ಕೊರೋನಾ ವಾರಿಯರ್ಸ್‌ಗೆ 10% ವೇತನ ಹೆಚ್ಚಳ!

By Suvarna NewsFirst Published Jul 19, 2020, 2:37 PM IST
Highlights

ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೋನಾ ಫ್ರಂಟ್‌ಲೈನ್ ವಾರಿಯರ್ಸ್ ಬಿಡುವಿಲ್ಲದೆ ಕೊರೋನಾ ಕಟ್ಟಿಹಾಕಲು ಶ್ರಮಿಸುತ್ತಿದ್ದಾರೆ. ತಮ್ಮ ಪ್ರಾಣದ ಹಂಗು ತೊರೆದು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಆರೋಗ್ಯ ವಿಭಾಗದ ಎಲ್ಲಾ ಸಿಬ್ಬಂದಿಗಳಿಗೆ ಸರ್ಕಾರ ಶೇಕಡಾ 10 ರಷ್ಟು ವೇತನ ಹೆಚ್ಚಿಸಲಾಗಿದೆ.
 

ತೆಲಂಗಾಣ(ಜು.19): ಕೊರೋನಾ ನಿಯಂತ್ರಣದಲ್ಲಿ ಆಸ್ಪತ್ರೆ ಸಿಬ್ಬಂದಿ, ನರ್ಸ್, ವೈದ್ಯರು ಸೇರಿದಂತೆ ಹಲವರು ಶ್ರಮಿಸುತ್ತಿದ್ದಾರೆ. ಹೀಗೆ ಕೊರೋನಾ ವೈರಸ್ ನಿಯಂತ್ರಣ, ಸೋಂಕಿತರ ಚಿಕಿತ್ಸೆಗೆ ನೆರವಾಗುತ್ತಿರುವ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ತೆಲಂಗಾಣ ಸರ್ಕಾರ ಶೇಕಡಾ 10 ರಷ್ಟು ಹೆಚ್ಚುವರಿ ವೇತನ ನೀಡಲು ನಿರ್ಧರಿಸಿದೆ.

ಆಗ ಸಾವಿರ ಪಕ್ಕಾ, ಈಗ ನೂರರ ಲೆಕ್ಕ; ಪ್ರವಾಸಿಗರಿಲ್ಲದೆ ಮೌನವಾದ ದೆಹಲಿ!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಆರೋಗ್ಯ ಸಿಬ್ಬಂದಿ ವೇತನ ಹೆಚ್ಚಳ ಪ್ರಸ್ತಾವನೆಗೆ ಅಂಕಿತ ಹಾಕಿದ್ದಾರೆ. ವಿಶೇಷ ಅಂದರೆ ಒಪ್ಪಂದ ಮೇರೆ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೂ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ. ಇಷ್ಟೇ ಅಲ್ಲ ಕೊರೋನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಇದೇ ವೇಳೆ 1,200 ವೈದ್ಯರನ್ನು ನೇಮಕ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಇಂಜೆಕ್ಷನ್ ಸೇರಿದಂತೆ ಔಷಧಿ ಖರೀದಿಗೂ ಸರ್ಕಾರ ಹಣ ಬಿಡುಗಡೆ ಮಾಡಿದೆ. ಇದೇ ವೇಳೆ ಬಡವರು ಖಾಸಗಿ ಆಸ್ಪತ್ರೆಗೆ ತೆರಳಿ ಹೆಚ್ಚುವರಿ ಹಣ ಖರ್ಚುಮಾಡಬೇಕಿಲ್ಲ.  ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳಿವೆ. ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಸಚಿವ ಎಟೆಲಾ ರಾಜೇಂದ್ರ ಹೇಳಿದ್ದಾರೆ.

ತೆಲಂಗಾಣದಲ್ಲಿ ಆಕ್ಸಿಜನ್ ಸಿಲಿಂಡರ್ ಸೇರಿದಂತೆ ಎಲ್ಲಾ ಸೌಲಭ್ಯಗಳಿರುವ 10,000 ಬೆಡ್ ವ್ಯವಸ್ಥೆ ಇದೆ. ಹೀಗಾಗಿ ಸೋಂಕಿತರು ಆತಂಕ ಪಡುವ ಆಗತ್ಯವಿಲ್ಲ ಎಂದು ಚಂದ್ರಶೇಕರ್ ರಾವ್ ಹೇಳಿದ್ದಾರೆ.

click me!