ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಗುಡ್‌ಬೈ: ಅಣ್ಣಾಮಲೈ!

By Kannadaprabha NewsFirst Published Mar 19, 2023, 9:41 AM IST
Highlights

ಮುಂಬರುವ ಲೋಕಸಭಾ ಚುನಾವಣೆ ವೇಳೆ ತಮಿಳಿನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಬಹುದು ಎಂಬು ಸುಳಿವುಗಳ ನಡುವೆಯೇ, ಅಂಥ ಬೆಳವಣಿಗೆ ಏನಾದರೂ ನಡೆದರೆ ತಾವು ಬಿಜೆಪಿಯಿಂದ ಹೊರಹೋಗುವುದಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆ ವೇಳೆ ತಮಿಳಿನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಬಹುದು ಎಂಬು ಸುಳಿವುಗಳ ನಡುವೆಯೇ, ಅಂಥ ಬೆಳವಣಿಗೆ ಏನಾದರೂ ನಡೆದರೆ ತಾವು ಬಿಜೆಪಿಯಿಂದ ಹೊರಹೋಗುವುದಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಚೆನ್ನೈನಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ (Annamalai), ನಾವು ದ್ರಾವಿಡ ಪಕ್ಷಗಳ ವಿರುದ್ಧ ಜನರಿಗೆ ಪ್ರಮುಖ ಆಯ್ಕೆಯಾಗಬೇಕೇ ಹೊರತೂ, ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಾರದು. ನಾವು ಏಕಾಂಗಿಯಾಗಿ ಸ್ಪರ್ಧಿಸಿದರೆ ಮಾತ್ರವೇ ಉತ್ತಮ ಆಡಳಿತ, ಭ್ರಷ್ಟಾಚಾರ, ಕುಟುಂಬ ರಾಜಕೀಯದ (Family Politics) ವಿರುದ್ಧ ಸ್ಪಷ್ಟನಿಲುವುಗಳನ್ನು ಜನರ ಮುಂದಿಡಬಹುದು. ನಾವು ರಾಜ್ಯದಲ್ಲಿ ನೆಲೆ ಕಾಣಬೇಕಾದರೆ ಏಕಾಂಗಿಯಾಗಿ ಕಣಕ್ಕೆ ಇಳಿಯುವುದು ಅನಿವಾರ್ಯ. ನಾನು ರಾಜಕೀಯಕ್ಕೆ ಬಂದಿರುವುದು ರಾಜ್ಯದಲ್ಲಿ ಬದಲಾವಣೆ ತರುವ ಉದ್ದೇಶಕ್ಕಾಗಿಯೇ ಹೊರತೂ, ಎಐಎಡಿಎಂಕೆಯ (AIADMK) ಕಿರಿಯ ಮಿತ್ರನಾಗಿ ಇರಲು ಅಲ್ಲ. ಹೀಗಾಗಿ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಾದರೆ ಪಕ್ಷದಿಂದ ಹೊರಹೋಗುವುದಾಗಿ ಸ್ಪಷ್ಟಪಡಿಸಿದರು’ ಎಂದು ಮೂಲಗಳು ತಿಳಿಸಿವೆ.

ಬಿಹಾರ ವಲಸಿಗರ ಮೇಲೆ ದಾಳಿ ವದಂತಿ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಕೇಸ್‌

ಅಣ್ಣಾಮಲೈ ಅವರ ಈ ಅಭಿಪ್ರಾಯಕ್ಕೆ ಸಭೆಯಲ್ಲಿ ಪರ-ವಿರೋಧ ಎರಡೂ ಅಭಿಪ್ರಾಯ ವ್ಯಕ್ತವಾದವು ಎನ್ನಲಾಗಿದೆ. ಇತ್ತೀಚೆಗಷ್ಟೇ ಬಿಜೆಪಿಯ ಐಟಿ ವಿಭಾಗದ ಹಲವು ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿ ಎಐಎಡಿಎಂಕೆ ಸೇರಿದ್ದರು. ಈ ವಿಷಯದಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ವಾಕ್ಸಮರ ನಡೆದಿತ್ತು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಭಾರತ, ಕರ್ನಾಟಕದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಅಣ್ಣಾಮಲೈ

 

click me!