
ನವದೆಹಲಿ (ಮಾ.1) : ಕೊಯಮತ್ತೂರು ಬಳಿ ಇರುವ ಆಧ್ಯಾತ್ಮಿಕ ಪ್ರವರ್ತಕ ಸದ್ಗುರು ಅವರ ಈಶ ಫೌಂಡೇಶನ್ ವಿರುದ್ಧ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್ ಅನ್ನು ರದ್ದುಪಡಿಸಿದ್ದ ಮದ್ರಾಸ್ ಹೈಕೋರ್ಟ್ ತೀರ್ಪಿನ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅಲ್ಲಿರುವ ಯೋಗ ಹಾಗೂ ಧ್ಯಾನ ಕೇಂದ್ರ ಕಟ್ಟಡಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.
ಕೊಯಮತ್ತೂರಿನ ವೆಲ್ಲಿಯಂಗಿರಿ ಬೆಟ್ಟದ ತಪ್ಪಲಿನಲ್ಲಿ, ಪರಿಸರಕ್ಕೆ ಸಂಬಂಧಿಸಿದ ಪೂರ್ವ ಅನುಮತಿ ಇಲ್ಲದೆ, ಈಶ ಕಟ್ಟಡಗಳನ್ನು ನಿರ್ಮಿಸಿದ್ದರ ವಿರುದ್ಧ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ಅದನ್ನು ಹೈಕೋರ್ಟ್ 2022ರ ಡಿ.14ರಂದು ರದ್ದುಗೊಳಿಸಿತ್ತು. ಬಳಿಕ ಮಂಡಳಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಆದರೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಒಪ್ಪದ ನ್ಯಾ। ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ್ ಅವರ ಪೀಠ, ‘ಸಂಸ್ಥೆಯ ಯೋಗ ಮತ್ತು ಧ್ಯಾನ ಕೇಂದ್ರದ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಅದು ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲಾ ಸೂಚನೆ ಹಾಗೂ ನಿಯಮಗಳನ್ನು ಅನುಸರಿಸಬೇಕು. ಒಂದೊಮ್ಮೆ ಕೇಂದ್ರವನ್ನು ವಿಸ್ತರಿಸಬೇಕಾಗಿ ಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯಬೇಕು’ ಎಂದು ಹೇಳಿದೆ.
ಸದ್ಗುರು ಕೇಂದ್ರದಲ್ಲಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಚರ್ಚೆ ಮಾಡಿಲ್ಲ: ಬಸವರಾಜ ಬೊಮ್ಮಾಯಿ
ಆದರೆ ತನ್ನ ಆದೇಶವು ಇತರ ಅಕ್ರಮ ನಿರ್ಮಾಣಗಳಿಗೆ ಸಂಬಂಧಿಸಿಲ್ಲ. ಈ ನಿರ್ದಿಷ್ಟ ವಿಷಯಕ್ಕೆ ಮಾತ್ರ ಸಂಬಂಧಿಸಿದೆ ಎಂದು ಅದು ಸ್ಪಷ್ಟಪಡಿಸಿದೆ.
ಭಾರತದ ಈ ಏಳು ಆಶ್ರಮಗಳಲ್ಲಿ ಆಹಾರ, ವಸತಿ ಎಲ್ಲವೂ ಉಚಿತ… ಜೊತೆಗೆ ಶಾಂತಿ, ನೆಮ್ಮದಿಯೂ ಸಿಗುತ್ತೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ