ಪ್ರಚೋದಕ ಟೀವಿ ಕಾರ‍್ಯಕ್ರಮ ನಿರ್ಬಂಧ

By Kannadaprabha NewsFirst Published Jan 29, 2021, 10:03 AM IST
Highlights

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಟೀವಿ ಕಾರ್ಯಕ್ರಮಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಸುಪ್ರಿಂ ಕೋರ್ಟ್ ಕೇಂದ್ರವನ್ನ ತರಾಟೆಗೆ ತೆಗೆದುಕೊಂಡಿದೆ.  ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಸುದ್ದಿ ವಾಹಿನಿಗಳು ಇನ್ನೊಬ್ಬರನ್ನು ಪ್ರಚೋದಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಬಾರದು ಎಂದಿದೆ. 

ನವದೆಹಲಿ (ಜ.29): ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಟೀವಿ ಕಾರ್ಯಕ್ರಮಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಸರ್ಕಾರವನ್ನು ಸುಪ್ರೀಂಕೋರ್ಟ್‌  ತರಾಟೆಗೆ ತೆಗೆದುಕೊಂಡಿದೆ.

ಕಳೆದ ವರ್ಷ ಕೊರೋನಾ ವೈರಸ್‌ ಆರಂಭಿಕ ಹಂತದಲ್ಲಿ ಇದ್ದಾಗ ತಬ್ಲೀಘಿ ಜಮಾತ್‌ ಸಭೆಯ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸುವ ವೇಳೆ ಸುಪ್ರೀಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಟಿಆರ್‌ಪಿಗಾಗಿ ಅರ್ನಬ್‌ 48 ಲಕ್ಷ ರೂ. ಕೊಟ್ಟಿದ್ರು: ಬಾರ್ಕ್ ಮಾಜಿ ಸಿಇಒ! .

ರೈತ ಪ್ರತಿಭಟನೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಟ್ರ್ಯಾಕ್ಟರ್‌ ಪರೇಡ್‌ ಸಂದರ್ಭದಲ್ಲಿ ದೆಹಲಿಯ ಕೆಲವು ಭಾಗಗಳಲ್ಲಿ ಸರ್ಕಾರ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಿದ ಕ್ರಮವನ್ನು ಉಲ್ಲೇಖಿಸಿದ ಸುಪ್ರೀಂಕೋರ್ಟ್‌, ‘ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಸುದ್ದಿ ವಾಹಿನಿಗಳು ಇನ್ನೊಬ್ಬರನ್ನು ಪ್ರಚೋದಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಬಾರದು. 

ಸುದ್ದಿವಾಹಿನಿಗಳು ಘಟನೆಯ ಸತ್ಯಯುತ ಹಾಗೂ ಸಮಂಜಸ ವರದಿಗಳನ್ನು ಪ್ರಸಾರ ಮಾಡುವ ಅಗತ್ಯವಿದೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಇಂತಹ ಪ್ರಚೋದನಕಾರಿ ಕಾರ್ಯಕ್ರಮಗಳಿಗೆ ಸರ್ಕಾರ ಕಡಿವಾಣ ಹಾಕಬೇಕು’ ಎಂದು ಹೇಳಿತು.

click me!