
ತಿರುವನಂತಪುರ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಯುಎಇಯ(United arab Enirates) ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನ ತಮಿಳುನಾಡಿನ ತಿರುಚಿರಪ್ಪಳ್ಳಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 10.45 ಕ್ಕೆ ಟೇಕಾಫ್ ಆಗಿತ್ತು. ಈ ವಿಮಾನದಲ್ಲಿ ಒಟ್ಟು 154 ಪ್ರಯಾಣಿಕರಿದ್ದರು. ತಿರುಚಿರಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಸ್ವಲ್ಪ ಹೊತ್ತಿನಲ್ಲೇ ತಿರುವಂತಪುರದಲ್ಲಿ ಏರ್ಪೋರ್ಟ್ ಪ್ರಾಧಿಕಾರ ಎಮರ್ಜೆನ್ಸಿ ಲ್ಯಾಂಡಿಂಗ್ ಘೋಷಣೆ ಮಾಡಿತ್ತು.
ಏರ್ ಇಂಡಿಯಾದ IX613 ವಿಮಾನವೂ ತಿರುಚಿರಪಳ್ಳಿಯಿಂದ ನೇರವಾಗಿ ಶಾರ್ಜಾಕ್ಕೆ ಹೊರಟಿದ್ದು, ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ತುರ್ತು ತಿರುವನಂತಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯ್ತು. ಟೇಕಾಫ್‌ಗೆ ಮೊದಲು ಕಂಡು ಬಂದ ತಾಂತ್ರಿಕ ದೋಷವೇ ಈ ತುರ್ತು ಲ್ಯಾಂಡಿಂಗ್‌ಗೆ ಕಾರಣ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಸ್ಪಷ್ಟನೆ ನೀಡಿದ್ದು, ಇದೊಂದು ಎಮರ್ಜೆನ್ಸಿ ಲ್ಯಾಂಡಿಂಗ್ ಆಗಿರಲಿಲ್ಲ, ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಆದ ತೊಂದರೆಗೆ ನಾವು ಕ್ಷಮೆಯಾಚಿಸುತ್ತೇವೆ. ಅವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಿದ್ದೇವೆ ಎಂದು ಏರ್ ಇಂಡಿಯಾ ಹೇಳಿದೆ. ದುಬೈ, ಶರ್ಜಾ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ದಕ್ಷಿಣ ಭಾರತದ ಲಕ್ಷಾಂತರ ಜನ ಕೆಲಸ ಮಾಡುತ್ತಾರೆ.
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್, ವಿಮಾನ ತುರ್ತು ಭೂಸ್ಪರ್ಶ
ಬೆಂಗಳೂರಲ್ಲಿ ತಪ್ಪಿದ ಭಾರೀ ದುರಂತ: ಟೆಕ್ನಿಕಲ್ ಸಮಸ್ಯೆಯಿಂದ ಸೇನಾ ವಿಮಾನ ತುರ್ತು ಭೂಸ್ಪರ್ಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ