ಸಮುದಾಯಕ್ಕೆ ಹರಡುತ್ತಿದೆ ಕೊರೋನಾ; 4 ರಿಂದ 5 ವಾರ ಎಚ್ಚರ!

By Suvarna NewsFirst Published Jul 24, 2020, 3:39 PM IST
Highlights

ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಮನಯೊಳಗೆ ಯಾರ ಸಂಪರ್ಕಕ್ಕೂ ಸಿಗದ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಹರಡುತ್ತಿದೆ. ಈ ಮೂಲಕ ಸಮುದಾಯ ಮಟ್ಟದಲ್ಲಿ ಕೊರೋನಾ ವೈರಸ್ ಹರಡುತ್ತಿದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. 
 

ತೆಲಂಗಾಣ(ಜು.24):  ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಸದ್ಯಕ್ಕಿರುವ ಆತಂಕ. ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ ಅನ್ನುವಷ್ಟರಲ್ಲೇ ಮತ್ತೆ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ತೆಲಂಗಾಣದಲ್ಲಿ ಪರಿಸ್ಥಿತಿ ಗಂಭೀರ ಸ್ಥಿತಿ ತಲುಪುತ್ತಿದೆ. ಇದೀಗ ತೆಲಂಗಾಣ ಆರೋಗ್ಯ ಇಲಾಖೆ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ತೆಲಂಗಾಣದಲ್ಲಿ ಕೊರೋನಾ ವೈರಸ್ ಸಮುದಾಯ ಮಟ್ಟಕ್ಕೆ ಹರಡುತ್ತಿರುವ ಭೀತಿ ಎದುರಾಗಿದೆ. ಹೀಗಾಗಿ ಕನಿಷ್ಠ 4 ರಿಂದ 5 ವಾರ ಅತ್ಯಂತ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.

 ಕೊರೋನಾ ತ್ಯಾಜ್ಯ ವಿಲೇವಾರಿ ಘಟಕ, ಸಮಸ್ಯೆಗೆ ಸಿಕ್ತು ಮುಕ್ತಿ!.

ತೆಲಂಗಾಣದಲ್ಲಿ ಕೊರೋನಾ ವೈರಸ್ ಸಮುದಾಯ ಮಟ್ಟಕ್ಕೆ ಹರಡುತ್ತಿರುವ ಕುರಿತು ವರದಿಗಳು ಬಂದಿದೆ. ಕೆಲ ಪ್ರಕರಣಗಳಲ್ಲಿ ಇದು ಸಾಬೀತಾಗುತ್ತಿದೆ. ಸಮುದಾಯ ಮಟ್ಟದಲ್ಲಿ ಅಪಾಯ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಕಾರಣ ರೋಗ ಲಕ್ಷಣಗಳಿಲ್ಲದೆ ಯಾರಿಂದ ಯಾರಿಗೆ ಹರಡುತ್ತಿದೆ ಅನ್ನೋದು ಸ್ಪಷ್ಟವಾಗುವುದಿಲ್ಲ. ಹೀಗಾಗಿ ಕನಿಷ್ಠ 1 ತಿಂಗಳು ಕಾಲ ಮುನ್ನಚ್ಚೆರಿಕೆ ವಹಿಸುವುದು ಅಗತ್ಯ ಎಂದು ತೆಲಂಗಾಣ ಆರೋಗ್ಯ ಇಲಾಖೆ ನಿರ್ದೇಶಕ ಶ್ರೀನಿವಾಸ ರಾವ್ ಹೇಳಿದ್ದಾರೆ.

ಕೊರೋನಾ ಪರೀಕ್ಷೆ ವೇಳೆ ಐಡಿ, ಆಧಾರ್‌ ಕಡ್ಡಾಯ: ಬಿಎಸ್‌ವೈ

ಕೊರೋನಾ ವೈರಸ್ ಪರೀಕ್ಷೆ, ಅಥವಾ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗೆ ತೆರಳಿ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾದ ಅಗತ್ಯವಿಲ್ಲ. ಯಾರಿಗೆ ಚಿಕಿತ್ಸೆಗೆ ಅಗತ್ಯವಿದೆಯೋ ಅವರು ಸರ್ಕಾರಿ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆಯಿರಿ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಶ್ರೀನಿವಾಸ್ ರಾವ್ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ 6,500  ಬೆಡ್‌ಗಳು ಖಾಲಿ ಇವೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಕೊರೋನಾ ರೋಗ ಲಕ್ಷಣ  ಹಾಗೂ ಅನಾರೋಗ್ಯಕ್ಕೆ ತುತ್ತಾದರೆ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಎಂದು ಶ್ರೀನಿವಾಸ್ ರಾವ್ ಹೇಳಿದ್ದಾರೆ.

click me!