ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

Published : Apr 01, 2021, 09:38 PM ISTUpdated : Apr 01, 2021, 09:47 PM IST
ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

ಸಾರಾಂಶ

ಚುನಾವಣೆ ಪ್ರಚಾರಕ್ಕಾಗಿ ತಮಿಳುನಾಡಿನಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮೋದಿ ಭೇಟಿ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಮಧುರೈ(ಎ.01): ಪಂಚ ರಾಜ್ಯ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಚುನಾವಣಾ ರ್ಯಾಲಿಗಾಗಿ ತಮಿಳುನಾಡಿಗೆ ತೆರಳಿರುವ ಪ್ರಧಾನಿ ನರೇಂದ್ರ ಮಧುರೈ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ!

ಶುಕ್ರವಾರ(ಎ.02) ನರೇಂದ್ರ ಮೋದಿ ತಮಿಳುನಾಡಿನಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ ಪನ್ನೀರಸೆಲ್ವಂ ಹಾಗೂ ಎನ್‌ಡಿಎ ಕೂಟದ ಮುಖಂಡರ ಜೊತೆ ಮೋದಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. 

 

ಚುನಾವಣಾ ರ್ಯಾಲಿಗಾಗಿ ಇಂದು(ಎ.01) ರಾತ್ರಿ 8.30ರ ಹೊತ್ತಿಗೆ ಮಧುರೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ, ಬಳಿಕ ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಶುಕ್ರವಾರ ಬೆಳಗ್ಗೆ 11.30ರಿಂದ ಮೋದಿ ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. 

ಎಚ್. ಡಿ. ದೇವೇಗೌಡ ದಂಪತಿಗೆ ಕೊರೋನಾ: ಮಾಜಿ ಪಿಎಂಗೆ ಮೋದಿ ವಿಶೇಷ ಆಫರ್!

ತಮಿಳುನಾಡಿನ ಬಳಿಕ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 12.30ರ ಹೊತ್ತಿಗೆ ಕೇರಳಕ್ಕೆ ತೆರಳಲಿದ್ದಾರೆ. ಮಧುರೈ ಮೀನಾಕ್ಷಿ ದೇವಸ್ಥಾಕ್ಕೆ ಮೋದಿ ಆಗಮನದಿಂದ ಭಾರಿ ಭದ್ರತೆ ಕೈಗೊಳ್ಳಲಾಗಿತ್ತು.

ತಮಿಳುನಾಡು ವಿಧಾನಸಭಾ ಚುನಾವಣೆ ಎಪ್ರಿಲ್ 6 ರಂದು ನಡೆಯಲಿದೆ. 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮುಖ್ಯಮಂತ್ರಿ ಜಯಲಲಿತಾ(2018) ಹಾಗೂ ಎಂ ಕರುಣಾನಿಧಿ(2016) ನಿಧನದ ಬಳಿಕ ತಮಿಳುನಾಡು ಎದುರಿಸುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಕೇಶ್‌ ಅಂಬಾನಿ ಮನೆ ತಿಂಗಳ ವಿದ್ಯುತ್‌ ಬಿಲ್‌ 70 ಲಕ್ಷ ರು.
India Latest News Live: ಕೊನೆಗೂ ಮುಗಿಯಿತಾ ಈ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ವೃತ್ತಿಬದುಕು?