
ಚೆನ್ನೈ (ಜು.21) ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದರೆ. ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರು ಅಪೋಲೋ ಆಸ್ಪತ್ರೆಗೆ ಸ್ಟಾಲಿನ್ ಅವರನ್ನು ದಾಖಲಿಸಲಾಗಿದೆ. ನುರಿತ ವೈದ್ಯರ ತಂಡ ಸ್ಟಾಲಿನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸ್ಟಾಲಿನ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ವೈದ್ಯರು ಹೇಳಿದ್ದಾರೆ. ಇತ್ತ ಸ್ಟಾಲಿನ್ ಆಸ್ಪತ್ರೆ ದಾಖಲಾಗುತ್ತಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಬೆಂಬಲಿಗರು ಅಪೋಪೋ ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.
ಮಾರ್ನಿಂಗ್ ವಾಕ್‌ನಲ್ಲಿ ಅಸ್ವಸ್ಥಗೊಂಡ ಸ್ಟಾಲಿನ್
ಎಂಕೆ ಸ್ಟಾಲಿನ್ ವೈದ್ಯರ ಸೂಚನೆಯಂತೆ ಪ್ರತಿ ದಿನ ವಾಕಿಂಗ್ ಮಾಡುತ್ತಾರೆ. ವ್ಯಾಯಾಮವನ್ನೂ ಮಾಡುತ್ತಾರೆ. ಬಳಿಕ ಬೆಳಗಿನ ಉಪಹಾರ ಸೇವಿಸಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಎಂದಿನಂತೆ ಬೆಳಗ್ಗೆ ವಾಕಿಂಗ್ ಹೊರಟ ಎಂಕೆ ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿದೆ. ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಲೆ ಸುತ್ತು ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣವೇ ಸ್ಟಾಲಿನ್ ಅವರನ್ನು ಅಪೋಲೋ ಆಸ್ಪತ್ಪೆಗೆ ದಾಖಲಿಸಲಾಗಿದೆ.
ಹೆಲ್ತ್ ಬುಲೆಟಿನ್ ಬಿಡುಗಡೆ
ಅಪೋಲೋ ಆಸ್ಪತ್ರೆ ವೈದ್ಯರು ಎಂಕೆ ಸ್ಟಾಲಿನ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ವಾಕಿಂಗ್ ಹೋದ ಸಂದರ್ಭದಲ್ಲಿ ತಲೆ ಸುತ್ತು ಕಾಣಿಸಿಕೊಂಡಿದೆ. ಅನಾರೋಗ್ಯ ಕಾರಣದಿಂದ ಅಪೋಲೋ ಆಸ್ಪತ್ರೆ ದಾಖಲಿಸಲಾಗಿದೆ. ವೈದ್ಯರ ತಂಡ ಸ್ಟಾಲಿನ್ ಆರೋಗ್ಯ ತಪಾಸಣೆ ಮಾಡಿದ್ದಾರೆ. ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಹೇಳಿದ್ದಾರೆ.
ಸಿಎಂ ಕೊಯಂಬತ್ತೂರು ಪ್ರವಾಸ ರದ್ದು ಸಾಧ್ಯತೆ
ಎಂಕೆ ಸ್ಟಾಲಿನ್‌ಗೆ ಚಿಕಿತ್ಸೆ ಮುಂದುವರಿದಿದೆ. ಹೀಗಾಗಿ ಸಿಎಂ ಕಾರ್ಯಗಳು ರದ್ದಾಗುವ ಸಾಧ್ಯತೆ ದಟ್ಟವಾಗಿದೆ. ಜುಲೈ 22 ರಂದು ಎರಡು ದಿನಗಳ ಕೊಯಂಬತ್ತೂರು ಪ್ರವಾಸ ನಿಗದಿಯಾಗಿತ್ತು. ಕೊಯಂಬತ್ತೂರು ಹಾಗೂ ತಿರ್ಪುರ್ ಜಿಲ್ಲೆಗೆ ಭೇಟಿ ನೀಡಲಿದ್ದ ಎಂಕೆ ಸ್ಟಾಲಿನ್, ಜುಲೈ 23ರಂದು ಪೊಲ್ಲಾಚಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಜುಲೈ 23ರಂದು ಮತ್ತೆ ಕೊಯಂಬತ್ತೂರಿಗೆ ಮರಳಿ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಬೇಕಿದೆ. ಆದರೆ ಅನಾರೋಗ್ಯದಿಂದ ಆಸ್ರತ್ರೆ ದಾಖಲಾಗಿರುವ ಕಾರಣ ಸ್ಟಾಲಿನ್ ಪ್ರವಾಸ ರದ್ದಾಗುವ ಸಾಧ್ಯತೆ ಇದೆ.
ಕೆಲ ದಿನಗಳ ವಿಶ್ರಾಂತಿಗೆ ಸೂಚಿಸುವ ಸಾಧ್ಯತೆ
ಸದ್ಯ ವೈದ್ಯರ ನಿಗಾದಲ್ಲಿರುವ ಎಂಕೆ ಸ್ಟಾಲಿನ್‌ಗೆ ಚಿಕಿತ್ಸೆ ಮುಂದುವರಿದಿದೆ. ಎಂಕೆ ಸ್ಟಾಲಿನ್ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ಹೀಗಾಗಿ ಸ್ಟಾಲಿನ್ ಸಂಪೂರ್ಣ ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರೂ ವೈದ್ಯರ ಸೂಚನೆಯಂತೆ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ