'ತಕ್ಷಣವೇ ಶರಣಾಗಿ..' ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್‌ ಹೈಕೋರ್ಟ್‌!

Published : Jul 01, 2023, 01:12 PM IST
'ತಕ್ಷಣವೇ ಶರಣಾಗಿ..' ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್‌ ಹೈಕೋರ್ಟ್‌!

ಸಾರಾಂಶ

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ತಪ್ಪಾಗಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು 2022ರ ಜೂನ್ 25 ರಂದು ಮುಂಬೈ ಮೂಲದ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದ್ದರು. ಬಳಿಕ ಸುಪ್ರೀಂ ಕೋರ್ಟ್ ಆಕೆಗೆ ಜಾಮೀನು ನೀಡಿತ್ತು.

ಅಹಮದಾಬಾದ್ (ಜು.1): 2022ರ ಗುಜರಾತ್‌ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಕಾರ್ಯಕರ್ತೆಗೆ ಗುಜರಾತ್‌ ಹೈಕೋರ್ಟ್‌ ಆಘಾತ ನೀಡಿದೆ. ಕಳೆದ ವರ್ಷ ಆಕೆ ಸಲ್ಲಿಕೆ ಮಾಡಿದ್ದ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌, ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವಲ್ಲದೆ, ತಕ್ಷಣವೇ ಶರಣಾಗುವಂತೆ ಸೂಚನೆ ನೀಡಿದೆ. ಸೆಪ್ಟೆಂಬರ್ 2022 ರಲ್ಲಿ ಸುಪ್ರೀಂ ಕೋರ್ಟ್ ಮಂಜೂರು ಮಾಡಿದ ಮಧ್ಯಂತರ ಜಾಮೀನಿನ ಮೂಲಕ ಸೆಟಲ್ವಾಡ್ ಅವರನ್ನು ಇಲ್ಲಿಯವರೆಗೆ ಬಂಧನದಿಂದ ರಕ್ಷಿಸಿಕೊಂಡಿದ್ದರಯ. ನಂತರ ಈ ಪ್ರಕರಣದಲ್ಲಿ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಯಿತು. ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಅವರು ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದ ನಂತರ ಹಿರಿಯ ವಕೀಲ ಮಿಹಿರ್ ಠಾಕೋರ್, ತೀರ್ಪಿನ ಕಾರ್ಯಾಚರಣೆಯನ್ನು 30 ದಿನಗಳ ಅವಧಿಗೆ ತಡೆಹಿಡಿಯುವಂತೆ ನ್ಯಾಯಾಲಯವನ್ನು ಕೋರಿದರು ಆದರೆ ನ್ಯಾಯಮೂರ್ತಿ ದೇಸಾಯಿ ಈ ಮನವಿಯನ್ನು ತಿರಸ್ಕರಿಸಿದರು.

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಈ ಕೇಸ್‌ನಲ್ಲಿ ಸಿಲುಕಿಸಲು ಸುಳ್ಳು ಸಾಕ್ಷ್ಯದ ಸಂಚು ರೂಪಿಸಿದ ಆರೋಪದ ಮೇಲೆ ಅಹಮದಾಬಾದ್ ಡಿಟೆಕ್ಷನ್ ಆಫ್ ಕ್ರೈಮ್ ಬ್ರಾಂಚ್ (ಡಿಸಿಬಿ) ಎಫ್‌ಐಆರ್ ಮೇಲೆ 2022ರ ಜೂನ್ 25 ರಂದು ಸೆಟಲ್ವಾಡ್ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದರು. ಆಕೆಯನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು ಮತ್ತು ಜುಲೈ 2 ರಂದು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಮೋದಿಗೆ ಮರಣದಂಡನೆ ಸಿಗಬೇಕು, ತೀಸ್ತಾ ಸೆಟಲ್ವಾಡ್ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಸ್ಫೋಟಕ ಮಾಹಿತಿ ಬಹಿರಂಗ!

ವಿಶೇಷ ತನಿಖಾ ತಂಡ (ಎಸ್‌ಐಟಿ) ವಿರುದ್ಧ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಜೂನ್ 24 ರಂದು ವಜಾಗೊಳಿಸಿದ ಒಂದು ದಿನದ ನಂತರ ಆಕೆಯ ಸಹ ಆರೋಪಿ ಮಾಜಿ ಐಪಿಎಸ್ ಆರ್ ಬಿ ಶ್ರೀಕುಮಾರ್ ಅವರ ಬಂಧನವಾಗಿತ್ತು. ಗಲಭೆಯಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ಎಸ್‌ಐಟಿ ಕ್ಲೀನ್‌ಚಿಟ್‌ ನೀಡಿತ್ತು.

2002 Gujarat Riots Case: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?
ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ