ಸುವೇಂದು ತಂದೆ ಶಿಶಿರ್‌ ಬಿಜೆಪಿಗೆ!

Published : Mar 22, 2021, 08:28 AM IST
ಸುವೇಂದು ತಂದೆ ಶಿಶಿರ್‌ ಬಿಜೆಪಿಗೆ!

ಸಾರಾಂಶ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್| ಸುವೇಂದು ಬೆನ್ನಲ್ಲೇ ತಂದೆಯೂ ಬಿಜೆಪಿಗೆ

ಈಗ್ರಾ(ಮಾ.22): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಗೆ ಮತ್ತೊಂದು ಆಘಾತ ಎದುರಾಗಿದೆ.

ಟಿಎಂಸಿ ಹಿರಿಯ ಸಂಸದ ಶಿಶಿರ್‌ ಅಧಿಕಾರಿ ಭಾನುವಾರ ಗೃಹ ಸಚಿವ ಅಮಿತ್‌ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಬಳಿಕ ಮಾತನಾಡಿದ ಶಿಶಿರ್‌ ಅಧಿಕಾರಿ ಅವರು, ‘ನಮ್ಮ ಕುಟುಂಬವನ್ನು ಟಿಎಂಸಿ ಹೊರಹಾಕಿದ ರೀತಿ ಇತಿಹಾಸದಲ್ಲಿ ಶಾಶ್ವತವಾಗಿ ಬರೆಯಲ್ಪಡುತ್ತದೆ. ಆದರೆ ನಾವು ಎಲ್ಲಾ ರಾಜಕೀಯ ದಾಳಿ ಮತ್ತು ದೌರ್ಜನ್ಯದ ವಿರುದ್ಧ ಸೆಟೆದು ನಿಲ್ಲುತ್ತೇವೆ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಅವರ ಮುಂದಾಳತ್ವದಲ್ಲಿ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

ಶಿಶಿರ್‌, ಇತ್ತೀಚೆಗಷ್ಟೇ ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೇಂದು ಅಧಿಕಾರಿ ಅವರ ತಂದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್