
ಮದುರೈ(ಫೆ.20): ತಮಿಳುನಾಡಿನಲ್ಲಿ ನಡೆಯುತ್ತಿರುವ ಪೌರಾಡಳಿತ ಚುನಾವಣೆಯ(Local Body Electiion) ವೇಳೆ ಹಿಜಾಬ್(Hijab) ಧರಿಸಿದ್ದ ಮಹಿಳೆಗೆ ಮತ ಹಾಕಲು ಬಿಜೆಪಿ ಏಜೆಂಟ್(BJP Poll Agent) ಅಡ್ಡಿಪಡಿಸಿದ ಘಟನೆ ನಡೆದಿದೆ. ಕೆಲಕಾಲ ಮತಗಟ್ಟೆಯಲ್ಲಿ ಮಾತಿನ ಚಕಮಕಿ ನಡೆಯಿತು.
ವೇಲೂರಿನ ಮತಗಟ್ಟೆಯಲ್ಲಿ ಹಿಜಾಬ್ ಧರಿಸಿದ್ದ ಮಹಿಳೆಯೊಬ್ಬರು(Women) ತನ್ನ ಮತ ಚಲಾಯಿಸಲು ಆಗಮಿಸಿದಾಗ, ‘ಹಿಜಾಬ್ ಧರಿಸಿರುವುದರಿಂದ ಆಕೆಯ ಗುರುತು ಸಿಗುತ್ತಿಲ್ಲ. ಹಾಗಾಗಿ ಮತ ಚಲಾಯಿಸಲು ಬಿಡಬಾರದು’ ಎಂದು ಬಿಜೆಪಿ ಏಜೆಂಟ್ ಆಗ್ರಹಿಸಿದ್ದಾರೆ. ಇದರಿಂದಾಗಿ ಮತಗಟ್ಟೆಅಧಿಕಾರಿ, ಪೊಲೀಸರು ಮತ್ತು ಏಜೆಂಟ್ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ. ನಂತರ ಆತನನ್ನು ಮತಗಟ್ಟೆಯಿಂದ ಹೊರಹಾಕುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಲಾಯಿತು. ಹಿಜಾಬ್ ಧರಿಸಿದ್ದ ಮಹಿಳೆ ಮತ ಚಲಾಯಿಸಿದರು.
Lavanya Suicide Case: ಜಾಮೀನಿನ ಪಡೆದ ಪ್ರಮುಖ ಆರೋಪಿ ಸ್ವಾಗತಿಸಲು ಜೈಲು ತಲುಪಿದ DMK ಶಾಸಕ!
ಬಿಜೆಪಿ ಏಜೆಂಟ್‌ನ ಈ ವರ್ತನೆಯನ್ನು ಆಡಳಿತರೂಢ ಡಿಎಂಕೆ ಕಟುವಾಗಿ ಟೀಕಿಸಿದ್ದು, ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ‘ತಮಿಳುನಾಡಿನಲ್ಲಿ ಕೋಮುಸೌಹಾರ್ದವನ್ನು ಹಾಳು ಮಾಡಲು ಈ ವ್ಯಕ್ತಿ ಯತ್ನಿಸಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಂಸದೆ, ಪಕ್ಷದ ಮಹಿಳಾ ವಿಭಾಗದ ಕಾರ್ಯದರ್ಶಿ ಕನಿಮೋಳಿ ಆಗ್ರಹಿಸಿದ್ದಾರೆ.ಈ ಮಾತಿನ ಚಕಮಕಿಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕರ್ನಾಟಕದಲ್ಲಿ ಹಿಜಾಬ್ ಪ್ರತಿಭಟನೆ
ಉಡುಪಿ ಕಾಲೇಜಿನ 6 ವಿದ್ಯಾರ್ಥಿನಿಯರಿಂದ ಪ್ರಾರಂಭವಾಗಿ ರಾಜ್ಯಾದ್ಯಂತ ಪಸರಿಸಿ, ವಿಶ್ವಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ಗದ್ದಲ ದಿನಗಳೆದಂತೆ ನಿಧಾನವಾಗಿ ತಣ್ಣಗಾಗುತ್ತಿದೆ. ಆದರೂ ಕೆಲ ಕಾಲೇಜುಗಳಲ್ಲಿ ಪ್ರತಿಭಟನೆ ಮುಂದುವರಿದಿದೆ. ಶನಿವಾರ ಬೆಳಗಾವಿ, ಗದಗ, ಮಡಿಕೇರಿ, ಹಾಸನ, ದಕ್ಷಿಣ ಕನ್ನಡದ ಕೆಲ ಕಾಲೇಜುಗಳಲ್ಲಿ ಮಾತ್ರ ಪ್ರತಿಭಟನೆ ನಡೆದಿದೆ. ಬೆಳಗಾವಿಯ ವಿಜಯಾ ಕಾಲೇಜಿನಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
Hijab Controversy: ದೇಶ ಮುಖ್ಯವೋ, ಧರ್ಮ ಮುಖ್ಯವೋ: ಮದ್ರಾಸ್ ಹೈಕೋರ್ಟ್
ಹಿಜಾಬ್: ಕೋರ್ಟ್ ಆದೇಶ ಪಾಲಿಸಿ-ಸರ್ವಧರ್ಮ ಗುರುಗಳು
ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶಕ್ಕೆ ಬದ್ಧರಾಗಬೇಕು. ತನ್ಮೂಲಕ ಸಮಾಜದಲ್ಲಿ ಸಾಮರಸ್ಯ, ಶಾಂತಿ ಕಾಪಾಡಬೇಕು ಎಂದು ರಾಜ್ಯದ ಎಲ್ಲ ಧಾರ್ಮಿಕ ಗುರುಗಳು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಎಲ್ಲ ಧಾರ್ಮಿಕ ಗುರುಗಳು ಮಾತನಾಡಿ ಹಿಜಾಬ್ ವಿವಾದದಿಂದಾಗಿ ಸಮಾಜದಲ್ಲಿ ಶಾಂತಿಗೆ ಭಂಗ ಬಂದಿದ್ದು, ಸಮಾಜದಲ್ಲಿ ಸಾಮರಸ್ಯ ಬಹಳ ಮುಖ್ಯವಾಗಿದೆ ಎಂದು ಹೇಳಿ, ಪರೋಕ್ಷವಾಗಿ ಸಮವಸ್ತ್ರ ಕುರಿತಂತೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶ ಪಾಲಿಸಬೇಕು ಎಂದು ಹೇಳಿ, ಇದು ಧಾರ್ಮಿಕ ನಂಬಿಕೆಯ ವಿಷಯವಾಗಿದ್ದು, ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದರು.
ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಇನ್ನುಳಿದ ವಿಷಯಗಳಿಗೆ ಪ್ರಾಮುಖ್ಯತೆ ನೀಡಬಾರದು. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡುವ ಅಂತಿಮ ತೀರ್ಪುಗೆ ಎಲ್ಲರೂ ಬದ್ಧರಾಗಿರಬೇಕು. ಸದ್ಯ ಆನ್‌ಲೈನ್ ತರಗತಿ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಸಲಹೆ ನೀಡಿದರು.
ವಿದ್ಯೆ ಕೆಟ್ಟರೆ ಜೀವನವೇ ಹಾಳಾಗುತ್ತದೆ. ವಿದ್ಯೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಜಾರಿಗೆ ತಂದಿರುವುದರಿಂದ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಮಾಲೋಚನಾ ಸಭೆ, ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು.ಸುನ್ನಿ ಜಮಾಯತ್ ಕರ್ನಾಟಕದ ಅಧ್ಯಕ್ಷ ಮೌಲಾನ ತನ್ವೀರ್ ಹಾಶ್ಮಿಪೀರ ಮಾತನಾಡಿ, ರಾಜ್ಯದಲ್ಲಿ ಹಿಂದು, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗಿದ್ದೇವೆ. ಆದರೆ ಹಿಜಾಬ್ ವಿವಾದ ಸೃಷ್ಟಿಯಾದ ನಂತರ ವಾತಾವರಣ ಹಾಳಾಗಿದೆ. ಎಲ್ಲ ಧರ್ಮದವರ ಆಚರಣೆಗಳು ನಡೆಯುತ್ತಾ ಬಂದಿವೆ. ಇವುಗಳಿಗೆ ಅಡ್ಡಿ ಉಂಟು ಮಾಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡಬಾರದು ಎಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ