ಕಾಶ್ಮೀರದಲ್ಲಿ ಹೊಸ ಸರ್ಕಾರ ರಚನೆ ಬೆನ್ನಲ್ಲೇ ವಲಸೆ ಕಾರ್ಮಿಕರ ಮೇಲೆ ಉಗ್ರರ ದಾಳಿ!

By Chethan Kumar  |  First Published Oct 20, 2024, 10:25 PM IST

ಜಮ್ಮು ಮತ್ತು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ಸರ್ಕಾರ ಆಡಳಿತಕ್ಕೆ ಬಂದಿದೆ. ಆದರೆ ಸರ್ಕಾರ ರಚನೆಯಾದ ಕೆಲವೇ ದಿನದಲ್ಲಿ ವಲಸೆ ಕಾರ್ಮಿಕರ ಗುರಿಯಾಗಿಸಿ ಉಗ್ರರ ದಾಳಿಯಾಗಿದೆ. ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಶ್ರೀನಗರ(ಅ.20) ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆದು ಇದೀಗ ಹೊಸ ಸರ್ಕಾರ ರಚನೆಯಾಗಿದೆ. ಒಮರ್ ಅಬ್ದುಲ್ಲಾ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯಾಗಿದೆ. ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂದೇಬರಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸೋನ್‌ಮಾರ್ಗ್‌ನ ಗುಂದಾ ವಲಯದ ಬಳಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ. ಖಾಸಗಿ ಕಂಪನಿ ಸುರಂ ಕಾಮಗಾರಿಯಲ್ಲಿ ತೊಡಗಿದೆ. ಇಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರು ವಾಸಿಸುತ್ತಿದ್ದ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸ್ಥಳದಲ್ಲೇ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Latest Videos

undefined

ಜಮ್ಮು ಕಾಶ್ಮೀರದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

ವಲಸೆ ಕಾರ್ಮಿಕರು ಹಾಗೂ ಹೊರ ರಾಜ್ಯದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಬಂದು ಕೆಲಸ ಮಾಡುತ್ತಿರುವವ ಮೇಲೆ ಸತತ ದಾಳಿಗಳು ನಡೆಯುತ್ತಿದೆ. ಈ ರೀತಿ 2024ರಲ್ಲಿ ನಡೆದ 5ನೇ ದಾಳಿ ಇದಾಗಿದೆ. ದಾಳಿಯನ್ನು ಖಂಡಿಸಿದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ , ವಲಸೆ ಕಾರ್ಮಿಕರ ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಯಾವುದೇ ರೀತಿಯ ದಾಳಿಗೆ ಜಮ್ಮು ಕಾಶ್ಮೀರ ಸರ್ಕಾರ ಅವಕಾಶ ನೀಡುವುದಿಲ್ಲ. ಈ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಂತಾಪಗಳು ಎಂದಿದ್ದಾರೆ.

ಸೋನ್‌ಮಾರ್ಗ್ ಬಳಿ ನಡೆದ ಈ ದಾಳಿಯಲ್ಲಿನ ಪ್ರಾಣ ಹಾನಿ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಕಾರ್ಮಿಕರ ಮನೆ ಮೇಲೆ ದಾಳಿ ನಡೆದಿರುವ ಕಾರಣ ಹೆಚ್ಚಿನ ಹಾನಿಯಾಗಿದೆ. ಗಾಯಳುಗಳನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಇತ್ತೀಚೆಗೆ ಬಿಹಾರ ವಲಸೆ ಕಾರ್ಮಿಕ ಅಶೋಕ್ ಚವ್ಹಾಣ್ ಮೃತೇದಹ ಕಾಶ್ಮೀರದ ರಂಬಿಯಾರಾ ನದಿ ಬಳಿ ಪತ್ತೆಯಾಗಿತ್ತು. ಹಲವು ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಈಗಾಗಲೇ ಹಲವು ದಾಳಿಗಳು ನಡೆದಿದೆ. ಓಮರ್ ಅಬ್ದುಲ್ಲಾ ಸರ್ಕಾರ ರಚನೆಯಾದ ಬಳಿಕ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ 2ನೇ ದಾಳಿ ಇದಾಗಿದೆ. ಸ್ಥಳದಲ್ಲಿ ಭಾರತೀಯ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸ್ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ.

BREAKING ಭಯೋತ್ಪಾದಕರಿಂದ ಅಪಹರಿಸಲ್ಪಟ್ಟ ಸೈನಿಕನ ಮೃತದೇಹ ಪತ್ತೆ
 

click me!