'2025ರ ವೇಳೆಗೆ ಮೀಸಲಾತಿಯನ್ನು ಬಿಜೆಪಿ ರದ್ದುಮಾಡಲಿದೆ..' ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಆರೋಪ!

By Santosh Naik  |  First Published Apr 25, 2024, 4:12 PM IST

ಬಿಜೆಪಿಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಬಯಸಿದೆ ಮತ್ತು ಈ ಗುರಿಯನ್ನು ಸಾಧಿಸಲು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳ ಗಡಿ ದಾಟಲು ಪ್ರಯತ್ನಿಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.


ನವದೆಹಲಿ (ಏ.25): ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ರಾಜಕೀಯ ವಾಗ್ವಾದದ ನಡುವೆ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷವಾದ 2025 ರ ವೇಳೆಗೆ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ. 2025ರ ವೇಳೆಗೆ ಆರ್‌ಎಸ್‌ಎಸ್‌ 100 ವರ್ಷ ಪೂರೈಸಲಿದೆ. 2025ರ ವೇಳೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತು ಹಾಕಲು ಪ್ರಯತ್ನ ಮಾಡುತ್ತಿದೆ. ಹಲವು ಬಾರಿ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರು ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದಾರೆ,’’ ಎಂದು ಗುರುವಾರ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಹಿಂದುಳಿದ ವರ್ಗಗಳಿಗೆ (ಬಿಸಿ) ಮೀಸಲಾತಿಯನ್ನು ಪ್ರಸ್ತಾಪಿಸಿದ ಮಂಡಲ್ ಆಯೋಗದ ವರದಿಯ ಅನುಷ್ಠಾನವನ್ನು ಬಿಜೆಪಿ ಈ ಹಿಂದೆ ಸ್ಥಗಿತಗೊಳಿಸಿತ್ತು ಎಂದು ಈ ವೇಳೆ ತಿಳಿಸಿದ್ದಾರೆ. ಎಸ್‌ಸಿ, ಎಸ್‌ಟಿ ಮತ್ತು ಬಿಸಿ ಸಮುದಾಯಗಳಿಗೆ ಕೋಟಾಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಸಂಖ್ಯಾಬಲ ಹೊಂದಲು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವುದು ಬಿಜೆಪಿ ಗುರಿಯಾಗಿದೆ. ಅದೇ ಕಾರಣಕ್ಕೆ ಬಿಜೆಪಿ ‘ಅಬ್ಕಿ ಬಾರ್ 400 ಪಾರ್’ ಎಂದು ಹೇಳುತ್ತಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

"ಮೀಸಲಾತಿಯನ್ನು ರದ್ದುಪಡಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯನ್ನು ಕೆಲವೇ ಜನರು ಬೆಂಬಲಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆಗಳು ಎಸ್‌ಸಿ, ಎಸ್‌ಟಿ, ಬಿಸಿ ಮೀಸಲಾತಿಯ ಜನಾಭಿಪ್ರಾಯ" ಎಂದು ಅವರು ಹೇಳಿದರು. ಬುಧವಾರ ಮಧ್ಯಪ್ರದೇಶದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿ ಕುರಿತು ಕಾಂಗ್ರೆಸ್ ಪಕ್ಷದ ನಿಲುವನ್ನು ಟೀಕಿಸಿದ ನಂತರ ರೆಡ್ಡಿ ಅವರ ಈ ಹೇಳಿಕೆ ಬಂದಿದೆ. ಮುಸ್ಲಿಮರಿಗೆ ಮೀಸಲಾತಿ ನೀಡೋದನ್ನು ಖಾತ್ರಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ, ರೇವಂತ್‌ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

Tap to resize

Latest Videos

'ಮಧ್ಯಮ ವರ್ಗವದರು ಸ್ವಾರ್ಥಿಗಳು..' To 'ಪಿತ್ರಾರ್ಜಿತ ತೆರಿಗೆ' ಕಾಂಗ್ರೆಸ್‌ಗೆ Sam Pitroda ಸೆಲ್ಫ್‌ ಗೋಲ್‌!

ಒಬಿಸಿಗಳಿಗೆ ಮೀಸಲಾತಿಯನ್ನು ದುರ್ಬಲಗೊಳಿಸುವುದರ ಕುರಿತಾಗಿಯೂ ಪ್ರಧಾನಿ ಎಚ್ಚರಿಕೆ ನೀಡಿದರು, ಕರ್ನಾಟಕದಲ್ಲಿ ಮುಸ್ಲಿಮರನ್ನು ಈ ವರ್ಗದ ಅಡಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳಿಸಿದೆ ಎಂದಿದ್ದಾರೆ. "ಕಾಂಗ್ರೆಸ್ ಎಸ್‌ಸಿ/ಎಸ್‌ಟಿ/ಒಬಿಸಿಗಳಿಂದ ಮೀಸಲಾತಿಯನ್ನು ಕಿತ್ತು ತನ್ನ ವಿಶೇಷ ವೋಟ್ ಬ್ಯಾಂಕ್‌ಗೆ ನೀಡಲು ಬಯಸುತ್ತದೆ" ಎಂದು ಪ್ರಧಾನಿ ಮೋದಿ ಆರೋಪಿಸಿದರು, ಧರ್ಮದ ಆಧಾರದ ಮೇಲೆ ಮೀಸಲಾತಿ ನೀತಿಗಳನ್ನು ರಾಜಕೀಯಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

'ರಾಮ, ಹನುಮಂತ, ದೇವಸ್ಥಾನ ನಿಮಗೆ ಕೆಲ್ಸ ಕೊಡಿಸೋದಿಲ್ಲ..' ವಿವಾದ ಎಬ್ಬಿಸಿದ ಸ್ಯಾಮ್‌ ಪಿತ್ರೋಡಾ ಹೇಳಿಕೆ!

ಕಾಂಗ್ರೆಸ್ ನ ಈ ಕ್ರಮ ಇಡೀ ದೇಶದ ಒಬಿಸಿ ಸಮುದಾಯಗಳಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ಮೋದಿ ಹೇಳಿದ್ದರು. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ಸಂವಿಧಾನ ರಚನೆ ಮಾಡಿದ್ದ ವ್ಯಕ್ತಿಗಳು ಸ್ಪಷ್ಟವಾಗಿ ನಿರ್ಧರಿಸಿದ್ದಾರೆ ಎಂದು ಪ್ರಧಾನಿ ತಿಳಿಸಿದ್ದರು.
 

click me!