ನ್ಯಾ. ವರ್ಮಾ ಕೇಸ್‌ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

Kannadaprabha News   | Kannada Prabha
Published : Jul 31, 2025, 05:21 AM IST
Supreme Court of India (File Photo/ANI)

ಸಾರಾಂಶ

ಮನೆಯಲ್ಲಿ ಕಂತೆ ಕಂತೆ ನೋಟು ಸಿಕ್ಕ ಪ್ರಕರಣದಲ್ಲಿ ಆಂತರಿಕ ವಿಚಾರಣಾ ಸಮಿತಿ ತಮ್ಮ ವಿರುದ್ಧ ಸಲ್ಲಿಸಿದ್ದ ವರದಿಯ ರದ್ದತಿ ಕೋರಿ ನ್ಯಾ। ಯಶವಂತ್‌ ವರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್‌, ತೀರ್ಪು ಕಾಯ್ದಿರಿಸಿದೆ.

ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟು ಸಿಕ್ಕ ಪ್ರಕರಣದಲ್ಲಿ ಆಂತರಿಕ ವಿಚಾರಣಾ ಸಮಿತಿ ತಮ್ಮ ವಿರುದ್ಧ ಸಲ್ಲಿಸಿದ್ದ ವರದಿಯ ರದ್ದತಿ ಕೋರಿ ನ್ಯಾ। ಯಶವಂತ್‌ ವರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್‌, ತೀರ್ಪು ಕಾಯ್ದಿರಿಸಿದೆ.

ದೆಹಲಿ ಹೈಕೋರ್ಟ್‌ ನ್ಯಾಯಾಧೀಶರಾಗಿದ್ದಾಗ ವರ್ಮಾ ಮನೆಯಲ್ಲಿ ನೋಟುಗಳ ಕಂತೆ ಪತ್ತೆಯಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಆಂತರಿಕ ವಿಚಾರಣಾ ಸಮಿತಿಯು ವರ್ಮಾರನ್ನು ದೋಷಿ ಎಂದು ಹೇಳಿ ವರದಿ ನೀಡಿತ್ತು. ಇದೀಗ ಈ ವರದಿ ರದ್ದತಿಗೆ ವರ್ಮಾ ಸುಪ್ರೀಂ ಮೆಟ್ಟಿಲೇರಿದ್ದರು.

ಸುಪ್ರೀಂ ಆಕ್ರೋಶ:

ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್, ವರ್ಮಾ ವಿರುದ್ಧ ಮತ್ತೆ ತೀವ್ರ ಅಸಮಾಧಾನ ಹೊರಹಾಕಿತು. ನ್ಯಾ.ವರ್ಮಾರ ನಡೆ ವಿಶ್ವಾಸಾರ್ಹವಾಗಿಲ್ಲ. ಆಂತರಿಕ ವಿಚಾರಣಾ ಸಮಿತಿ ವರದಿ ಪ್ರಶ್ನಿಸುವುದೇ ಆಗಿದ್ದರೆ ವಿಚಾರಣೆಗೆ ಹಾಜರಾಗಿದ್ದು ಯಾಕೆ? ಆಗಲೇ ಯಾಕೆ ಪ್ರಶ್ನಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.

ಅಲ್ಲದೆ, ವಾಗ್ದಂಡನೆಗೆ ನಾವು ಶಿಫಾರಸು ಮಾಡಿದ್ದನ್ನು ನ್ಯಾ। ವರ್ಮಾ ಪ್ರಶ್ನಿಸಿದ್ದಾರೆ. ನಮಗೆ ಹಾಗೆ ಶಿಫಾರಸು ಮಾಡಲು ಅಧಿಕಾರವಿದೆ. ಕೋರ್ಟ್‌ ಎಂದರೆ ಬರೀ ಪತ್ರ ರವಾನಿಸುವ ಅಂಚೆ ಕಚೇರಿ ಅಲ್ಲ’ ಎಂದು ಕಿಡಿಕಾರಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್