
ಚೆನ್ನೈ (ಜೂ.9): ಇತ್ತೀಚೆಗಷ್ಟೇ ನಾರ್ವೆ ಚೆಸ್ ಟೂರ್ನಿಯಲ್ಲಿ ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದ ಗ್ರ್ಯಾಂಡ್‌ಮಾಸ್ಟರ್ ಆರ್.ಪ್ರಜ್ಞಾನಂದಗೆ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಸನ್ಮಾನಿಸಿ, ₹50 ಲಕ್ಷ ನಗದು ಬಹುಮಾನ ಹಸ್ತಾಂತರಿಸಿದರು.
ತಮ್ಮ ಪೋಷಕರ ಜೊತೆ ಮುಖ್ಯಮಂತ್ರಿಯ ಅಧಿಕೃತ ನಿವಾಸಕ್ಕೆ ಆಗಮಿಸಿದ ಪ್ರಜ್ಞಾನಂದರನ್ನು ವಿಜಯ್ ಶಾಲು ಹೊದಿಸಿ ಗೌರವಿಸಿದರು. ಬಳಿಕ ಪ್ರಜ್ಞಾನಂದ ಜೊತೆ ವಿಜಯ್ ಚೆಸ್ ಆಡಿ ಸೋಲನುಭವಿಸಿದರು. ಆರ್.ಪ್ರಜ್ಞಾನಂದ ತಮಿಳುನಾಡು ಅಷ್ಟೇ ಅಲ್ಲ ಭಾರತ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾನೆ ಎಂದು ಶ್ಲಾಘಿಸಿದರು. ಇದರ ವಿಡಿಯೋವನ್ನು ತ.ನಾಡು ಸರ್ಕಾರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
#WATCH | Chennai | Tamil Nadu CM Vijay meets Indian Grandmaster R Praggnanandhaa and awards him Rs 50 lakh on behalf of the Sports Development Authority of Tamil Nadu after the chess player won the Norway Chess 2026 title.
(Source: TNDIPR) pic.twitter.com/Lf4dNgYrEX— ANI (@ANI) June 8, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ