
ನಿಜಾಮಾಬಾದ್(ಏ.06): ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಹನಮ್‌ಜಿತ್‌ಪೇಟ್ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭವೊಂದು ಬರೋಬ್ಬರಿ 87 ಮಂದಿಗೆ ಸೋಂಕು ಹರಡಲು ಕಾರಣವಾಗಿದೆ.
ವಿವಾಹಕ್ಕೆ ಒಟ್ಟು 370 ಮಂದಿ ಭಾಗವಹಿಸಿದ್ದು, ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ 87 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ.
ಮದುವೆಗೆ ಆಗಮಿಸಿದ್ದ ಪಕ್ಕರ ಊರಿನವರಲ್ಲೂ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ನಡುವೆ ನಿಜಾಮಾಬಾದ್‌ನಲ್ಲಿ 24 ತಾಸಿನಲ್ಲಿ 96 ಕೋವಿಡ್ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಲಾಕ್‌ಡೌನ್ ವಿಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ