
ನವದೆಹಲಿ (ಏ.3): ಬಿಹಾರದಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ತಾವು ಕ್ಯಾನ್ಸರ್‌ನಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಇದೇ ಕಾರಣಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ. ' ಬಹುಶಃ ನನ್ನ ಜನರಿಗೆ ವಿಚಾರ ತಿಳಿಸುವ ಸಮಯ ಈಗ ಬಂದಿದೆ ಎಂದುಕೊಳ್ಳುತ್ತೇನೆ. ನನ್ನ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮಾಹಿತಿ ನೀಡಿದ್ದೇನೆ. ಬಿಹಾರ ಹಾಗೂ ಭಾರತೀಯ ಜನತಾ ಪಾರ್ಟಿಗೆ ನಾನು ಎಂದಿಗೂ ಋಣಿಯಾಗಿರುತ್ತೇನೆ' ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು, ಫೆಬ್ರವರಿಯಲ್ಲಿ, ರಾಜ್ಯಸಭಾ ಚುನಾವಣೆಗೆ ಬಿಹಾರದಿಂದ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದಾಗ, ಸುಶೀಲ್ ಮೋದಿ ಅವರ ಹೆಸರು ಕಾಣೆಯಾಗಿತ್ತು. ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಊಹಾಪೋಹಕ್ಕೆ ಕಾರಣವಾಗಿತ್ತು.
ಬಿಹಾರದಲ್ಲಿ ಬಿಜೆಪಿ ಪಾಲಿನ ಪೋಸ್ಟರ್ ಬಾಯ್ ಆಗಿದ್ದ ಸುಶೀಲ್ ಕುಮಾರ್ ಮೋದಿ ಬಿಜೆಪಿಗೆ ರಾಜೀನಾಮೆ ನೀಡಬಹುದು ಎಂದು ವರದಿಯಾಗಿತ್ತು. ಆದರೆ, ಮೂರು ದಶಕಗಳಿಂದ ಬಿಹಾರದ ಬಿಜೆಪಿಯ ಮೇಲೆ ದೊಡ್ಡ ಮಟ್ಟದ ಪ್ರಭಾವ ಬೀರಿದ್ದ ನಾಯಕ ಯಾವ ನಿರ್ಧಾರವನ್ನೂ ತಾಳದೇ ಸುಮ್ಮನಾಗಿದ್ದರು.
ಸಲಿಂಗ ವಿವಾಹಕ್ಕೆ ಬಿಜೆಪಿ ಸಂಸದ ಸುಶೀಲ್ ಮೋದಿ ಪ್ರಬಲ ವಿರೋಧ
ಬಹುಶಃ ಮುಂದೊಂದು ದಿನ ಅವರನ್ನು ಬಿಜೆಪಿ ಯಾವುದಾದರೂ ರಾಜ್ಯದ ರಾಜ್ಯಪಾಲರನ್ನಾಗಿ ಮಾಡಬಹುದು ಎಂದು ಬಿಹಾರ ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದರು. ಆದರೆ, ಅವರು ರಾಜಕೀಯದಿಂದ ವಿಮುಖರಾಗಲು ಕ್ಯಾನ್ಸರ್ ಕಾರಣ ಎಂದು ಗೊತ್ತಾಗಿದೆ. ಸುಶೀಲ್ ಮೋದಿ ಅವರು ಸುಮಾರು 11 ವರ್ಷಗಳ ಕಾಲ ಜೆಡಿಯು ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉಪನಾಯಕರಾಗಿ ಸೇವೆ ಸಲ್ಲಿಸಿದರು ಮತ್ತು ರಾಜಕೀಯದ ಹೊರತಾಗಿ ನಿತೀಶ್ ಕುಮಾರ್ ಹಾಗೂ ಸುಶೀಲ್ ಕುಮಾರ್ ಉತ್ತಮ ಬಾಂಧವ್ಯವನ್ನೂ ಹೊಂದಿದ್ದಾರೆ.
ಸುಶೀಲ್ ವಿರುದ್ಧ ಪಾಸ್ವಾನ್ ಪತ್ನಿ ಘಟಬಂಧನ ಅಭ್ಯರ್ಥಿ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ