ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಆಪ್‌ಗೆ ಹಿನ್ನಡೆ!

Published : Feb 28, 2023, 06:42 PM IST
ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಆಪ್‌ಗೆ ಹಿನ್ನಡೆ!

ಸಾರಾಂಶ

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನಕ್ಕೊಳಗಾಗಿದ್ದಾರೆ. 5 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ. ಇದೀಗ ಸಿಸೋಡಿಯಾ ಬಂಧನ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಆಮ್ ಆದ್ಮಿಗೆ ಹಿನ್ನಡೆಯಾಗಿದೆ. ಆಪ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಮಹತ್ವದ ಕಿವಿಮಾತು ಹೇಳಿದೆ.  

ನವದೆಹಲಿ(ಫೆ.28): ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತಾ ಅಧಿಕಾರಕ್ಕೇರಿದ ಆಮ್ ಆದ್ಮಿ ಪಕ್ಷ ಇದೀಗ ಭ್ರಷ್ಟಾಚಾರದಲ್ಲಿ ಸಿಲುಕಿ ಒದ್ದಾಡುತ್ತಿದೆ. ಅಬಕಾರಿ ನೀತಿ ಹಗರಣದಲ್ಲಿ ಸಿಬಿಐನಿಂದ ಅರೆಸ್ಟ್ ಆಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂಆಮ್ ಆದ್ಮಿ ಪಕ್ಷಕ್ಕೆ ಒಂದರ ಮೇಲೊಂದರಂತೆ ಹಿನ್ನಡೆಯಾಗುತ್ತಿದೆ. ಬಂಧನ ಬಳಿಕ ದೆಹಲಿ ನ್ಯಾಯಾಲಯ 5 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿತ್ತು. ಇದರ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಸಿಸೋಡಿಯಾ ಬಂಧನ ರಾಜಕೀಯ ಪ್ರೇರಿತ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಸುಪ್ರೀಂ ಕೋರ್ಟ್ ಆಪ್ ಅರ್ಜಿ ತಿರಸ್ಕರಿಸಿದೆ. ಬಂಧನ ವಿರುದ್ಧ ಮೊದಲು ಹೈಕೋರ್ಟ್‌ನಲ್ಲಿ ಅರ್ಜಿ ಹಾಕುವಂತೆ ಆಮ್ ಆದ್ಮಿ ಪಾರ್ಟಿಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹಾಗೂ ಜಸ್ಟೀಸ್ ಪಿಎಸ್ ನರಸಿಂಹ ನೇತೃತ್ವದ ಪೀಠ ಆಮ್ ಆದ್ಮಿ ಮನವಿ ತರಿಸ್ಕರಿಸಿತು. ಆಮ್ ಆದ್ಮಿ ಪಕ್ಷಕ್ಕೆ ಸಿಸೋಡಿಯಯಾ ಬಂಧನ ವಿರುದ್ಧ ದೆಹಲಿ ನ್ಯಾಯಾಲಯ, ಹಾಗೂ ದೆಹಲಿ ಹೈಕೋರ್ಟ್ ಮೊರೆ ಹೋಗಬಹುದು. ಇದರ ಬದಲು ನೇರವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದೀರಿ. ಆರ್ಟಿಕಲ್ 32ರ ಅನ್ವಯ ನಡೆದುಕೊಳ್ಳಿ ಎಂದುು ಸುಪ್ರೀಂ ಕೋರ್ಟ್ ಸೂಚಿಸಿದೆ.

ಆಪ್‌ ಸೇನಾನಿಗಳು ಜೈಲಿಗೆ: ಉಡುಗಿದ ಸೇನೆಯ ಮಹಾದಂಡನಾಯಕನ ಜಂಘಾಬಲ..!

ಸುಪ್ರೀಂ ಕೋರ್ಟ್‌ನಲ್ಲಿ ಆಪ್ ಪರ ವಾದಿಸಿದ ವಕೀಲ ಅಭಿಷೇಕ್ ಮನುಸಿಂಗ್ವಿ, ಆರ್ಟಿಕಲ್ 32ರ ಅಡಿಯಲ್ಲಿ ಆರ್ಬನ್ ಗೋಸ್ವಾಮಿ ಪ್ರಕರ ಹಾಗೂ ವಿನೋದ್ ದುವಾ ಪ್ರಕರಣ ಉಲ್ಲೇಖಿಸಿದರು. ಈ ಎರಡು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು ಎಂದರು. ಇದಕ್ಕೆ ಉತ್ತರಿಸಿದ ಸುಪ್ರೀಂ ಕೋರ್ಟ್, ಅರ್ನಬ್ ಗೋಸ್ವಾಮಿ ಪ್ರಕರಣ ಮೊದಲು ಹೈಕೋರ್ಟ್‌ನಲ್ಲಿತ್ತು. ಬಳಿಕ ಸುಪ್ರೀಂ ಕೋರ್ಟ್‌ಗೆ ಬಂದಿದೆ. ಇನ್ನು ವಿನೋದ್ ದುವಾ ಪ್ರಕರಣ ಕ್ರಿಷ್ಟಕರ ವರದಿ ಪ್ರಕಟಿಸಿದ ಪತ್ರಕರ್ತನ ವಿರುದ್ಧದ ಎಫ್ಐಎರ್ ಪ್ರಕರಣಾಗಿದೆ. ಆದರೆ ಮನೀಶ್ ಸಿಸೋಡಿಯಾ ಪ್ರಕರಣ ಭ್ರಷ್ಟಾಚಾರ ವಿರುದ್ಧದ ಪ್ರಕರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತು.

ಇದಕ್ಕುತ್ತರಿಸಿದ ಸಿಂಘ್ವಿ, ಜಗೀಶಾ ಅರೋರಾ ಸೇರಿದಂತೆ ಇತರ ಕೆಲ ಪ್ರಕರಣಗಳನ್ನು ಉಲ್ಲೇಖಿಸಿ, ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ಮನೀಶ್ ಸಿಸೋಡಿಯಾಗೆ ಜಾಮೀನು ನೀಡಬೇಕು ಎಂದು ಕೋರಿದರು. ಆದರೆ ಸುಪ್ರೀಂ ಕೋರ್ಟ್ ಈ ಎಲ್ಲಾವಾದ ತರಿಸ್ಕರಿಸಿತು. ಇಷ್ಟೇ ಅಲ್ಲ ತಮ್ಮ ಎಲ್ಲಾ ವಾದವನ್ನು ಹೈಕೋರ್ಟ್‌ನಲ್ಲಿ ಮಾಡುವಂತೆ ಸೂಚಿಸಿತು. 

ಭಾನುವಾರ ಸಿಬಿಐ ಅಧಿಕಾರಿಗಳು ಸತತ 8 ಗಂಟೆ ಮನೀಶ್ ಸಿಸೋಡಿಯಾ ವಿಚಾರಣೆ ನಡೆಸಿದ್ದಾರೆ. ಆದರೆ ಸಹಕರಿಸಿದ ಕಾರಣ ಸಿಸೋಡಿಯಾರನ್ನು ಬಂಧಿಸಲಾಗಿತ್ತು. ಬಂಧಿತರಾಗಿರುವ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಮನೀಶ್‌ ಸಿಸೋಡಿಯಾ ಅವರನ್ನು ನಿನ್ನೆ ನ್ಯಾಯಾಲಯ 5 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿತ್ತು.‘ಈ ಅಕ್ರಮದ ಕುರಿತಾಗಿ ಹೆಚ್ಚಿನ ವಿಚಾರಣೆ ನಡೆಸಬೇಕಾದ ಅವಶ್ಯಕತೆ ಇದೆ. ಭಾನುವಾರದ ತನಿಖೆ ವೇಳೆ ಅವರು ಸಹಕರಿಸಲಿಲ್ಲ’ ಎಂದು ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್‌ಪಾಲ್‌ ಅವರು ಸಿಸೋಡಿಯಾರನ್ನು ಮಾ.4ರವರೆಗೆ ಸಿಬಿಐ ಕಸ್ಟಡಿಗೆ ನೀಡಿದ್ದಾರೆ. ಇದೇ ವೇಳೆ, ಸಿಬಿಐ ಆರೋಪಗಳು ಸುಳ್ಳು ಎಂಬ ಸಿಸೋಡಿಯಾ ವಾದಕ್ಕೆ ಮನ್ನಣೆ ಸಿಗಲಿಲ್ಲ.

 

ಮನೀಶ್ ಸಿಸೋಡಿಯಾ ಬಂಧನ ವಿರೋಧಿಸಿ ದೇಶಾದ್ಯಂತ ಆಪ್ ಪ್ರತಿಭಟನೆ!

ದೆಹಲಿ ಅಬಕಾರಿ ನೀತಿ ಜಾರಿ ಹಾಗೂ ಬಾರ್‌ ಲೈಸೆನ್ಸ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ದಿಲ್ಲಿ ಅಬಕಾರಿ ಸಚಿವರೂ ಆಗಿರುವ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿತ್ತು. ಭಾನುವಾರ ಸಿಬಿಐ ಎದುರು ವಿಚಾರಣೆಗೆ ಹಾಜರಾಗಿದ್ದ ಅವರನ್ನು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣ ನೀಡಿ ಬಂಧಿಸಲಾಗಿತ್ತು.ಕಳೆದ ವರ್ಷ ದಿಲ್ಲಿಯಲ್ಲಿ 400ಕ್ಕೂ ಹೆಚ್ಚು ಅಬಕಾರಿ ಲೈಸೆನ್ಸ್‌ ಹಂಚಿಕೆಯಲ್ಲಿ ವ್ಯಾಪಕ ಲಂಚಾವತಾರ ನಡೆದಿದೆ ಎಂಬುದು ಈ ಪ್ರಕರಣದ ಮುಖ್ಯಾಂಶವಾಗಿದೆ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ