ಮಥುರಾ ಕೃಷ್ಣ ಜನ್ಮಭೂಮಿ ಸರ್ವೇ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ; ಹಿಂದೂಗಳಿಗೆ ಮತ್ತೆ ಜಯ!

Published : Dec 15, 2023, 03:19 PM IST
ಮಥುರಾ ಕೃಷ್ಣ ಜನ್ಮಭೂಮಿ ಸರ್ವೇ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ; ಹಿಂದೂಗಳಿಗೆ ಮತ್ತೆ ಜಯ!

ಸಾರಾಂಶ

ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ, ಆದರೆ ಹೈಕೋರ್ಟ್ ಸಮೀಕ್ಷೆಗೆ ಆದೇಶ ನೀಡಿದ್ದು, ಇದರಿಂದ ಪ್ರಕರಣದ ಫಲಿತಾಂಶಕ್ಕೆ ಧಕ್ಕೆಯಾಗುತ್ತದೆ ಎಂದು ಹುಝೆಫಾ ಅಹ್ಮದಿ ಹೇಳಿಕೊಂಡಿದ್ದಾರೆ.

ನವದೆಹಲಿ (ಡಿಸೆಂಬರ್ 15, 2023): ಭಗವಾನ್ ಕೃಷ್ಣನ ಜನ್ಮಸ್ಥಳ ಎಂದು ಹಿಂದೂ ಸಮಘಟನೆಗಳು ಪ್ರತಿಪಾದಿಸುತ್ತಿರುವ ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ನ್ಯಾಯಾಲಯದ ಆಯುಕ್ತರನ್ನು ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಇದು ಕಾನೂನುಬಾಹಿರ ಮತ್ತು ಅನಿಯಂತ್ರಿತ ಎಂದು ಆರೋಪಿಸಿ ಈದ್ಗಾ ಮಸೀದಿ ಸಮಿತಿಯು ಹೈಕೋರ್ಟ್‌ನ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಈಗಾಗಲೇ ತಮ್ಮ ಅರ್ಜಿಯನ್ನು ಸ್ವೀಕರಿಸಿದೆ ಎಂದು ಮಸೀದಿ ಸಮಿತಿಯ ವಕೀಲ ಹುಝೆಫಾ ಅಹ್ಮದಿ ವಾದಿಸಿದರು. ಆದರೆ, ಈ ಅರ್ಜಿಯ ಬಗ್ಗೆ ಲಿಖಿತ ವಾದವನ್ನು ಸುಪ್ರೀಂ ಕೋರ್ಟ್ ಕೇಳಿದೆ ಮತ್ತು ವಿವರವಾದ ವಿಚಾರಣೆಯ ಅಗತ್ಯವಿದೆ ಎಂದು ಹೇಳಿದೆ. 

ಇದನ್ನು ಓದಿ: ಹಿಂದೂಗಳ ಹೋರಾಟಕ್ಕೆ ಮತ್ತೊಂದು ಗೆಲುವು, ಮಥುರಾ ಕೃಷ್ಣ ಭೂಮಿ ಸರ್ವೇಗೆ ಕೋರ್ಟ್ ಅನುಮತಿ!

ಅಲ್ಲದೆ, ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ, ಆದರೆ ಹೈಕೋರ್ಟ್ ಸಮೀಕ್ಷೆಗೆ ಆದೇಶ ನೀಡಿದ್ದು, ಇದರಿಂದ ಪ್ರಕರಣದ ಫಲಿತಾಂಶಕ್ಕೆ ಧಕ್ಕೆಯಾಗುತ್ತದೆ ಎಂದು ಹುಝೆಫಾ ಅಹ್ಮದಿ ಹೇಳಿಕೊಂಡಿದ್ದಾರೆ.

ಸುಪ್ರೀಂಕೋರ್ಟ್‌ ಹೇಳಿದ್ದೇನು?
ಈ ಪ್ರಕರಣಗಳ ವರ್ಗಾವಣೆ ವಿರುದ್ಧದ ಅರ್ಜಿಯನ್ನು ಜನವರಿ 9 ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ತಿಳಿಸಿದೆ. ಅಲ್ಲದೆ,  ಮಸೀದಿ ಸಮಿತಿಯು ನಿನ್ನೆಯ ಹೈಕೋರ್ಟ್‌ನ ಆದೇಶವನ್ನು ಔಪಚಾರಿಕವಾಗಿ ಪ್ರಶ್ನಿಸಿಲ್ಲ. ಈ ಹಿನ್ನೆಲೆ ಅಂದೇ ವಿಚಾರಣೆ ನಡೆಸುತ್ತೇವೆ. ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಪೀಠ ಹೇಳಿದೆ.

 

'ಮುಸ್ಲಿಮರ ಘನತೆಯನ್ನು ಕಸಿಯುವುದು ಮಾತ್ರವೇ ಈಗಿನ ಗುರಿ..' ಮಥುರಾ ಸರ್ವೇಗೆ ಕಿಡಿಕಾರಿದ ಓವೈಸಿ!

ಡಿಸೆಂಬರ್ 18 ರಂದು ಸಮೀಕ್ಷೆಯ ರೂಪುರೇಷೆ ಅಂತಿಮಗೊಳಿಸುವ ಕುರಿತು ಹೈಕೋರ್ಟ್ ಆದೇಶವನ್ನು ನೀಡಲಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು ಅಹ್ಮದಿ ಮನವಿ ಮಾಡಿದ್ದಾರೆ. ಹಾಗೂ, ಮಸೀದಿ ಸಮಿತಿಯ ಹಕ್ಕುಗಳನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಅಗತ್ಯ ಎಂದೂ ಅವರು ಹೇಳಿದರು.

ಇದಕ್ಕೆ ಉತ್ತರಿಸಿದ ಸುಪ್ರೀಂ ಕೋರ್ಟ್ ಜನವರಿ 9 ರಂದು ವಿವಾದದ ವಿಚಾರಣೆ ನಡೆಸಲಿದೆ ಎಂದು ಮಸೀದಿ ಸಮಿತಿಯು ಹೈಕೋರ್ಟ್‌ಗೆ ತಿಳಿಸಬಹುದು ಎಂದು ಪೀಠ ಹೇಳಿದೆ. ಹಾಗೂ, ಮಸೀದಿ ಸಮಿತಿಯು ತನ್ನ ಇಂದಿನ ಅವಲೋಕನಗಳ ಬಗ್ಗೆ ಹೈಕೋರ್ಟ್‌ಗೆ ತಿಳಿಸಬಹುದು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. 

ಕೃಷ್ಣ ಜನ್ಮಭೂಮಿ ಮಥುರಾಗೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ಪ್ರಧಾನಿ

ಇದಕ್ಕೆ ಉತ್ತರಿಸಿದ ಹುಝೆಫಾ ಅಹ್ಮದಿ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ವಿಚಾರಣೆಯ ಬಗ್ಗೆ ನಾವು ಹೈಕೋರ್ಟ್‌ಗೆ ತಿಳಿಸಿದ್ದೇವೆ. ಆದರೆ ಹೈಕೋರ್ಟ್ ಅವರಿಗೆ ಗಮನ ನೀಡಲಿಲ್ಲ ಎಂದು ಹೇಳಿದರು. ಅಲ್ಲದೆ, ಇಂದಿನ ನಂತರ ಚಳಿಗಾಲದ ರಜೆಗಾಗಿ ಸುಪ್ರೀಂ ಕೋರ್ಟ್‌ಗೆ ರಜೆ ನೀಡಲಾಗುವುದು ಎಂದ ಅವರು, ಹೈಕೋರ್ಟ್ ಮುಂದೆ ಯಾವುದೇ ಆದೇಶ ನೀಡಿದರೆ, ತಕ್ಷಣವೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ ಎಂದೂ ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?