'ದೇಶದಲ್ಲಿ ರಾಹುಲ್ ರಿಂದ ಮಾತ್ರ ಪ್ರಜಾಪ್ರಭುತ್ವ ಮರುಸ್ಥಾಪನೆ ಸಾಧ್ಯ'

Published : Dec 21, 2020, 08:48 PM IST
'ದೇಶದಲ್ಲಿ ರಾಹುಲ್ ರಿಂದ ಮಾತ್ರ ಪ್ರಜಾಪ್ರಭುತ್ವ ಮರುಸ್ಥಾಪನೆ ಸಾಧ್ಯ'

ಸಾರಾಂಶ

ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ಅವರಿಂದ ಮಾತ್ರ ಸಾಧ್ಯ/ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಸೂಕ್ತ ವ್ಯಕ್ತಿ/ ಸೋನಿಯಾ ಗಾಂಧಿಗೆ ಪತ್ರ ಬರೆದ ತೆಲಂಗಾಣ ಕಾಂಗ್ರೆಸ್

ಹೈದರಾಬಾದ್(ಡಿ. 21)  ಈ ದೇಶದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪನೆ ಮಾಡಲು ರಾಹುಲ್ ಗಾಂಧಿ ಅವರಿಂದ ಮಾತ್ರ ಸಾಧ್ಯ ಎಂದು ತೆಲಂಗಾಣ ಕಾಂಗ್ರೆಸ್ ಹೇಳಿದೆ.

ರಾಹುಲ್ ಗಾಂಧಿ ಅವರಿಗೆ ಪಕ್ಷ ಮುನ್ನಡೆಸಲು ಅವಕಾಶ ಮಾಡಿಕೊಡಬೇಕು ಎಂದು  ಹೇಳಿದೆ. ರಾಹುಲ್ ಸಹ ತಾವು ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ  ಎಂದು ಹೇಳಿದ್ದರು. ಗೊಂದಲಗಳನ್ನು ಬಗೆಹರಿಸಲು ಸಭೆ ಕರೆದಿರುವ ಸೋನಿಯಾ ಗಾಂಧಿ ಅವರಿಗೂ ಧನ್ಯವಾದ ಸಲ್ಲಿಕೆ ಮಾಡಿದೆ.

ಮತ್ತೆ ರಾಹುಲ್ ಜಪ ಶುರುವಾಗಿದ್ದು  ಯಾಕೆ? 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗೆ ಬರೆದ ಪತ್ರದಲ್ಲಿ ಧನ್ಯವಾದ ಸಲ್ಲಿಸಿರುವ ತೆಲಂಗಾಣ ಕಾಂಗ್ರೆಸ್, ಚಿಂತನ್ ಬೈಠಕ್ ಗೆ ಎಲ್ಲರನ್ನು ಕರೆದಿದ್ದನ್ನು ಸ್ವಾಗತ ಮಾಡಿದೆ.

ದೇಶದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಆರ್ಥಿಕ ವ್ಯವಸ್ಥೆ ಹಳ್ಳ ಹಿಡಿದಿದೆ.  ರಾಹುಲ್ ಅಧ್ಯಕ್ಷರಾದರೆ ಈ ಎಲ್ಲ ಸಮಸ್ಯೆಗಳಿಂದ ಹೊರಗೆ ತರಬಲ್ಲರು. ಪ್ರಜಾಪ್ರಭುತ್ವ ಮರುಸ್ಥಾಪನೆ ರಾಹುಲ್ ಅವರಿಂದಲೇ ಸಾಧ್ಯ ಎಂದು  ಕೊಂಡಾಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ