ಆಪರೇಷನ್ ಮಾಡಿ ಹೊರಗೆ ಕರ್ಕೊಂಡು ಬರ್ತಿದ್ದಂತೆ ಯುವತಿ ಸಾವು

Published : Feb 19, 2020, 07:42 PM ISTUpdated : Feb 19, 2020, 07:48 PM IST
ಆಪರೇಷನ್ ಮಾಡಿ ಹೊರಗೆ ಕರ್ಕೊಂಡು ಬರ್ತಿದ್ದಂತೆ ಯುವತಿ ಸಾವು

ಸಾರಾಂಶ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ್ರೆ, ವೈದ್ಯರು ಆಪರೇಷನ್ ಮಾಡಿದ್ರು. ಆದ್ರೆ, ರೋಗಿಯನ್ನ ಆಪರೇಷನ್ ಥಿಯೇಟರ್‌ನಿಂದ ಹೊರಗೆ ಕರೆದುಕೊಂಡು ಬರುತ್ತಿದ್ದಂತೆಯೇ ಮೃತಪಟ್ಟಿರುವ ಘಟನೆ ನಡೆದಿವೆ

ಭುವನೇಶ್ವರ್, (ಫೆ.19): The surgery was successful but the patient died ಎನ್ನುವಂತೆ ಆಪರೇಷನ್ ಮಾಡಿ ರೋಗಿಯನ್ನ ಹೊರಗೆ ಕರ್ಕೊಂಡು ಬರ್ತಿದ್ದಂತೆ ಯುವತಿ ಸಾವನ್ನಪ್ಪಿದ್ದಾಳೆ

ಹೌದು...ವೈದ್ಯರು ಯುವತಿಯೋರ್ವಳ ಆಪರೇಷನ್ ಮಾಡಿದ್ದಾರೆ. ಆದರೆ ಆಪರೇಷನ್ ಥಿಯೇಟರ್‌ನಿಂದ ಹೊರಗೆ ಕರೆದುಕೊಂಡು ಬರುವಾಗ ಯುವತಿ ಮೃತಪಟ್ಟಿದ್ದಾಳೆ.

ಈ ಘಟನೆ ಒಡಿಶಾದ ಬೆರ್ಹಾಂಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆಂದು ಆಕೆ ಸಂಬಂಧಿಕರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಯಾಬಜಾರ್ ಟ್ರೇಲರ್ ಹೊರಬಿತ್ತು, ಸ್ನಾನಕ್ಕೆ ಹೋದ ಚೆಲುವೆಗೆ ಫೋನ್ ಆಪತ್ತು; ಫೆ.19ರ ಟಾಪ್ 10 ಸುದ್ದಿ!

ಐಶ್ವರ್ಯ ಸಿಂಗ್ ಡಿಯೋ (24) ಮೃತ ಯುವತಿ. ಮಂಗಳವಾರ ಸಂಜೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಐಶ್ವರ್ಯಳನ್ನ ಗುರುದೇವ್ ಆಸ್ಪತ್ರೆಗೆ ಕುಟುಂಬದವರು ದಾಖಲಿಸಿದ್ದರು. ವೈದ್ಯರು ಪರೀಕ್ಷಿಸಿ ಯುವತಿಗೆ ಅಪೆಂಡಿಕ್ಸ್ ಇದ್ದು,  ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. 

ಆಪರೇಷನ್‌ಗೆ ಯುವತಿಯ ಪೋಷಕರು ಒಪ್ಪಿದ್ದು, ವೈದ್ಯರು ಐಶ್ವರ್ಯಗೆ ಆಪರೇಷನ್ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ಆಪರೇಷನ್ ಥಿಯೇಟರ್‌ನಿಂದ ಹೊರಗೆ ಕರೆದುಕೊಂಡು ಬರುವಾಗ ಯುವತಿ ಮೃತಪಟ್ಟಿದ್ದಾಳೆ. 

ಈ ಹಿನ್ನೆಲೆಯಲ್ಲಿ ಯುವತಿಯ ಸಂಬಂಧಿಕರು ಮತ್ತು ಸ್ಥಳೀಯರಿಂದ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್