
ಹೈದರಾಬಾದ್[ಫೆ.28]: ಸರ್ಕಾರಿ ಆಸ್ಪತ್ರೆಯಲ್ಲಿದ್ದ ತನ್ನ ಮಗಳ ಶವ ವಾಪಸ್ ಕೊಡಿ ಎಂದು ಗೋಳಿಡುತ್ತಿದ್ದ ತಂದೆ ಮೇಲೆ ಪೊಲೀಸ್ ಅಧಿಕಾರಿಯೋರ್ವ ಬೂಟುಗಾಲಿನಿಂದ ಒದ್ದು, ಎಳೆದಾಡಿದ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದ್ದು, ಈ ಕೃತ್ಯವೆಸಗಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಸರ್ಕಾರ ಸೂಚನೆ ನೀಡಿದೆ.
ಮಗಳ ಶವಕ್ಕಾಗಿ ಗೋಳಿಟ್ಟ ವ್ಯಕ್ತಿಗೆ ಬೂಟುಗಾಲಿಂದ ಒದ್ದ ಪೊಲೀಸ್ ಅಮಾನತು!
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ ನಾರಾಯಣ್ ಜೂನಿಯರ್ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ಸಂಧ್ಯಾರಾಣಿ(16) ಎಂಬ ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದಳು. ಆದರೆ, ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ತಮ್ಮ ಪುತ್ರಿಯ ಸಾವಿಗೆ ಕಾರಣ ಎಂದು ವಿದ್ಯಾರ್ಥಿನಿ ಪೋಷಕರು ದೂರಿದ್ದು, ಆಕೆಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರದಿಂದ ಹೊರತಂದು ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಸಂತ್ರಸ್ತೆ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು.
ಈ ವೇಳೆ ಸಂತ್ರಸ್ತೆಯ ತಂದೆ, ಹೆಣಕ್ಕೆ ಅಡ್ಡಲಾಗಿ ಬಿದ್ದಿದ್ದು, ಪೊಲೀಸ್ ಅಧಿಕಾರಿಯೊಬ್ಬ ಆತನ ಹಣೆಗೆ ಬೂಟುಗಾಲಿನಿಂದ ಒದ್ದಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ