ಗ್ಯಾನವಾಪಿ ಪೂಜೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮಸೀದಿ ಸಮಿತಿಗೆ ಹಿನ್ನೆಡೆ!

By Suvarna News  |  First Published Feb 1, 2024, 4:31 PM IST

ಗ್ಯಾನವಾಪಿ ಮಸೀದಿ ನೆಲ ಮಹಡಿಯಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ಅವಕಾಶ ಕೊಟ್ಟಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಗ್ಯಾನವಾಪಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ. 
 


ನವದೆಹಲಿ(ಫೆ.01) ಗ್ಯಾನವಾಪಿ ಮಸೀದಿ ವಿವಾದ ಮತ್ತೆ ತೀವ್ರಗೊಳ್ಳುತ್ತಿದೆ. ಗ್ಯಾನವಾಪಿ ಮಸೀದಿಯಲ್ಲಿರುವ ಹಿಂದೂ ಮೂರ್ತಿಗಳಿಗೆ ಕಳೆದ 31 ವರ್ಷಗಳಿಂದ ಸ್ಥಗಿತಗೊಂಡಿದ್ದ ಪೂಜೆಗೆ ಇದೀಗ ಮತ್ತೆ ಅವಕಾಶ ನೀಡಲಾಗಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯ ನಿನ್ನೆ(ಜ.31) ಈ ಕುರಿತು ಮಹತ್ವದ ಆದೇಶ ನೀಡಿತ್ತು. ನೆಲಮಹಡಿಯಲ್ಲಿರುವ ಮೂರ್ತಿಗಳ ಪೂಜೆಗೆ ಹಿಂದೂಗಳಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಆದೇಶವನ್ನು ಪ್ರಶ್ನಿಸಿ ಗ್ಯಾನವಾಪಿ ಮಸೀದಿ ಮುಸ್ಲಿಂ ಸಮತಿ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಆದರೆ ಮುಸ್ಲಿಂ ಸಮಿತಿಗೆ ತೀವ್ರ ಹಿನ್ನಡೆಯಾಗಿದೆ. ಗ್ಯಾನವಾಪಿ ಮುಸ್ಲಿಂ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಮೊರೆ ಹೊಗುವಂತೆ ಸೂಚಿಸಿದೆ.

ಗ್ಯಾನವಾಪಿ ಮಸೀದಿಯ  ನೆಲಮಹಡಿಯಲ್ಲಿರುವ ‘ವ್ಯಾಸ್‌ ಕೆ ಠಿಖಾನಾ’ದಲ್ಲಿನ ಶೃಂಗಾರ ಗೌರಿ ಹಾಗೂ ಇತರ ಹಿಂದೂ ವಿಗ್ರಹಗಳನ್ನು ಪೂಜಿಸಲು ಹಿಂದೂಗಳಿಗೆ ವಾರಾಣಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿತ್ತು. ಈ ಅನುಮತಿ ಸಿಕ್ಕ ಬೆನ್ನಲ್ಲೇ ಗ್ಯಾನವಾಪಿಯಲ್ಲಿ ಮೂರ್ತಿಗಳಿಗೆ ಆರತಿ ಮಾಡಿ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಲಾಗಿದೆ. ಕಾಶಿ ವಿಶ್ವನಾಥ ಮಂದಿರದ ಅರ್ಚರು ಮೂರ್ತಿಗಳಿಗೆ ಪೂಜೆ ಸಲ್ಲಿಸಿದ ವಿಡಿಯೋ ಬಾರಿ ವೈರಲ್ ಆಗಿದೆ. ಪೂಜೆಗೆ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆ ಮಾಡಿತ್ತು. 

Tap to resize

Latest Videos

ಮುಲಾಯಂ ಸಿಂಗ್‌ ಯಾದವ್‌ ಸೀಲ್‌ ಮಾಡಿದ 31 ವರ್ಷಗಳ ಬಳಿಕ ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆ!

ವಾರಣಾಸಿ ಕೋರ್ಟ್ ಹಿಂದೂಗಳಿಗೆ ಪೂಜೆಗೆ ಅನುಮತಿ ನೀಡುತ್ತಿದ್ದಂತೆ ಗ್ಯಾನವಾಪಿ ಮುಸ್ಲಿಂ ಸಮಿತಿ ಗರಂ ಆಗಿದೆ. ಅಂಜುಮಾನ್ ಇಂತೆಜಮಿಯಾ ಮಸೀದಿ ಸಮಿತಿ ನಿನ್ನೆಯೇ  ನೇರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ಅರ್ಚಿ ವಿಚಾರಣೆಗೆ ಕೋರಿತ್ತು. ಅರ್ಜಿಯಲ್ಲಿ ಯಥಾ ಸ್ಥಿತಿ ಕಾಪಾಡಬೇಕು ಎಂದು ಮನವಿ ಮಾಡಿತ್ತು. ನಿನ್ನೆ ರಾತ್ರಿಯೇ ಹಿಂದೂಗಳು ಪೂಜೆ ಮಾಡಿದ್ದಾರೆ. ಮಸೀದಿಯೊಳಗೆ ಪೂಜೆ ಹೇಗೆ ಸಾಧ್ಯ? ಇದುವರೆಗೆ ಇಲ್ಲದ ಪದ್ಧತಿಗೆ ಅವಕಾಶ ನೀಡಬಾರದು ಎಂದು ಅರ್ಜಿಯಲ್ಲಿ ಕೋರಿತ್ತು. 

ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಇಷ್ಟೇ ಅಲ್ಲ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿದ ಆದೇಶವನ್ನು ಮೊದಲು ಹೈಕೋರ್ಟ್‌ನಲ್ಲಿ ಪ್ರಶ್ನಿಸುವಂತೆ ಗ್ಯಾನವಾಪಿ ಮಸೀದಿ ಸಮಿತಿಗೆ ಸೂಚನೆ ನೀಡಿದೆ. ಈ ಸೂಚನೆ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್‌ನಲ್ಲಿ ವಾರಣಾಸಿ ಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿದೆ. ತುರ್ತು ಅರ್ಜಿ ವಿಚಾರಣೆ ನಡೆಸುವಂತೆ ಮುಸ್ಲಿಂ ಸಮಿತಿ ಕೋರಿದೆ. 

ಗ್ಯಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ಮತ್ತೊಂದು ಗೆಲುವು,ಪೂಜೆಗೆ ಅವಕಾಶ ನೀಡಿದ ಕೋರ್ಟ್!

1993ರವರೆಗೂ ಜ್ಞಾನವಾಪಿ ತಳಮಹಡಿಯಲ್ಲಿರುವ ಶೃಂಗಾರ ಗೌರಿಗೆ ಕಾಶಿ ವಿಶ್ವನಾಥ ದೇಗುಲದ ಅರ್ಚಕ ಸೋಮನಾಥ ವ್ಯಾಸ್‌ ಅವರು ಪ್ರತಿನಿತ್ಯ ಪೂಜೆ ಮಾಡುತ್ತಿದ್ದರು. ಆದರೆ ಬಳಿಕ ಕೋರ್ಟ್‌ ಆದೇಶದ ಮೇರೆಗೆ ಅಲ್ಲಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದರ ವಿರುದ್ಧ ಅರ್ಜಿ ಸಲ್ಲಿಸಿದ್ದ ವ್ಯಾಸ್‌ ಅವರ ಮೊಮ್ಮಗ ಸೋಮನಾಥ ವ್ಯಾಸ್‌, ‘ಅಲ್ಲಿ ಪೂಜೆ ಮಾಡಲು ಅನುವು ಮಾಡಿಕೊಡಬೇಕು’ ಎಂದು ಸೆ.25, 2023ರಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

click me!