ಕಾವೇರಿ ನೀರು ಬಿಡಿಸಿ: ಮೋದಿಗೆ ಸ್ಟಾಲಿನ್‌ ಮನವಿ

Published : Aug 05, 2023, 12:00 AM IST
ಕಾವೇರಿ ನೀರು ಬಿಡಿಸಿ: ಮೋದಿಗೆ ಸ್ಟಾಲಿನ್‌ ಮನವಿ

ಸಾರಾಂಶ

2023-24ನೇ ಸಾಲಿನಲ್ಲಿ ಕರ್ನಾಟಕ 11.6 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಕರ್ನಾಟಕ ಒಟ್ಟು 40.4 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಹಾಗಾಗಿ ಉಳಿದ 28.8 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಮೋದಿ ಅವರು ಸೂಚಿಸಬೇಕು ಎಂದು ಮನವಿ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ 

ಚೆನ್ನೈ(ಆ.05):  ಕರ್ನಾಟಕ ಬಾಕಿ ಉಳಿಸಿಕೊಂಡಿರುವ 28.8 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಸೂಚಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತಾಗಿ ಪತ್ರ ಬರೆದಿರುವ ಅವರು ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಬಿಳಿಗುಂಡ್ಲು ಬಳಿ ಉಭಯ ರಾಜ್ಯಗಳು ಹಂಚಿಕೊಳ್ಳಬೇಕಾದ ನೀರಿನ ಪ್ರಮಾಣವನ್ನು ಸುಪ್ರೀಂಕೋರ್ಟ್‌ ನಿರ್ಧರಿಸಿದೆ. ದುರಾದೃಷ್ಟವಶಾತ್‌ ಈ ತೀರ್ಪನ್ನು ಕರ್ನಾಟಕ ಸರ್ಕಾರ ಮಾನ್ಯ ಮಾಡುತ್ತಿಲ್ಲ. 2023-24ನೇ ಸಾಲಿನಲ್ಲಿ ಕರ್ನಾಟಕ 11.6 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಕರ್ನಾಟಕ ಒಟ್ಟು 40.4 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಹಾಗಾಗಿ ಉಳಿದ 28.8 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಮೋದಿ ಅವರು ಸೂಚಿಸಬೇಕು. ಕರ್ನಾಟಕ ತನ್ನ 4 ಅಣೆಕಟ್ಟುಗಳಲ್ಲಿ 91 ಟಿಎಂಸಿ ನೀರನ್ನು ಹೊಂದಿದೆ. ಆದರೆ ಮೆಟ್ಟೂರು ಅಣೆಕಟ್ಟೆಯಲ್ಲಿ ಕೇವಲ 26.6 ಟಿಎಂಸಿ ನೀರು ಇದೆ. ಕುಡಿಯುವ ನೀರು ಹಾಗೂ ಇನ್ನಿತರ ಅವಶ್ಯಕತೆಗಳಿಗೆ ಹೋಲಿಸಿದರೆ ಇಲ್ಲಿ ಸಾಕಾಗುವಷ್ಟಿಲ್ಲ ಎಂದಿದ್ದಾರೆ.

ಕಾವೇರಿ ಜಲವಿವಾದದಲ್ಲಿ ಮೋದಿ ಸಹಾಯ ಕೋರಿದ ಡಿಎಂಕೆ: I.N.D.I.A ಮೈತ್ರಿಕೂಟದ ಬಗ್ಗೆ ರಾಜೀವ್ ಚಂದ್ರಶೇಖರ್ ವ್ಯಂಗ್ಯ

ಈಗಾಗಲೇ ಈ ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ಅವರಿಗೆ ನಾವು ಮನವಿ ಸಲ್ಲಿಸಿದ್ದೇವೆ. ಕೇಂದ್ರ ಸರ್ಕಾರ ಈಗಾಗಲೇ ಅಕ್ಕಿಯ ರಫ್ತು ನಿಷೇಧ ಮಾಡಿದೆ. ಅದೇ ರೀತಿ ಕಾವೇರಿ ಸೀಮೆಯಲ್ಲಿ ಬೆಳೆಯುವ ಭತ್ತವನ್ನು ರಕ್ಷಣೆ ಮಾಡಲು ನೀರು ಬಿಡುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!