
ಹೈದರಾಬಾದ್(ಜೂ.20): ಕೊರೋನಾ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗದಿದ್ದರೆ ಶೀಘ್ರವೇ 3ನೇ ಅಲೆಯು ಭಾರತಕ್ಕೆ ಸುನಾಮಿಯಂತೆ ಅಪ್ಪಳಿಸಲಿದೆ ಎಂಬ ಎಚ್ಚರಿಕೆಗಳ ಬೆನ್ನಲ್ಲೇ, ತೆಲಂಗಾಣವು ಭಾನುವಾರದಿ ಬೆಳಗ್ಗೆ 6ರಿಂದಲೇ ಜಾರಿಯಾಗುವಂತೆ ಸಂಪೂರ್ಣ ಅನ್‌ಲಾಕ್ ಘೋಷಿಸಿದೆ. ಈ ರೀತಿ ಸಂಪೂರ್ಣ ಅನ್‌ಲಾಕ್ ಘೋಷಿಸಿದ ದೇಶದ ಮೊದಲ ರಾಜ್ಯ ತೆಲಂಗಾಣ ಎಂದು ಹೇಳಲಾಗಿದೆ.
ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಸಸ್ಪೆಂಡ್..!
ಇದರ ಜತೆಗೆ ಜು.1ರಿಂದಲೇ ರಾಜ್ಯದ ಶಾಲಾ ಕಾಲೇಜುಗಳ ಕಾರಾರಯರಂಭಕ್ಕೆ ಸೂಚಿಸಲಾಗಿದೆ. ಅಂದರೆ, ಆನ್‌ಲೈನ್ ಕ್ಲಾಸ್‌ಗಳಿಗೆ ತಿಲಾಂಜಲಿ ಹೇಳಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿಗೆ ಅನುಮತಿಸಲಾಗಿದೆ. ಜೊತೆಗೆ ರಾತ್ರಿ ಕರ್ಫ್ಯೂ ಸಹ ಜಾರಿಯಲ್ಲಿರುವುದಿಲ್ಲ ಎಂದು ಸರ್ಕಾರ ಹೇಳಿದೆ.
ಕೃಷ್ಣೆಗಾಗಿ ತೆಲಂಗಾಣ ವಿರುದ್ಧ ರಾಜ್ಯ, ಮಹಾ ಜಂಟಿ ಸಮರ!
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎಂಬ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ವರದಿ ನೀಡಿದೆ. ಜೊತೆಗೆ ನೆರೆಯ ರಾಜ್ಯಗಳಲ್ಲೂ ಸೋಂಕು ನಿಯಂತ್ರಣಕ್ಕೆ ಬಂದಿದೆ. ಹೀಗಾಗಿ, ಲಾಕ್‌ಡೌನ್‌ನಿಂದ ಜನಸಾಮಾನ್ಯರು ಬಳಲಬಾರದು ಎಂಬ ಕಾರಣಕ್ಕೆ ಈ ಕ್ರಮ ಜರುಗಿಸಲಾಗಿದೆ. ಆದರೆ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ