮಾಡಬೇಕು. ಯಾವುದೇ ಹೊಸ ಆದೇಶಕ್ಕೆ ಕಾಯದೇ ತಕ್ಷಣವೇ ರಾಜ್ಯ ಸರ್ಕಾರಗಳು ಈ ಕ್ರವ ಜಾರಿ ಮಾಡಬೇಕು ಎಂದು ಸುಪ್ರೀಂಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸೂಚಿಸಿದೆ.
ದೇಶಾದ್ಯಂತ 4 ಲಕ್ಷ ಕೈದಿಗಳು ಜೈಲಿನಲ್ಲಿದ್ದಾರೆ. ಇದು ಕೈದಿಗಳು ಮತ್ತು ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಮತ್ತು ಬದುಕುವ ಹಕ್ಕಿನ ಪ್ರಶ್ನೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ