ನಟ ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಶನಿವಾರ ಪತ್ರ ಬರೆದಿದ್ದಾರೆ.
ಮುಂಬೈ (ಆ. 02): ನಟ ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಶನಿವಾರ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪತ್ರದ ಚಿಕ್ಕ ಟಿಪ್ಪಣಿಯೊಂದನ್ನು ಪೋಸ್ಟ್ ಮಾಡಿರುವ ಶ್ವೇತಾ, ‘ನನ್ನ ಸಹೋದರನಿಗೆ ಬಾಲಿವುಡ್‌ನಲ್ಲಿ ಗಾಡ್‌ಫಾದರ್ ಇರಲಿಲ್ಲ. ಈಗ ನಮ್ಮ ಸಹಾಯಕ್ಕೆ ಯಾರೂ ಇಲ್ಲ. ನಾವು ಸರಳ ಕುಟುಂಬದಿಂದ ಬಂದಿದ್ದೇವೆ. ಈ ಪ್ರಕರಣವನ್ನು ತಕ್ಷಣವೇ ಪರಿಶೀಲಿಸಿ, ನಿಷ್ಪಕ್ಷಪಾತ ತನಿಖೆ ಹಾಗೂ ಯಾವುದೇ ಸಾಕ್ಷ್ಯಗಳನ್ನು ತಿರುಚದಂತೆ ಖಾತರಿಪಡಿಸಿಕೊಳ್ಳಿ ಎಂದು ನಾನು ನಿಮ್ಮಲ್ಲಿ ಮನವಿ ಮಾಡಿಳ್ಳುತ್ತೇನೆ’ ಎಂದು ಹೇಳಿದ್ದಾರೆ.
ಸುಶಾಂತ್ ಖಾತೆಯಿಂದ 15 ಕೋಟಿ ವರ್ಗಾವಣೆ! ಇಡಿಯಿಂದ ಕೇಸ್ ದಾಖಲು
ಇದೇ ವೇಳೆ ಸುಶಾಂತ್ ಸಿಂಗ್ ತಂದೆ ಬಯಸಿದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.