ತೆಲಂಗಾಣ ರಾಜ್ಯಪಾಲೆ ಸೌಂದರರಾಜನ್ ರಾಜೀನಾಮೆ, ಲೋಕಸಭೆಗೆ ಸ್ಪರ್ಧೆ ಸಾಧ್ಯತೆ!

By Suvarna NewsFirst Published Mar 18, 2024, 5:08 PM IST
Highlights

ತೆಲಂಗಾಣ ರಾಜ್ಯಪಾಲೆ ತಮಿಳಿಸೈನ ಸೌಂದರಾಜನ್ ರಾಜೀನಾಮೆ ನೀಡಿದ್ದಾರೆ. ಮೂಲತಹ ತಮಿಳುನಾಡಿನ ಸೌಂದರರಾಜನ್ ತಮಿಳುನಾಡಿನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ನವದೆಹಲಿ(ಮಾ.18) ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ರಾಜ್ಯಪಾಲೆ ತಮಿಳುಸೈ ಸೌಂದರರಾಜನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಲ್ಲಿಸಿದ್ದಾರೆ. ರಾಜೀನಾಮೆ ಕುರಿತು ರಾಜಭನ ಅಧಿಕೃತ ಪ್ರಕಟಣೆ ಹೊರಡಿಸಿದೆ. ದಿಢೀರ್ ರಾಜೀನಾಮೆ ಇದೀಗ ಹಲವು ಕುತೂಹಕ್ಕೆ ಕಾರಣವಾಗಿದೆ. ರಾಜೀನಾಮೆ ನೀಡಿರುವ  ಸೌಂದರರಾಜನ್ ತಮಿಳುನಾಡಿನಿಂದ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳುತ್ತಿವೆ. 

2019ರ ವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷೆಯಾಗಿ ಜವಾಬ್ದಾರಿ ನಿರ್ವಹಿಸಿದ್ದ ತಮಿಳಿಸೈ ಸೌಂದರರಾಜನ್ ಅವರನ್ನು ಕೇಂದ್ರ ಸರ್ಕಾರ ತೆಲಂಗಾಣಕ್ಕೆ ರಾಜ್ಯಪಾಲೆಯಾಗಿ ನೇಮಕ ಮಾಡಿತ್ತು. ಪುದುಚೇರಿಗೆ ಲೆಫ್ಟಿನೆಂಟ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ತಮಿಳುಸೈ ಸೌಂದರರಾಜನ್ ಸ್ಪರ್ಧಿಸಿದ್ದರು. ತೂತುಕುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೌಂದರರಾಜನ್, ಡಿಎಂಕೆ ನಾಯಕಿ ಕನ್ನಿಮೋಳಿ ವಿರುದ್ಧ ಮುಗ್ಗರಿಸಿದ್ದರು.

ವಿಮಾನದಲ್ಲಿ ಪ್ರಯಾಣಿಕನ ಆರೋಗ್ಯ ಏರುಪೇರು, ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ ರಾಜ್ಯಾಪಾಲೆ!

2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಸೌಂದರರಾಜನ್ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ತಮಿಳುನಾಡಿನಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಾಯಕತ್ವದಿಂದ ತಮಿಳುನಾಡು ಹೊಸ ರಾಜಕೀಯ ಅಧ್ಯಾ ಬರೆಯುತ್ತಿದೆ. ಹೀಗಾಗಿ ತಮಿಳುನಾಡಿನಲ್ಲಿ ಜನಪ್ರಿಯ ಹಾಗೂ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಸದ್ಯ ಸೃಷ್ಟಿಯಾಗಿರುವ ಬಿಜೆಪಿ ಪರ ಅಲೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಕೇಂದ್ರ ಬಿಜೆಪಿ ನಾಯಕರು ಮುಂದಾಗಿದ್ದಾರೆ. 

62 ವರ್ಷದ ಸೌಂದರರಾಜನ್ ದಕ್ಷಿಣ ಚೆನ್ನೈ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ತೆಲಂಗಾಣದ ಜಾಗಿತಲ್ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ ಮಾಡಿದ ಮರುದಿನವೇ ರಾಜ್ಯಾಪಲೆ ಸೌಂದರರಾಜನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 2019ರ ನವೆಂಬರ್ ತಿಂಗಳಲ್ಲಿ ಸೌಂದರರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲೆಯಾಗಿ ನೇಮಕ ಮಾಡಲಾಗಿತ್ತು. 2021ರಲ್ಲಿ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಸ್ಥಾನವನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು.

 

ಸರ್ಕಾರದ ವತಿಯಿಂದ ಗಣರಾಜ್ಯೋತ್ಸವ ಆಚರಿಸದ ತೆಲಂಗಾಣ, ಹೈಕೋರ್ಟ್‌ ಆದೇಶ ಉಲ್ಲಂಘಿಸಿದ ಕೆಸಿಆರ್‌!

ಬಿಜೆಪಿ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಅಂತಿಮ ಕ್ಷಣದಲ್ಲಿ ಕೆಲ ಬದಲಾವಣೆ ಮಾಡಿರುವ ಕೇಂದ್ರ ಬಿಜೆಪಿ, ತಮಿಳುನಾಡಿನಲ್ಲಿ ಪ್ರಮುಖ ನಾಯಕರಿಗೆ ಸ್ಥಾನ ನೀಡಲು ಮುಂದಾಗಿದೆ. ಈ ನಿಟ್ಟಿಲ್ಲಿ ಸೌಂದರರಾಜನ್ ಅವರಿಗೆ ಮತ್ತೊಂದು ಅವಕಾಶ ನೀಡಲು ಬಿಜೆಪಿ ಮುಂದಾಗಿದೆ ಎಂದು ಮೂಲಗಳು ಹೇಳುತ್ತಿವೆ. ಈ ಬಾರಿ ಕ್ಷೇತ್ರ ಬದಲಿಸಿ ಸೌಂದರರಾಜನ್ ಗೆಲ್ಲಿಸಲು ಬಿಜೆಪಿ ಹೊಸ ಪ್ಲಾನ್ ಮಾಡಿದೆ.

click me!