
ವಿರುಧನಗರ (ಏ.20): ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 23 ಕಾರ್ಮಿಕರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ 6 ಮಂದಿ ಗಾಯಗೊಂಡಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಜೊತೆಗೆ ಘಟನೆ ನಡೆದ ಕಟ್ಟಡದ ಅವಶೇಷಗಳಗಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯ ಭೀತಿ ಇದೆ.
ಕಟ್ಟನಾರಪಟ್ಟಿಯಲ್ಲಿರುವ ವನಜಾ ಪಟಾಕಿ ಕಾರ್ಖಾನೆಯಲ್ಲಿ 100ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಪಟಾಕಿ ತಯಾರಿಕೆಯ ಸಮಯದಲ್ಲಿ ಸುರಕ್ಷತಾ ಮಾನದಂಡಗಳನ್ನು ನಿರ್ಲಕ್ಷಿಸುವುದರಿಂದ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಫೋಟದ ಸುದ್ದಿ ತಿಳಿಯುತ್ತಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರಾದರೂ, ಮುಖ್ಯ ಸ್ಫೋಟದ ಹಲವು ಗಂಟೆಗಳ ಬಳಿಕವೂ ಸ್ಥಳದಲ್ಲಿ ಪಟಾಕಿ ಸಿಡಿಯುತ್ತಲೇ ಇದ್ದ ಕಾರಣ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ 23 ಜನರು ಸುಟ್ಟುಕರಕಲಾಗಿದ್ದು, ಹಲವರ ಗುರುತು ಪತ್ತೆ ಹಿಡಿಯುವುದು ಕಷ್ಟವಾಗಿದೆ. ಕಳೆದ ತಿಂಗಳು ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದು ನಾಲ್ವರು ಸಾವನ್ನಪ್ಪಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ