ರಜೌರಿಯಲ್ಲಿ ಉಗ್ರರ ಜೊತೆ ಸೇನೆಯ ಎನ್‌ಕೌಂಟರ್,‌ ಮೇಜರ್‌ ಸೇರಿದಂತೆ 3 ಸೈನಿಕರು ಹುತಾತ್ಮ

Published : Nov 22, 2023, 07:20 PM ISTUpdated : Nov 22, 2023, 07:34 PM IST
 ರಜೌರಿಯಲ್ಲಿ ಉಗ್ರರ ಜೊತೆ ಸೇನೆಯ ಎನ್‌ಕೌಂಟರ್,‌ ಮೇಜರ್‌ ಸೇರಿದಂತೆ 3 ಸೈನಿಕರು ಹುತಾತ್ಮ

ಸಾರಾಂಶ

ರಾಜೌರಿ ಜಿಲ್ಲೆಯ ಕಲಾಕೋಟ್‌ನ ಬಾಜಿಮಲ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆಯಿಂದ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ.

ನವದೆಹಲಿ (ನ.22): ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಬುಧವಾರ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಸೇನಾ ಅಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೂಲಗಳ ಪ್ರಕಾರ ಪ್ರಾಣ ಕಳೆದುಕೊಂಡ ಅಧಿಕಾರಿ ಮೇಜರ್ ಹುದ್ದೆಯಲ್ಲಿದ್ದವರಾಗಿದ್ದಾರೆ. ಆದರೆ, ಇದನ್ನು ಸೇನೆ ಅಧಿಕೃತವಾಗಿ ಖಚಿತಪಡಿಸಿಲ್ಲ. ಸುದ್ದಿ ಸಂಸ್ಥೆ ANI ಪ್ರಕಾರ, ಧರ್ಮಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿಯ ಮೇರೆಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಶೋಧ ಕಾರ್ಯಾಚರಣೆ ನಡೆಸಿದರು. ಅಷ್ಟರಲ್ಲಿ ಕಾಡಿನಲ್ಲಿ ಅಡಗಿದ್ದ ಉಗ್ರರು ಅವರ ಮೇಲೆ ಗುಂಡಿನ ದಾಳಿ ಆರಂಭಿಸಿದ್ದಾರೆ. ಇಲ್ಲಿ ಇಬ್ಬರು ಉಗ್ರರು ಅಡಗಿರುವ ಸುದ್ದಿ ಬಂದಿದ್ದು, ಎನ್‌ಕೌಂಟರ್‌ ಮುಂದುವರಿದಿದೆ. ಬಾಜಿಮಲ್ ಪ್ರದೇಶವು ಪಿರ್ ಪಂಜಾಲ್ ಅರಣ್ಯದ ಪಕ್ಕದಲ್ಲಿದೆ. ಸೇನೆ ಮತ್ತು ಜಮ್ಮು ಪೊಲೀಸರು ಈ ಪ್ರದೇಶದಲ್ಲಿ ಇರುವ ಭಯೋತ್ಪಾದಕರ ಪತ್ತೆಗಾಗಿ ತೀವ್ರ  ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸೇನಾ ಅಧಿಕಾರಿಗಳು ಮತ್ತು ಹೆಚ್ಚುವರಿ ಭದ್ರತಾ ಪಡೆಗಳು ಈಗಾಗಲೇ ಸ್ಥಳಕ್ಕೆ ತಲುಪಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. ಜಮ್ಮು ಮತ್ತು ಕಾಶ್ಮೀರದ ಪಿರ್ ಪಂಜಾಲ್ ಅರಣ್ಯವು ಕಳೆದ ಕೆಲವು ವರ್ಷಗಳಲ್ಲಿ ಸರಣಿ ಎನ್‌ಕೌಂಟರ್‌ಗಳ ನಂತರ ಭದ್ರತಾ ಪಡೆಗಳಿಗೆ ಸವಾಲಾಗಿದೆ. ಭಯೋತ್ಪಾದಕರು ದಟ್ಟವಾದ ಕಾಡುಗಳನ್ನು ತಮ್ಮ ಸ್ಥಾನಗಳನ್ನು ಮರೆಮಾಡಲು ಬಳಸುತ್ತಾರೆ, ಹಾಗೂ ದಟ್ಟಾರಣ್ಯದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುತ್ತಾರೆ. ಭಯೋತ್ಪಾದಕರು ತಮ್ಮ ಸ್ಥಾನಗಳನ್ನು ಮರೆಮಾಡಲು ದೊಡ್ಡ ದೊಡ್ಡ ಪರ್ವತಗಳು, ದಟ್ಟವಾದ ಕಾಡುಗಳು ಮತ್ತು ಆಲ್ಪೈನ್ ಕಾಡುಗಳ ಲಾಭವನ್ನು ಪಡೆದುಕೊಳ್ಳುತ್ತಾರೆ.

ಸಾವಿಗೂ ಮುನ್ನ ಕೊನೆಯದಾಗಿ ಕಂದನ ನೋಡಲು ವಿಡಿಯೋ ಕಾಲ್ ಮಾಡಿದ್ದ ಹುತಾತ್ಮ ಹುಮಾಯುನ್!

ಕಳೆದ ವಾರ, ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಕೊಂದು ಹಾಕಲಾಗಿತ್ತು. ಬುಧಾಲ್ ತೆಹ್ಸಿಲ್‌ನ ಗುಲ್ಲೆರ್-ಬೆಹ್ರೋಟ್ ಪ್ರದೇಶದಲ್ಲಿ ಸೇನೆ, ಪೊಲೀಸ್ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಕಾರ್ಡನ್ ಮತ್ತು ಸರ್ಚ್ ಆಪರೇಷನ್ (ಸಿಎಎಸ್‌ಒ) ಸಮಯದಲ್ಲಿ ಬೆಳಿಗ್ಗೆ ಎನ್‌ಕೌಂಟರ್‌ ನಡೆಸಿ ಉಗ್ರನನ್ನು ಕೊಂದು ಹಾಕಿತ್ತು.

Video: ಕರ್ನಲ್‌ ಮನ್‌ಪ್ರೀತ್‌ ಸಿಂಗ್‌ 6 ವರ್ಷದ ಪುತ್ರನಿಂದ ತಂದೆಗೆ ಕೊನೆ ಸೆಲ್ಯೂಟ್‌, ನೋಡಿ ಕಣ್ಣೀರಿಟ್ಟ ಜನ!


ಇತ್ತೀಚಿನ ಅಪ್‌ಡೇಟ್‌ ಪಕ್ರಾರ: ಭಯೋತ್ಪಾದಕರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಮತ್ತು ಇಬ್ಬರು ಜವಾನರು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರ ಈ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪಿನ ಚಲನವಲನದ ಬಗ್ಗೆ ಮಾಹಿತಿ ಬಂದ ನಂತರ ವಿಶೇಷ ಪಡೆಗಳು ಸೇರಿದಂತೆ ಪಡೆಗಳನ್ನು ನಿಯೋಜಿಸಲಾಗಿದೆ. 16 ಕಾರ್ಪ್ಸ್ ಕಮಾಂಡರ್ ಮತ್ತು ರಾಷ್ಟ್ರೀಯ ರೈಫಲ್ಸ್ ರೋಮಿಯೋ ಫೋರ್ಸ್ ಕಮಾಂಡರ್ ಕಾರ್ಯಾಚರಣೆಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ  ಎಂದು 16 ಕಾರ್ಪ್ಸ್ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!