
ನವದೆಹಲಿ(ಜೂ.02): : ಮಹಾಮಾರಿ ಕೋವಿಡ್ನಿಂದಾಗಿ ತಂದೆ-ತಾಯಿ, ಬಂಧು ಬಳಗ ಮತ್ತು ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಕಲ್ಯಾಣಕ್ಕಾಗಿ ಕೈಗೊಳ್ಳಲಾಗಿರುವ ಯೋಜನೆಗಳ ಮಾಹಿತಿ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಈ ಯೋಜನೆಗಳ ಜಾರಿ ಮತ್ತು ನಿಗಾ ವಹಿಸಲು ಏನೆಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂಬುದರ ಮಾಹಿತಿಯನ್ನೂ ನೀಡಲು ಹೇಳಿದೆ.
ಚೀನಾ ಲ್ಯಾಬ್‌ನಲ್ಲೇ ಕೊರೋನಾ ಹುಟ್ಟು, ಅಮೆರಿಕಾದ ಫಂಡಿಂಗ್: ಮೋಸ ಮಾಡಿದ್ದ ಡ್ರ್ಯಾಗನ್!
ಈ ಬಗ್ಗೆ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಎಲ್. ನಾಗೇಶ್ವರ ರಾವ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠವು, ಅನಾಥ ಮಕ್ಕಳ ಮಾಹಿತಿ, ಅವರ ಗುರುತು ಮತ್ತು ಅವರ ಕಲ್ಯಾಣಕ್ಕಾಗಿ ಕೈಗೊಳ್ಳಲಾಗಿರುವ ಕ್ರಮಗಳ ವಿಸ್ತೃತ ಮಾಹಿತಿಯನ್ನು ತಮ್ಮ ಆಮಿಕಸ್ ಕ್ಯೂರಿ (ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಲಹೆ ಮತ್ತು ಸೂಚನೆಗಳನ್ನು ನೀಡುವವರು) ಆಗಿರುವ ಗೌರವ್ ಅಗರ್ವಾಲ್ ಅವರಿಗೆ ಸಲ್ಲಿಸಲು ಕಾರ್ಯದರ್ಶಿ ಅಥವಾ ಜಂಟಿ ಕಾರ್ಯದರ್ಶಿ ಹಂತದ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ.
ಉದ್ದಿಮೆಗಳಿಗೆ ಆಕ್ಸಿಜನ್ ನಿರ್ಬಂಧ 2 ದಿನದಲ್ಲಿ ತೆರವು ಸಾಧ್ಯತೆ!
ಕರ್ನಾಟಕ ಸೇರಿದಂತೆ ಅತಿಹೆಚ್ಚು ಅನಾಥರಾದ ಮಕ್ಕಳ ಹೊಂದಿದ 10 ರಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಮುಂದಿನ ಸೋಮವಾರ ವಿಚಾರಣೆ ನಡೆಸುವುದಾಗಿ ಹೇಳಿದೆ.
9,346 ಮಕ್ಕಳು ಅನಾಥ:
ಈ ನಡುವೆ, ಕೊರೋನಾದಿಂದ 141 ಮಕ್ಕಳು ತಂದೆ-ತಾಯಿ ಕಳೆದುಕೊಂಡಿದ್ದಾರೆ. 4451 ಮಕ್ಕಳು ಒಬ್ಬ ಪಾಲಕರನ್ನು ಕಳೆದುಕೊಂಡಿದ್ದಾರೆ. ಇವರು ಸೇರಿ 9346 ಮಕ್ಕಳಿಗೆ ರಕ್ಷಣೆ ಬೇಕಿದೆ ಎಂದು ಮಕ್ಕಳ ಹಕ್ಕುಗಳ ಆಯೋಗವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ