ಸೆಪ್ಟೆಂಬರ್‌ 30ರೊಳಗೆ ಪದವಿ ಪರೀಕ್ಷೆ ನಡೆಸಿ: UGC ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Kannadaprabha News   | Asianet News
Published : Aug 28, 2020, 12:26 PM ISTUpdated : Aug 28, 2020, 01:16 PM IST
ಸೆಪ್ಟೆಂಬರ್‌ 30ರೊಳಗೆ ಪದವಿ ಪರೀಕ್ಷೆ ನಡೆಸಿ: UGC ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಸಾರಾಂಶ

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ವರ್ಷ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 30ರೊಳಗೆ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಆ.28): ವಿಶ್ವವಿದ್ಯಾಲಯಗಳ ಅಂತಿಮ ವರ್ಷ/ಸೆಮಿಸ್ಟರ್‌ ಪರೀಕ್ಷೆಗಳನ್ನು ನಡೆಸಬೇಕು, ಸುಮ್ಮನ್ನೇ ಅವರನ್ನು ಪ್ರಮೋಟ್ ಮಾಡಬಾರದು ಎಂದು ಯುಜಿಸಿ ನೀಡಿದ್ದ ಅದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ನ್ಯಾ ಅಶೋಕ್‌ ಭೂಷಣ್‌ ಅವರ ನೇತೃತ್ವದ ತ್ರಿಸದಸ್ಯ ಪೀಠ ಇಂದು ತೀರ್ಪನ್ನು ಪ್ರಕಟಿಸಿದ್ದು, ಸೆ.30ರ ಒಳಗಾಗಿ ದೇಶದೆಲ್ಲೆಡೆ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸುವಂತೆ ಯುಜಿಸಿ ಜು.6ರಂದು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆಯನ್ನು ಅನುಮೋದಿಸಿದೆ.  ಆದರೆ ರಾಜ್ಯಗಳು ಕೊರೋನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೆಪ್ಟೆಂಬರ್ 30ರೊಳಗಾಗಿ ಯಾವಾಗ ಬೇಕಾದರೂ ಪರೀಕ್ಷೆ ನಡೆಸುವ ಸ್ವಾತಂತ್ರವನ್ನು ಈ ತ್ರಿಸದಸ್ಯ ಪೀಠ ಆದೇಶ ನೀಡಿದೆ. 

ರಾಜ್ಯಗಳು ವಿದ್ಯಾರ್ಥಿಗಳ ಈ ಹಿಂದಿನ ಅಂಕಗಳು ಅಥವಾ ಇಂಟರ್ನಲ್ ಅಂಕಗಳನ್ನು ಆಧರಿಸಿ ಅವರನ್ನು ಪ್ರಮೋಟ್ ಮಾಡಬಾರದು. ಆದರೆ ಸೆಪ್ಟೆಂಬರ್ 30ರ ನಂತರ ಪರೀಕ್ಷೆ ನಡೆಸುವುದಾದರೆ ಯುಜಿಪಿಯ ಜತೆ ಮಾತುಕತೆ ನಡೆಸಬೇಕು ಎಂದು ದೇಶದ ಸರ್ವೊಚ್ಚ ನ್ಯಾಯಾಲಯ ಸೂಚಿಸಿದೆ.

JEE-NEET ವಿಚಾರದಲ್ಲೂ ರಾಜಕೀಯ ಮಾಡುತ್ತಿರುವವರು ಯಾರು? ಮೋದಿಗೆ ಬಂದ ಪತ್ರ

ಸೆ.30ರ ಒಳಗಾಗಿ ದೇಶದೆಲ್ಲೆಡೆ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸುವಂತೆ ಯುಜಿಸಿ ಜು.6ರಂದು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಒಂದು ವೇಳೆ ಪರೀಕ್ಷೆಗಳು ನಡೆಯದೇ ಹೋದರೆ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ತನ್ನ ನಡೆಯನ್ನು ಯುಜಿಸಿ ಸಮರ್ಥಿಸಿಕೊಂಡಿತ್ತು. 

ಇದರ ವಿರುದ್ಧ ಹಲವರು ಸುಪ್ರೀಂಕೋರ್ಟ್‌ ಕದ ಬಡಿದಿದ್ದರು.ಕೊರೋನಾ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಲು ವಿರೋಧ ವ್ಯಕ್ತಪಡಿಸಿರುವ ದೆಹಲಿ, ಮಹಾರಾಷ್ಟ್ರ, ಒಡಿಶಾ, ಪಂಜಾಬ್‌, ಹರ್ಯಾಣ ಮತ್ತು ಮಧ್ಯ ಪ್ರದೇಶ ರಾಜ್ಯಗಳು ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿವೆ. ಇದು ವಿದ್ಯಾರ್ಥಿಗಳ ಗೊಂದಲಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇವಲ 1% ಜನರ ಕೈಯಲ್ಲಿ ಭಾರತದ 40% ಸಂಪತ್ತು, ವಿಶ್ವ ಅಸಮಾನತೆ ವರದಿ 2026 ರ ಭಯಾನಕ ಚಿತ್ರ!
ನ್ಯಾಯಾಂಗ ಬೆದರಿಸಿ ಶತಮಾನಗಳ ಕಾರ್ತಿಕ ದೀಪ ಸಂಪ್ರದಾಯ ಮುಗಿಸಲು ಡಿಎಂಕೆ ಯತ್ನ ಬಹಿರಂಗ