ಆರ್ಥಿಕ ಅಶಿಸ್ತೇ ಈ ಪರಿಸ್ಥಿತಿಗೆ ಕಾರಣ: ಕೇರಳಕ್ಕೆ ಸುಪ್ರೀಂಕೋರ್ಟ್‌ ತಪರಾಕಿ

Published : Apr 03, 2024, 06:03 AM IST
ಆರ್ಥಿಕ ಅಶಿಸ್ತೇ ಈ ಪರಿಸ್ಥಿತಿಗೆ ಕಾರಣ: ಕೇರಳಕ್ಕೆ ಸುಪ್ರೀಂಕೋರ್ಟ್‌ ತಪರಾಕಿ

ಸಾರಾಂಶ

ಹೆಚ್ಚುವರಿ ಸಾಲ ಪಡೆಯಲು ಅವಕಾಶ ನೀಡಬೇಕು ಎಂಬ ಕೇರಳ ಸರ್ಕಾರದ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್‌, ರಾಜ್ಯದ ಇಂದಿನ ಈ ಸ್ಥಿತಿಗೆ ಹಣಕಾಸು ನಿರ್ವಹಣೆಯಲ್ಲಿನ ಅಶಿಸ್ತೇ ಕಾರಣ ಎಂದು ಕಿಡಿಕಾರಿದೆ. 

ನವದೆಹಲಿ (ಏ.03): ಹೆಚ್ಚುವರಿ ಸಾಲ ಪಡೆಯಲು ಅವಕಾಶ ನೀಡಬೇಕು ಎಂಬ ಕೇರಳ ಸರ್ಕಾರದ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್‌, ರಾಜ್ಯದ ಇಂದಿನ ಈ ಸ್ಥಿತಿಗೆ ಹಣಕಾಸು ನಿರ್ವಹಣೆಯಲ್ಲಿನ ಅಶಿಸ್ತೇ ಕಾರಣ ಎಂದು ಕಿಡಿಕಾರಿದೆ. ಅಲ್ಲದೆ ಸಾಲ ಪಡೆಯಲು ಕೇಂದ್ರ ಸರ್ಕಾರ ಮಿತಿ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಸಾಂವಿಧಾನಕ ಪೀಠಕ್ಕೆ ವರ್ಗಾಯಿಸಿದೆ. 

ಮೂಲಭೂತವಾಗಿ ನಿಮ್ಮ ಆರ್ಥಿಕ ಅಶಿಸ್ತಿನಿಂದಾಗಿ ನೀವೇ ಈ ಸಮಸ್ಯೆ ಈ ಸೃಷ್ಟಿಸಿಕೊಂಡಿದ್ದೀರಿ ಎಂದಾದಲ್ಲಿ ಅದನ್ನು ಕೇಂದ್ರ ಸರ್ಕಾರದ ನಡೆಯಿಂದಾಗಿ ಉಂಟಾದ ಸರಿಪಡಿಸಲಾಗದ ಗಾಯ ಎಂದು ಪರಿಗಣಿಸಿ ನಿಮಗೆ ಮಧ್ಯಂತರ ಪರಿಹಾರ ನೀಡಲಾಗದು ಎಂದು ನ್ಯಾ. ಸೂರ್ಯಕಾಂತ್‌ ಮತ್ತು ನ್ಯಾ.ಕೆ.ವಿ.ವಿಶ್ವನಾಥನ್‌ ಅವರನ್ನು ಒಳಗೊಂಡ ಪೀಠ ಕೇರಳ ಸರ್ಕಾರದ ವಾದದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು.

ಎನ್‌ಡಿಆರ್‌ಎಫ್ ಹಣಕ್ಕಾಗಿ ಸುಪ್ರೀಂಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ: ಬೊಮ್ಮಾಯಿ

ಜೊತೆಗೆ ಇಂಥ ಪ್ರಕರಣಗಳಲ್ಲಿ ನಾವು ಮಧ್ಯಂತರ ನಡೆ ನೀಡುತ್ತಾ ಹೋದಲ್ಲಿ ಅದು ರಾಜ್ಯ ಸರ್ಕಾರಗಳು ಹೊಸ ಆರ್ಥಿಕ ನೀತಿ (ಯೋಜನೆ) ಘೋಷಿಸಲು ಮತ್ತು ಹೊಸ ಹೊಸ ಸಾಲಕ್ಕೆ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸುವ ಸಂಪ್ರದಾಯಕ್ಕೆ ನಾಂದಿ ಹಾಡಿದಂತೆ ನಾಗುತ್ತದೆ ಎಂದು ಹೇಳಿತು. ಅಲ್ಲದೆ ನಮ್ಮ ಸೂಚನೆ ಅನ್ವಯ ಕೇಂದ್ರ ಸರ್ಕಾರ ಈಗಾಗಲೇ ಹೆಚ್ಚುವರಿಯಾಗಿ 13608 ಕೋಟಿ ರು. ಸಾಲ ಪಡೆಯಲು ಅನುಮತಿ ನೀಡಿದೆ. ಹೀಗಾಗಿ ನಿಮಗೆ ಸಾಕಷ್ಟು ನೆರವು ಸಿಕ್ಕಿದೆ. ಹೀಗಾಗಿ ಕೇಂದ್ರದ ನಿರ್ಧಾರಕ್ಕೆ ತಡೆ ನೀಡಲಾಗದು ಎಂದು ಹೇಳಿತು.

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಪ್ರಾರ್ಥನೆಗೆ ತಡೆ ನೀಡಲು ನಕಾರ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ವಿಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ನೀಡಿದ ಅನುಮತಿ ರದ್ದುಪಡಿಸಬೇಕೆಂಬ ಕೋರಿಕೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಕುರಿತು ಮಸೀದಿ ಆಡಳಿತ ಮಂಡಳಿ ಮಾಡಿದ್ದ ಮನವಿಯನ್ನು ಅದು ತಿರಸ್ಕರಿಸಿದೆ. 

ಬರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ರಾಜಕೀಯ ಪ್ರೇರಿತ: ಎಚ್‌.ಡಿ.ದೇವೇಗೌಡ

ಆದರೆ ಮಸೀದಿ ಸಮಿತಿಯ ಅರ್ಜಿಯ ಹಿನ್ನೆಲೆಯಲ್ಲಿ, ಅಭಿಪ್ರಾಯ ಬಯಸಿ ಕಾಶಿ ವಿಶ್ವನಾಥ ದೇಗುಲ ಟ್ರಸ್ಟಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ಜೊತೆಗೆ ಮಸೀದಿಯಲ್ಲಿ ವ್ಯಾಪ್ತಿಯಲ್ಲಿ ಮುಸ್ಲಿಮರಿಗೆ ನಮಾಜ್‌ ಮಾಡಲು ಇರುವ ಅವಕಾಶವೂ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಹೇಳಿ, ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದೆ. ದೇಗುಲದ ನೆಲ ಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ಫೆ.26ರಂದು ಅಲಹಾಬಾದ್‌ ಹೈಕೋರ್ಟ್‌ ಆದೇಶ ಹೊರಡಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು