ಸನಾತನ ಧರ್ಮ ನಿಂದಿಸಿದ್ದ ತಮಿಳನಾಡು ಡಿಸಿಎಂ ತಾಯಿಯಿಂದ ಕೊಲ್ಲೂರಲ್ಲಿ ಪೂಜೆ!

Published : Mar 09, 2025, 05:06 AM ISTUpdated : Mar 09, 2025, 05:41 AM IST
ಸನಾತನ ಧರ್ಮ ನಿಂದಿಸಿದ್ದ ತಮಿಳನಾಡು ಡಿಸಿಎಂ ತಾಯಿಯಿಂದ ಕೊಲ್ಲೂರಲ್ಲಿ ಪೂಜೆ!

ಸಾರಾಂಶ

ಅತ್ತ ಮಗ ಸನಾತನ ಹಿಂದೂ ಧರ್ಮವನ್ನು ಉಗ್ರವಾಗಿ ದೂಷಿಸುತಿದ್ದರೆ, ಇತ್ತ ತಾಯಿ ಮಾತ್ರ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ.

ಉಡುಪಿ (ಮಾ.9):  ಅತ್ತ ಮಗ ಸನಾತನ ಹಿಂದೂ ಧರ್ಮವನ್ನು ಉಗ್ರವಾಗಿ ದೂಷಿಸುತಿದ್ದರೆ, ಇತ್ತ ತಾಯಿ ಮಾತ್ರ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್ ಅವರ ಪತ್ನಿ ದುರ್ಗಾ, ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ, ಮಾತ್ರವಲ್ಲ ತಾಯಿ ಮೂಕಾಂಬಿಕೆಗೆ ಚಿನ್ನದ ಕಿರೀಟವನ್ನೂ ಒಪ್ಪಿಸಿದ್ದಾರೆ.

ತಮಿಳುನಾಡಿನ ಸಾಕಷ್ಟು ಮಂದಿಯಂತೆ ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ವಿಶೇಷ ಭಕ್ತೆಯಾಗಿದ್ದಾರೆ. ಅವರು ತನ್ನ ಕೆಲವು ಸ್ನೇಹಿತೆಯರೊಂದಿಗೆ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ದೇವಾಲಯದ ವತಿಯಿಂದ ಬರ ಮಾಡಿಕೊಂಡು ಗೌರವಿಸಲಾಯಿತು.

ಇದನ್ನೂ ಓದಿ:  ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬಕ್ಕೆ ಹಿಮಾಲಯದಲ್ಲಿ ವಿಶೇಷ ಪೂಜೆ; ಸಾದು ಸಂತರಿಗೆ ದಾನ!

ಸನಾತನ ಧರ್ಮ ವಿರೋಧಿ ಪತಿ, ಪುತ್ರ!

ಪತಿ ಸ್ಟಾಲಿನ್ ಮತ್ತು ಪುತ್ರ ಉದಯನಿಧಿ ಸ್ಟಾಲಿನ್ ಅವರು ನಿರಂತರವಾಗಿ ಸನಾತನ ಧರ್ಮವನ್ನು ಟೀಕೆ ಮಾಡುತ್ತಿದ್ದಾರೆ. ಆದರೆ ಅವರಿಂದ ಭಿನ್ನ ವಿಚಾರಧಾರೆಯನ್ನು ಹೊಂದಿರುವ ದುರ್ಗಾ, ದಕ್ಷಿಣ ಭಾರತದ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಕೊಡುಗೆಗಳನ್ನು ನೀಡುತ್ತಿದ್ದಾರೆ. ಅದರಂತೆ ತೀರಾ ಖಾಸಗಿಯಾಗಿ ಕೊಲ್ಲೂರಿಗೆ ಬಂದ ಅವರು ಮೂಕಾಂಬಿಕಾ ದೇವಿಗೆ ಚಿನ್ನದ ಕಿರೀಟವನ್ನೂ ಸಮರ್ಪಿಸಿದ್ದಾರೆ.

ಸನಾತನ ಡೆಂಘಿ, ಮಲೇರಿಯಾಗೆ ಹೋಲಿಸಿದ್ದ ಪುತ್ರ ಉದಯನಿಧಿ:

ಕಳೆದ ವರ್ಷ ಕಾರ್ಯಕ್ರಮವೊಂದರಲ್ಲಿ 'ಸನಾತನ ಧರ್ಮ ಎಂಬುದು ಡೆಂಘೀ ಮತ್ತು ಮಲೇರಿಯಾ ಇದ್ದಂತೆ ಅದನ್ನು ವಿರೋಧಿಸುವುದಲ್ಲ ಬದಲಾಗಿ ಈ ದೇಶದಿಂದ ನಿರ್ಮೂಲನೆ ಮಾಡಬೇಕು ಎಂದು ಎಂದಿದ್ದ ಉದಯನಿಧಿ ಸ್ಟಾಲಿನ್, ಎಂಕೆ ಸ್ಟಾಲಿನ್ ಸಹ ಹಿಂದೂ ವಿರೋಧಿ ಹೇಳಿಕೆಗಳನ್ನು ಕೊಡುತ್ತಲೇ ಬಂದಿದ್ದಾರೆ. ಇದೀಗ ಸ್ವತಃ ಸ್ಟಾಲಿನ್ ಪತ್ನಿ, ಉದಯನಿಧಿ ತಾಯಿಯಾಗಿರುವ ದುರ್ಗಾ, ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದಿದ್ದಾರೆ ಅಷ್ಟೇ ಅಲ್ಲ, ಚಿನ್ನದ ಕೀರಿಟ ಕಾಣಿಕೆಯಾಗಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಗ್ರವಾದದ ವಿರುದ್ಧ ಜಂಟಿ ಹೋರಾಟ : ಮೋದಿ ಘೋಷಣೆ
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!