ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು

Kannadaprabha News   | Kannada Prabha
Published : Nov 11, 2025, 05:22 AM IST
Hafiz Saeed

ಸಾರಾಂಶ

ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ನೇತೃತ್ವದಲ್ಲಿ ಭಾರತದ ಪಾಲಿಗೆ ಮಗ್ಗುಲ ಮುಳ್ಳಾಗುತ್ತಿರುವ ಬಾಂಗ್ಲಾದೇಶ ಇದೀಗ ಭಾರತ ವಿರೋಧಿ ಉಗ್ರರಿಗೂ ನೆಲೆಯಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.

ನವದೆಹಲಿ: ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ನೇತೃತ್ವದಲ್ಲಿ ಭಾರತದ ಪಾಲಿಗೆ ಮಗ್ಗುಲ ಮುಳ್ಳಾಗುತ್ತಿರುವ ಬಾಂಗ್ಲಾದೇಶ ಇದೀಗ ಭಾರತ ವಿರೋಧಿ ಉಗ್ರರಿಗೂ ನೆಲೆಯಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಬಾಂಗ್ಲಾದೇಶವನ್ನ ಬಳಸಿಕೊಂಡು ಭಾರತದ ಮೇಲೆ ದಾಳಿ ನಡೆಸಲು ಲಷ್ಕರ್‌-ಎ-ತೊಯ್ಬಾ ಸಂಘಟನೆಯ ಮುಖ್ಯಸ್ಥ ಹಫೀಸ್‌ ಸೈದ್‌ ಸಂಚು ರೂಪಿಸುತ್ತಿರುವ ಬಗ್ಗೆ ಸ್ವತಃ ಉಗ್ರನೊಬ್ಬ ಬಾಯಿಬಿಟ್ಟಿದ್ದಾನೆ. ಇದರ ಬೆನ್ನಲ್ಲೇ ಬಾಂಗ್ಲಾ ಗಡಿಯಲ್ಲಿ ಭಾರತ ಕಣ್ಗಾವಲು ಹೆಚ್ಚಿಸಿದೆ.

ಪಾಕಿಸ್ತಾನದ ಖೈರ್‌ಪುರ್‌ ತಾಮೆವಾಲಿಯಲ್ಲಿ ನಡೆದ ರ್‍ಯಾಲಿ

ಅ.30ರಂದು ಪಾಕಿಸ್ತಾನದ ಖೈರ್‌ಪುರ್‌ ತಾಮೆವಾಲಿಯಲ್ಲಿ ನಡೆದ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಲಷ್ಕರ್‌ ಕಮಾಂಡರ್‌ ಸೈಫುಲ್ಲಾ ಸೈಫ್, ‘ಭಾರತ ನಡೆಸಿದ ಆಪರೇಷನ್‌ ಸಿಂದೂರದ ಬಳಿಕ ನಮ್ಮ ಮುಖ್ಯಸ್ಥ ಹಫೀಜ್‌ ಸುಮ್ಮನೆ ಕುಳಿತಿಲ್ಲ. ಅವರು ಬಾಂಗ್ಲಾದ ಮೂಲದ ಭಾರತದ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೆಲಸ ಶುರು ಆಗಿದ್ದು, ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಿ ಅವರಿಗೆ ಉಗ್ರ ತರಬೇತಿ ನೀಡಲು ಹಫೀಜ್‌ ತಮ್ಮ ನಿಕಟ ಸಹಚರರೊಬ್ಬರನ್ನು ಬಾಂಗ್ಲಾಗೆ ಕಳಿಸಿಕೊಟ್ಟಿದ್ದಾರೆ’ ಎಂದು ಹೇಳಿದ್ದಾನೆ.

ರ್‍ಯಾಲಿಯಲ್ಲಿ ಮಕ್ಕಳೂ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು

ಸೈಫ್‌ ಭಾರತದ ವಿರುದ್ಧ ಯುದ್ಧಕ್ಕೆ ಕರೆ ನೀಡಿದ ಈ ರ್‍ಯಾಲಿಯಲ್ಲಿ ಮಕ್ಕಳೂ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಎಂಬ ಆತಂಕಕಾರಿ ಅಂಶ ಬಹಿರಂಗವಾಗಿದೆ. ಇದರಿಂದ, ಚಿಕ್ಕಂದಿನಲ್ಲೇ ಮುಗ್ಧ ಮನಸ್ಸುಗಳನ್ನು ಭಾರತದ ವಿರುದ್ಧ ವಿಷದ ಬೀಜ ಬಿತ್ತುವ ಕೆಲಸದಲ್ಲಿ ಉಗ್ರರು ತೊಡಗಿರುವುದು ಸ್ಪಷ್ಟವಾಗಿದೆ.

ಅಮೆರಿಕ ನಮ್ಮ ಪರ:

ಇದೇ ವೇಳೆ ಸೈಫ್‌, ‘ಅಮೆರಿಕ ಪಾಕಿಸ್ತಾನದ ಪರವಾಗಿದೆ. ಅಂತೆಯೇ, ಈಗ ಬಾಂಗ್ಲಾ ಕೂಡ ನಮ್ಮ ಬೆಂಬಲಕ್ಕೆ ನಿಂತಿದೆ’ ಎಂದು ಹೇಳಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ