Breaking: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಸಾವು!

Published : Apr 22, 2025, 05:59 PM IST
Breaking: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಸಾವು!

ಸಾರಾಂಶ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು ಶಿವಮೊಗ್ಗದ ಉದ್ಯಮಿ ಮಂಜುನಾಥ್‌ ರಾವ್‌ ಮೃತಪಟ್ಟಿದ್ದಾರೆ. ಧರ್ಮ ಕೇಳಿ ಗುಂಡು ಹಾರಿಸಿದ ಭಯೋತ್ಪಾದಕರು 12 ಮಂದಿಗೆ ಗಾಯಗೊಳಿಸಿದ್ದಾರೆ. ಸೇನಾ ಸಮವಸ್ತ್ರ ಧರಿಸಿದ್ದ ಇಬ್ಬರು ಉಗ್ರರು ಪರಾರಿಯಾಗಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿವೆ. ಪ್ರಧಾನಿ ಮೋದಿ, ಅಮಿತ್ ಶಾಗೆ ಸ್ಥಳಕ್ಕೆ ಭೇಟಿ ನೀಡಲು ಸೂಚಿಸಿದ್ದಾರೆ.

ಶ್ರೀನಗರ (ಏ.22): ಜಮ್ಮು ಕಾಶ್ಮೀರದ ಪಹಲ್ಗಮ್‌ನಲ್ಲಿ ಮಂಗಳವಾರ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, 12 ಮಂದಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸಾವು ಕಂಡಿದ್ದಾರೆ. ಮಂಜುನಾಥ್‌ ರಾವ್‌ ತಮ್ಮ ಪತ್ನಿ ಪಲ್ಲವಿ ಹಾಗೂ ಮಗ ಸುರಕ್ಷಿತ್‌ ಜೊತೆ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು.

ಹೆಸರು ಮತ್ತು ಧರ್ಮ ಕೇಳಿ ದಾಳಿ: ರಸ್ತೆ ಬದಿಯಲ್ಲಿ ಪಾನಿಪೂರಿ ತಿನ್ನುತ್ತಿದ್ದ ವೇಳೆ ಅವರ ಬಳಿ ಬಂದ ಭಯೋತ್ಪಾದಕರು ಹೆಸರು ಹಾಗೂ ಧರ್ಮವನ್ನು ಕೇಳಿದ್ದಾರೆ. ಅದರ ಬೆನ್ನಲ್ಲಿಯೇ ಮಂಜುನಾಥ್‌ ರಾವ್‌ ತೆಲೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದರು. ದಾಳಿಯಲ್ಲಿ ಒಬ್ಬ ಪ್ರವಾಸಿಗ ಸಾವನ್ನಪ್ಪಿರುವುದು ಸ್ಥಳೀಯ ಮಾಧ್ಯಮಗಳು ಖೂಡ ಖಚಿತಪಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಇಬ್ಬರು ಭಯೋತ್ಪಾದಕರು ಸೇನಾ ಸಮವಸ್ತ್ರದಲ್ಲಿ ಬಂದಿದ್ದರು. ಮೊದಲು ಪ್ರವಾಸಿಗನ ಹೆಸರನ್ನು ಕೇಳಿದರು, ನಂತರ ಅವನ ತಲೆಗೆ ಗುಂಡು ಹಾರಿಸಿದ್ದು, ಬಳಿಕ ಇತರರ ಮೇಲೆ ಗುಂಡು ಹಾರಿಸುತ್ತಾ ಪರಾರಿಯಾಗಿದ್ದಾರೆ.

ಅಧಿಕಾರಿಗಳ ಪ್ರಕಾರ, ಬೈಸರನ್ ಕಣಿವೆಯಲ್ಲಿ ಈ ಘಟನೆ ನಡೆದಿದ್ದು, ಇದರಲ್ಲಿ 8 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರು ಸ್ಥಳೀಯರು ಕೂಡ ಇದ್ದಾರೆ. ಆದಾಗ್ಯೂ, ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಗಾಯಗೊಂಡವರ ಸಂಖ್ಯೆ 12 ಎನ್ನಲಾಗಿದೆ.

ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ. ಹೆಲಿಕಾಪ್ಟರ್‌ಗಳ ಮೂಲಕ ಪ್ರದೇಶವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Pahalgam Terrorist Attack: ನಾಲ್ವರು ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ!

ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಅಮಿತ್‌ ಶಾಗೆ ಮೋದಿ ಸೂಚನೆ: ಘಟನೆಯ ಕುರಿತು ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾದಿಂದ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಸ್ಥಳಕ್ಕೆ ಭೇಟಿ ನೀಡುವಂತೆ ಅವರು ಶಾ ಅವರಿಗೆ ಸೂಚಿಸಿದ್ದಾರೆ. ಪ್ರಧಾನಿ ಅವರೊಂದಿಗೆ ಮಾತನಾಡಿದ ನಂತರ, ಶಾ ಅವರು ದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 6 ರಿಂದ 8 ರವರೆಗೆ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.

ಜಮ್ಮುವಿನಲ್ಲಿ ಮೇಘಸ್ಫೋಟ: 3 ಸಾವು, 100ಕ್ಕೂ ಹೆಚ್ಚು ಜನರ ರಕ್ಷಣೆ, ರಾಷ್ಟ್ರೀಯ ಹೆದ್ದಾರಿ ಸ್ಥಗಿತ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ