ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.
ನವದೆಹಲಿ (ಫೆ.8): ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣಕಾಸು ಆಯೋಗದ ಮುಂದಿದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ನಿರ್ಮಲಾ ಸೀತರಾಮನ್ ಅವರು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಚಿವರು, ಶಾಸಕರೊಂದಿಗೆ ಡಿಕೆಶಿ ಸಭೆ: ಕಾರಣವೇನು?
ನಿಮ್ಮ ಬಳಿ ಅಧಿಕಾರವೇ ಇಲ್ಲವಾದರೆ ಸರ್ಕಾರ ಯಾಕಿರಬೇಕು? ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ ಎಂದು ಪ್ರಶ್ನಿಸಿದರು.ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಮನುಷ್ಯ ಹುಟ್ಟಿದ ನಂತರ ಏನಾದರೂ ಸಾಕ್ಷಿ ಬಿಟ್ಟು ಹೋಗಬೇಕು. ಅದರಂತೆ ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಯಾಗಲಿದೆ.
ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದು ಹೇಳಿದರು.
ಬಿವೈವಿ, ಬಿಎಸ್‌ವೈ ವಿರುದ್ಧ ತಪ್ಪು ಮಾಹಿತಿ: ಡಿಕೆಶಿ ವಿರುದ್ಧ ಎಫ್‌ಐಆರ್