
ನವದೆಹಲಿ (ಮಾ.05): ಪ್ರಸ್ತುತ ಒಟಿಟಿ ವೇದಿಕೆಯಲ್ಲಿ ಅಶ್ಲೀಲ ಅಂಶಗಳನ್ನು ಒಳಗೊಂಡಿರುವ ವಿಡಿಯೋ ಶೋಗಳು ಪ್ರಸಾರವಾಗುತ್ತಿದ್ದು, ಇಂಥ ಕಾರ್ಯಕ್ರಮಗಳ ನಿಯಂತ್ರಣಕ್ಕೆ ಕ್ರಮಗಳ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.
ಶುಕ್ರವಾರ ಈ ಬಗ್ಗೆ ಪ್ರಸ್ತಾಪಿಸಿದ ನ್ಯಾ.ಅಶೋಕ್ ಭೂಷಣ್ ನೇತೃತ್ವದ ಪೀಠ, ಒಟಿಟಿಯಲ್ಲಿ ಅಶ್ಲೀಲ ವಿಷಯಗಳು ಪ್ರಸಾರವಾಗುತ್ತಿವೆ. ಇದರ ನಿಯಂತ್ರಣಕ್ಕೆ ಸರ್ಕಾರ ಏನೆಲ್ಲಾ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಎಂಬುದರ ಮಾಹಿತಿಯನ್ನು ಶುಕ್ರವಾರ ತನಗೆ ನೀಡಬೇಕು ಎಂದು ಸೂಚಿಸಿದೆ.
ಸೋಶಿಯಲ್ ಮೀಡಿಯಾಗೆ ಮೂಗುದಾರ, ಅವಹೇಳನಕಾರಿ ಪೋಸ್ಟ್ ಹಾಕಿದ್ರೆ ಎಚ್ಚರ!
ಏತನ್ಮಧ್ಯೆ, ಹಿಂದೂ ದೇವರಿಗೆ ಅಪಮಾನ ಮಾಡಿದೆ ಎನ್ನಲಾದ ‘ತಾಂಡವ್’ ವೆಬ್ ಸರಣಿಯ ಪ್ರಕರಣದಲ್ಲಿ ಬಂಧನ ಭೀತಿಗೆ ತುತ್ತಾಗಿರುವ ಅಮೆಜಾನ್ ಪ್ರೈಮ್ ವಿಡಿಯೋದ ಭಾರತದ ಮುಖ್ಯಸ್ಥೆ ಅಪರ್ಣಾ ಪುರೋಹಿತ್ ಅವರ ನಿರೀಕ್ಷಣಾ ಜಾಮೀನಿನ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಶುಕ್ರವಾರ ವಿಚಾರಣೆ ನಡೆಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ