ಕೇಂದ್ರಕ್ಕೆ ಇಂದು ಸುಪ್ರೀಂ ಪರೀಕ್ಷೆ: ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ಧ ಸಲ್ಲಿಸಿದ ಅರ್ಜಿ ವಿಚಾರಣೆ

By Kannadaprabha News  |  First Published Nov 20, 2023, 9:08 AM IST

ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳನ್ನು ಅನುಮೋದಿಸುವಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂಬ ಆರೋಪ ಸೇರಿದಂತೆ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.


ಜಡ್ಜ್‌ ನೇಮಕ ವಿಳಂಬ: ಇಂದು ಸುಪ್ರೀಂನಲ್ಲಿ ವಿಚಾರಣೆ
ನವದೆಹಲಿ (ನವೆಂಬರ್ 20, 2023): ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳನ್ನು ಅನುಮೋದಿಸುವಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂಬ ಆರೋಪ ಸೇರಿದಂತೆ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸುಧಾಂಶು ಧುಲಿಯಾ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ವಿಚಾರಣೆ ಮಾಡಲಿದೆ.

ನವೆಂಬರ್ 7 ರಂದು ಅರ್ಜಿಗಳನ್ನು ಆಲಿಸಿದ್ದ ಸುಪ್ರೀಂಕೋರ್ಟ್, ಉನ್ನತ ನ್ಯಾಯಾಂಗಕ್ಕೆ ನೇಮಕ ಮಾಡಲು ಕೊಲಿಜಿಯಂ ಮಾಡಿದ ಶಿಫಾರಸುಗಳ ಬಗ್ಗೆ ಕೇಂದ್ರ ಸರ್ಕಾರ ಪಕ್ಷಪಾತ ಧೋರಣೆ ತಾಳುತ್ತಿದೆ. ಬೇಕಾದವರನ್ನು ಮಾತ್ರ ಆಯ್ಕೆ ಮಾಡಿಕೊಂಡು ಉಳಿದವರ ಬಗ್ಗೆ ನಿರ್ಣಯ ಕೈಗೊಳ್ಳಲು ವಿಳಂಬ ಮಾಡುತ್ತಿದೆ. ಇದರಿಂದ ನ್ಯಾಯಾಂಗದ ಕರ್ತವ್ಯಕ್ಕೆ ತೊಂದರೆ ಉಂಟಾಗುತ್ತಿದೆ. ಇದಲ್ಲದೆ ವರ್ಗಾವಣೆ ಶಿಫಾರಸುಗಳ ಬಗ್ಗೆಯೂ ಕೇಂದ್ರ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿತ್ತು.

Tap to resize

Latest Videos

ಇದನ್ನು ಓದಿ: ಪಂಜಾಬ್‌ ಗೌರ್ನರ್‌ಗೆ ಸುಪ್ರೀಂ ಚಾಟಿ: ಮಸೂದೆಗೆ ಸಹಿ ಹಾಕದ್ದಕ್ಕೆ ರಾಜ್ಯಪಾಲರಿಗೆ ತೀವ್ರ ತರಾಟೆ

ಒಟ್ಟಾರೆ 14 ಶಿಫಾರಸುಗಳು ಇನ್ನೂ ಅಂಗೀಕಾರಕ್ಕೆ ಕಾಯುತ್ತಿವೆ. 2ನೇ ಬಾರಿ ಶಿಫಾರಸಾದ ಐವರು ನ್ಯಾಯಮೂರ್ತಿಗಳ ನೇಮಕಕ್ಕೂ ಕೇಂದ್ರ ಮೀನ ಮೇಷ ಎಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ನ್ಯಾಯಮೂರ್ತಿಗಳ ನೇಮಕ ವಿಳಂಬಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಕೀಲರ ಸಂಘದ ಅರ್ಜಿ ಸೇರಿ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಹಲವಾರು ತಿಂಗಳಿಂದ ಈ ಬಗ್ಗೆ ಕೇಂದ್ರ - ಸುಪ್ರೀಂ ಕೋರ್ಟ್‌ ಸಂಘರ್ಷ ನಡೆಯುತ್ತಿದೆ.

 

ಇದನ್ನೂ ಓದಿ: ಮಸೂದೆಗೆ ಸಹಿ ವಿಳಂಬ: ರಾಜ್ಯಪಾಲ ಆರಿಫ್ ವಿರುದ್ಧ ಸುಪ್ರೀಂಗೆ ಕೇರಳ ಸರ್ಕಾರ

ಕೇರಳ, ತಮಿಳುನಾಡು ರಾಜ್ಯಪಾಲರ ವಿರುದ್ಧದ ಅರ್ಜಿ ಇಂದು ವಿಚಾರಣೆ
ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಮ್ಮ ರಾಜ್ಯಪಾಲರ ವಿರುದ್ಧ ತಮಿಳುನಾಡು ಮತ್ತು ಕೇರಳ ಸರ್ಕಾರಗಳು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ತಮಿಳುನಾಡು ರಾಜ್ಯಪಾಲ ಆರ್‌.ಎನ್‌. ರವಿ ಅವರು ವಿಧಾನಸಭೆ ಅಂಗೀಕರಿಸಿದ 10 ಮಸೂದೆಗಳಿಗೆ ಒಪ್ಪಿಗೆ ನೀಡದೆ ಹಿಂದಿರುಗಿಸಿದ್ದರು. ಇದೀಗ ಮಸೂದೆಗಳನ್ನು ಮರು ಅಂಗೀಕರಿಸಿ ಮತ್ತೆ ಒಪ್ಪಿಗೆಗೆ ಕಳುಹಿಸಲಾಗಿದೆ.

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರು ಮಸೂದೆಗಳಿಗೆ ಸಹಿ ಹಾಕದೆ ವಿಳಂಬ ಮಾಡುತ್ತಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿದೆ. ಈ ಹಿಂದೆ ರಾಜ್ಯಪಾಲರ ವಿರುದ್ಧ ಸಲ್ಲಿಕೆಯಾಗಿದ್ದ ಆರೋಪದ ಕುರಿತು ಮೌಖಿಕ ಅಭಿಪ್ರಾಯ ಹೊರಹಾಕಿದ್ದ ಸುಪ್ರೀಂಕೋರ್ಟ್ ‘ಕಾಲಮಿತಿಯೊಳಗೆ ಕೆಲಸ ಮಾಡದಿರುವುದು ಗಂಭಿರ ವಿಷಯವಾಗಿದೆ’ ಎಂದು ಕಿಡಿಕಾರಿತ್ತು.

click me!