13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ: ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Published : Apr 05, 2025, 08:25 AM ISTUpdated : Apr 05, 2025, 08:29 AM IST
13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ: ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಸಾರಾಂಶ

13 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿರ್ಬಂಧಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಬಗ್ಗೆ ಕಾನೂನು ತರಲು ಸಂಸತ್ತಿಗೆ ಸೂಚಿಸಿದೆ.

ನವದೆಹಲಿ: 13 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ‘ಈ ಸಂಬಂಧ ಕಾನುನು ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ’ ಎಂದು ಅದು ಅರ್ಜಿದಾರರಿಗೆ ಸೂಚಿಸಿದೆ.

ಜೆ಼ಪ್ಟ್‌ ಫೌಂಡೇಶನ್‌ ಪರವಾಗಿ ಮೋಜಿನಿ ಪ್ರಿಯಾ ಎಂಬ ವಕೀಲೆ ಈ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯಿಂದ ಎಳೆ ಮನಸ್ಸುಗಳ ಮೇಲಾಗುವ ದೈಹಿಕ, ಮಾನಸಿಕ ಪರಿಣಾಮವನ್ನು ಉಲ್ಲೇಖಿಸಿದ್ದು, 13ರಿಂದ 18 ವರ್ಷದ ಮಕ್ಕಳು ಅವುಗಳನ್ನು ಬಳಸುವುದನ್ನು ನಿಯಂತ್ರಿಸಲು ವಯಸ್ಸು ಪರಿಶೀಲನೆ, ಬಯೋಮೆಟ್ರಿಕ್‌ ಧೃಡೀಕರಣವನ್ನು ಕಡ್ಡಾಯಗೊಳಿಸಬೇಕು ಎಂದು ಕೋರಲಾಗಿತ್ತು. ಅಂತೆಯೇ, ಮಕ್ಕಳ ಸುರಕ್ಷತಾ ನಿಯಮಗಳನ್ನು ಪಾಲಿಸದ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಕೇಳಿಕೊಳ್ಳಲಾಗಿತ್ತು.

ಈ ಅರ್ಜಿಗೆ ಪ್ರತಿಕ್ರಿಯಿಸಿರುವ ನ್ಯಾ। ಬಿ.ಆರ್‌. ಗವಾಯಿ ಮತ್ತು ಆಗಸ್ಟೀನ್‌ ಜಾರ್ಜ್‌ ಮಾಶಿ, ‘ಇದು ಕಾನೂನಿನ ವ್ಯಾಪ್ತಿಗೆ ಒಳಪಡುತ್ತದೆ. ಈ ಬಗ್ಗೆ ಸಂಬಂಧಿಸಿದವರ ಎದುರು ಪ್ರಸ್ತಾಪಿಸಿ. ಅವರು ಅದನ್ನು 8 ವಾರಗಳೊಳಗಾಗಿ ಪರಿಗಣಿಸಬೇಕು’ ಎಂದು ಹೇಳಿದರು.

ಇದನ್ನೂ ಓದಿ: ಭೋವಿ ನಿಗಮ ಹಗರಣ: ಬಡವರ ಹಣ ನುಂಗಿದ ಕೇಸ್‌ ಬಗ್ಗೆ ಸರಿಯಾಗಿ ತನಿಖೆ ಮಾಡ ...

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?
ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು