
ಹೈದರಾಬಾದ್ (ಫೆ.19): ರಂಜಾನ್ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿಯಿಂದ 1 ಗಂಟೆ ಮುಂಚೆ ತೆರಳಬಹುದು ಎಂದು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ಮಾರ್ಚ್ 2 ರಿಂದ 31 ರವರೆಗೆ ಈ ನಿಯಮವು ಜಾರಿಯಲ್ಲಿರಲಿದೆ. ಮುಸ್ಲಿಂ ಉದ್ಯೋಗಿಗಳಿಗೆ ಸಂಜೆ 5 ಗಂಟೆಯ ಬದಲು 4 ಗಂಟೆಗೆ ಕೆಲಸದಿಂದ ಬಿಡುವು ಸಿಗಲಿದೆ. ಶಿಕ್ಷಕರು, ಗುತ್ತಿಗೆ ಮತ್ತು ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಮುಸ್ಲಿಂ ಉದ್ಯೋಗಿಗಳಿಗೆ ಮತ್ತು ಮಂಡಳಿಗಳು, ನಿಗಮಗಳು ಮತ್ತು ಸಾರ್ವಜನಿಕ ಕೆಲಸದಲ್ಲಿ ಕೆಲಸ ಮಾಡುವ ನೌಕರರಿಗೆ ಅನ್ವಯಿಸುತ್ತದೆ. ರಂಜಾನ್ ಉಪವಾಸದ ತಿಂಗಳಿನಲ್ಲಿ ತಮ್ಮ ಧಾರ್ಮಿಕ ಕರ್ತವ್ಯಗಳು ಮತ್ತು ಪ್ರಾರ್ಥನೆಗಳನ್ನು ಬೆಂಬಲಿಸಲು ಈ ಕ್ರಮ ಎಂದು ಸರ್ಕಾರ ಹೇಳಿದೆ.
ಈ ನಡುವೆ ಸರ್ಕಾರದ ಕ್ರಮವನ್ನು ಟೀಕಿಸಿರುವ ಬಿಜೆಪಿ ಶಾಸಕ ಟಿ.ರಾಜಾ, ‘ಕಾಂಗ್ರೆಸ್ ಕೇವಲ ಮುಸ್ಲಿಂ ಮತಗಳನ್ನು ಅವಲಂಬಿಸಿ ಅಧಿಕಾರವನ್ನು ಗಳಿಸಿದೆ. ಇಂಥ ನಿರ್ಧಾರ ತುಷ್ಟೀಕರಣದ ರಾಜಕೀಯ ಉತ್ತುಂಗವನ್ನು ಪ್ರತಿನಿಧಿಸುತ್ತದೆ’ ಎಂದಿದ್ದಾರೆ.
ಇದನ್ನೂ ಓದಿ: ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ
ಇನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯ ಪ್ರತಿಕ್ರಿಯಿಸಿ ‘ನವರಾತ್ರಿಯಂತಹ ಹಬ್ಬಗಳಲ್ಲಿ ಹಿಂದೂಗಳು ಉಪವಾಸವನ್ನು ಆಚರಿಸುವಾಗ ಅಂತಹ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಂದು ಸಮುದಾಯದವರ ಧಾರ್ಮಿಕ ಆಚರಣೆಗಳನ್ನು ಸರ್ಕಾರ ಮಾಡುತ್ತಿದೆ. ಈ ಕ್ರಮವನ್ನು ವಿರೋಧಿಸಬೇಕು’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ