Skill Development Scam Case: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

By Santosh Naik  |  First Published Oct 31, 2023, 12:40 PM IST

ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ನಾಲ್ಕು ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿದೆ. ಅನಾರೋಗ್ಯದ ಕಾರಣಕ್ಕೆ ಬೇಲ್‌ ನೀಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ.
 


ಹೈದರಾಬಾದ್‌ (ಅ.31): ಕೌಶಲ್ಯಾಭಿವೃದ್ಧಿ ಹಗರಣದ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದೆ. ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ನಾಯ್ಡು ಅವರನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಗಿತ್ತು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ ಎಂದು ಆರೋಪಿಸಲಾಗಿದೆ. ಕೌಶಲ್ಯಾಭಿವೃದ್ಧಿ ಹಗರಣದ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದೆ ಎಂದು ಹೈಕೋರ್ಟ್ ವಕೀಲ ಸುಂಕರ ಕೃಷ್ಣಮೂರ್ತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಅನಾರೋಗ್ಯದ ಕಾರಣಕ್ಕೆ ನೀಡಿ ಬೇಲ್ ಮಂಜೂರು ಮಾಡಲಾಗಿದ್ದು, ರಾಜಮಂಡ್ರಿ ಜೈಲಿನಲ್ಲಿರುವ ನಾಯ್ಡು ಸಂಜೆ 5 ರಿಂದ 7 ಗಂಟೆಯ ವೇಳೆಗೆ ಜೈಲಿನಿಂದ ಹೊರಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಬಹುಕೋಟಿ ಕೌಶಲಾಭಿವೃದ್ಧಿ ನಿಗಮದ ಹಗರಣದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಯಿಂದ ಬಂಧಿಸಲ್ಪಟ್ಟ ಒಂದು ದಿನದ ನಂತರ ನಾಯ್ಡು ಅವರನ್ನು ಸೆಪ್ಟೆಂಬರ್ 10 ರಿಂದ ರಾಜಮಂಡ್ರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು ಮತ್ತು ಎಸಿಬಿ ಪ್ರಕರಣಗಳಿಗಾಗಿ ವಿಜಯವಾಡದಲ್ಲಿ ವಿಶೇಷ ನ್ಯಾಯಾಲಯದಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನವೆಂಬರ್ 28 ರಂದು ಸಂಜೆ 5 ಗಂಟೆಯೊಳಗೆ ರಾಜಮಂಡ್ರಿ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಮುಂದೆ ಶರಣಾಗುವಂತೆ ನಾಯ್ಡು ಅವರಿಗೆ ಹೈಕೋರ್ಟ್ ಸೂಚನೆ ನೀಡಿದೆ.

16 ಪುಟಗಳ ಆದೇಶದಲ್ಲಿ, ನ್ಯಾಯಮೂರ್ತಿ ತಲ್ಲಪ್ರಗಡ ಮಲ್ಲಿಕಾರ್ಜುನ ರಾವ್ ನೇತೃತ್ವದ ಹೈಕೋರ್ಟ್ ಪೀಠವು, ವೈದ್ಯಕೀಯ ಆರೈಕೆಯ ಅಗತ್ಯವಿರುವ ನಿರ್ದಿಷ್ಟ ಕಾಯಿಲೆಗಳಿಂದ ಬಳಲುತ್ತಿರುವ ನಾಯ್ಡು ಅವರ ಆರೋಗ್ಯದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಅವರ ಬಲಗಣ್ಣಿಗೆ ಸಂಬಂಧಿಸಿ ಆರೈಕೆ ಬೇಕಿರುವ ಕಾರಣ ಜಾಮೀನು ನೀಡಲಾಗಿದೆ. ಅವರು ಮಂಗಳವಾರದಿಂದ ನಾಲ್ಕು ವಾರಗಳವರೆಗೆ ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ ಜಾಮೀನಿಗೆ ಅರ್ಹರಾಗಿದ್ದಾರೆ. ವಿಚಾರಣಾ ನ್ಯಾಯಾಲಯಕ್ಕೆ ಟಿಡಿಪಿ ಮುಖ್ಯಸ್ಥರು ₹ 1 ಲಕ್ಷದ ಜಾಮೀನು ಬಾಂಡ್ ಅನ್ನು ಅಂತಹ ಮೊತ್ತದ ಇಬ್ಬರು ಶ್ಯೂರಿಟಿಗಳೊಂದಿಗೆ ಒದಗಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದರು. "ಅವರು ತಮ್ಮ ವೆಚ್ಚದಲ್ಲಿ ತಮ್ಮ ಆಯ್ಕೆಯ ಆಸ್ಪತ್ರೆಯಲ್ಲಿ ಸ್ವತಃ ಪರೀಕ್ಷಿಸಿ ಚಿಕಿತ್ಸೆ ಪಡೆಯುತ್ತಾರೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಾಯ್ಡು ಅವರಿಗೆ ನೀಡಿದ ಚಿಕಿತ್ಸೆ ಮತ್ತು ಅವರು ಚಿಕಿತ್ಸೆ ಪಡೆದ ಆಸ್ಪತ್ರೆಯ ವಿವರಗಳನ್ನು ಮುಚ್ಚಿದ ಕವರ್‌ನಲ್ಲಿ ರಾಜಮಂಡ್ರಿ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್‌ಗೆ ಶರಣಾಗತಿಯ ಸಮಯದಲ್ಲಿ ಒದಗಿಸುವಂತೆ ನ್ಯಾಯಮೂರ್ತಿ ರಾವ್ ಅವರು ನಾಯ್ಡು ಅವರಿಗೆ ಸೂಚಿಸಿದರು.  ಟಿಡಿಪಿ ಮುಖ್ಯಸ್ಥರು ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಪ್ರಚೋದನೆ, ಬೆದರಿಕೆ ಅಥವಾ ಪ್ರಕರಣದ ಸತ್ಯಗಳ ಪರಿಚಯವಿರುವ ಯಾವುದೇ ವ್ಯಕ್ತಿಗೆ ಅಂತಹ ಸತ್ಯಗಳನ್ನು ನ್ಯಾಯಾಲಯಕ್ಕೆ ಅಥವಾ ಯಾವುದೇ ಪ್ರಾಧಿಕಾರಕ್ಕೆ ಬಹಿರಂಗಪಡಿಸಬಾರದು ನ್ಯಾಯಾಧೀಶರು ನಿರ್ದೇಶಿಸಿದ್ದಾರೆ.

ಜೈಲಿನಲ್ಲಿರುವ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ದೇಹಸ್ಥಿತಿ ವಿಷಮ

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಸಂಪೂರ್ಣ ಜಾಮೀನು ಕೋರಿ ನಾಯ್ಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೀಠ ನವೆಂಬರ್ 10ಕ್ಕೆ ಮುಂದೂಡಿದೆ. ಹಿರಿಯ ಟಿಡಿಪಿ ನಾಯಕರ ಪ್ರಕಾರ, ನಾಯ್ಡು ಅವರ ವಕೀಲರು ಮಧ್ಯಾಹ್ನ ರಾಜಮಂಡ್ರಿ ಜೈಲು ಅಧಿಕಾರಿಗಳ ಮುಂದೆ ಜಾಮೀನು ಪತ್ರಗಳನ್ನು ಸಲ್ಲಿಸಲಿದ್ದಾರೆ ಮತ್ತು ಅವರು ಸಂಜೆ 4 ಗಂಟೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ.

Tap to resize

Latest Videos

ಗೃಹಬಂಧನ ಕೋರಿದ್ದ ಚಂದ್ರಬಾಬು ನಾಯ್ಡು ಅರ್ಜಿ ವಜಾ: ಇಂದು ಹೈಕೋರ್ಟ್‌ಗೆ ಮೇಲ್ಮನವಿ

click me!