ಪೆಹಲ್ಗಾಂ ಬಳಿಕ ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ, ಅಮರನಾಥ ಭದ್ರತಾ ಪೊಲೀಸ್ ಸಾವು

Published : Jul 22, 2026, 03:27 PM IST
jammu kashmir

ಸಾರಾಂಶ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಬಳಿ ಭಯೋತ್ಪಾದಕ ದಾಳಿ ನಡೆದಿದೆ. ಪೊಲೀಸ್ ಪಾರ್ಟಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ಪೊಲೀಸ್ ಮೃತಪಟ್ಟಿದ್ದಾರೆ. ದಾಳಿ ಬೆನ್ನಲ್ಲೇ ಅಮರನಾಥ ಯಾತ್ರೆಗೆ ಹೆಚ್ಚಿನ ಸೆಕ್ಯೂರಿಟಿ ನೀಡಲಾಗಿದೆ.

ಶ್ರೀನಗರ (ಜು.22) ಪೆಹಲ್ಗಾಂ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರದ ಭದ್ರತಾ ವಿಧಾನದಲ್ಲಿ ಕೆಲ ಮಾರ್ಪಾಡು ಮಾಡಲಾಗಿತ್ತು. ಬಳಿಕ ಕಣಿವೆ ರಾಜ್ಯದಲ್ಲಿ ಭದ್ರತೆ ತೀವ್ರಗೊಳಿಸಲಾಗಿದೆ. ಇದರ ನಡುವೆ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆ, ಕೂಬಿಂಗ್ ವೇಳೆ ಉಗ್ರರ ಜೊತೆ ಚಕಮಕಿ ನಡೆದಿದೆ. ಉಗ್ರರು ಹತ್ಯೆಯಾಗಿದ್ದಾರೆ, ಪೊಲೀಸ್, ಯೋಧರು ಹುತಾತ್ಮರಾಗಿದ್ದಾರೆ. ಇದೀಗ ಪೊಲೀಸ್ ಪಾರ್ಟಿ ಮೇಲೆ ಉಗ್ರರು ದಾಳಿ ನಡೆಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಅಮರನಾಥ ಯಾತ್ರೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಮೃತಪಟ್ಟ ಘಟನೆ ನಡೆದಿದೆ.

ಅನಂತನಾಗ್ ಬಳಿ ಲಾಲ್ ಚೌಕ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಮಧ್ಯಾಹ್ಮ 12.30ಕ್ಕೆ ದಾಳಿ ನಡೆದಿದೆ. ಬದ್ಗಾಂ ಜಿಲ್ಲೆಯ ಪೊಲೀಸ್ ಆಶಿಖ್ ಹುಸೈನ್ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ತಕ್ಷಣವೇ ಗಾಯಾಳು ಪೊಲೀಸ್‌ನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡ ಕಾರಣ ಆಶೀಖ್ ಹುಸೈನ್ ಮೃತಪಟ್ಟಿದ್ದಾರೆ.

ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತೆ

ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತೆ ನೀಡಲಾಗಿತ್ತು. ಅಮರನಾಥ ಯಾತ್ರಾರ್ಥಿಗಳ ಭದ್ರತೆಗೆ ನಿಯೋಜನೆಗೊಂಡ ಪೊಲೀಸ್ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಈ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸವಾಲು ಎದುರಾಗಿದೆ. ಈ ದಾಳಿ ಬೆನ್ನಲ್ಲೇ ಲಾಲ್ ಚೌಕ್ ಸೇರಿದಂತೆ ಅನಂತನಾಗ್ ಏರಿಯಾದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಇತ್ತ ಅಮರನಾಥ ಯಾತ್ರೆಗೆ ಭದ್ರತೆ ಹೆಚ್ಚಿಸಲಾಗಿದೆ.

ಲಷ್ಕರ್ ಇ ತೈಬಾ ಸಂಘಚನೆಯ TRF ದಾಳಿ

ಘಟನೆ ಬೆನ್ನಲ್ಲೇ ಲಷ್ಕರ್ ಇ ತೈಬಾ ಉಗ್ರ ಸಂಘಟನೆಯ ಅಂಗ ಸಂಘಟನೆ ಜಿ ರೆಸಿಸ್ಟೆನ್ಸ್ ಫ್ರಂಟ್ (TRF) ಸೋಶಿಯಲ್ ಮೀಡಿಯಾದಲ್ಲಿ ದಾಳಿ ಹೊಣೆ ಹೊತ್ತುಕೊಂಡಿದೆ. ಒಂದಂಡೆ ಅಮರನಾಥ ಯಾತ್ರೆ ನಡೆಯುತ್ತಿದ್ದಂತೆ ಇತ್ತ ದಾಳಿ ನಡೆದಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾಂಗ್ರೆಸ್‌ನಿಂದ ದೇಶ ಒಡೆಯಲು ಯತ್ನ, ರಾಹುಲ್ ಗಾಂಧಿ ವಿದೇಶಿ ಭೇಟಿ ಬಗ್ಗೆ ತನಿಖೆಯಾಗಲಿ: ಸಂಸದ ನಿಶಿಕಾಂತ್ ದುಬೆ
PAN Card 2.0: ಹಳೆ ಪ್ಯಾನ್ ಕಾರ್ಡ್‌ಗಳು ರದ್ದಾಗಲಿವೆಯೇ? ಹೊಸ ಇ-ಪ್ಯಾನ್ ಕಾರ್ಡ್ ಪಡೆಯೋದು ಹೇಗೆ? ಇಲ್ಲಿದೆ ಮಾಹಿತಿ